ಬೀದರ್ | ಅಮಿತ್ ಶಾ ರಾಜೀನಾಮೆಗೆ ದಲಿತ ಹಕ್ಕುಗಳ ಸಮಿತಿ ಆಗ್ರಹ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.18ರಂದು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್‌ ಪಡೆದು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಲಿತ ಹಕ್ಕುಗಳ ಸಮಿತಿ ಆಗ್ರಹಿಸಿದೆ.

ಸೋಮವಾರ ಸಮಿತಿಯ ಪದಾಧಿಕಾರಿಗಳು ಹುಮನಾಬಾದ್ ಪಟ್ಟಣದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಕೇಂದ್ರ ಸರ್ಕಾರ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಾತನಾಡುವ ವೇಳೆ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದರ ಬದಲು ದೇವರ ಹೆಸರು ಹೇಳಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು’ ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ’ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿರುವ ಅವರಿಗೆ ಗೃಹಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆಯು ಇರುವುದಿಲ್ಲ. ನಾಲಿಗೆ ಹರಿಬಿಟ್ಟಿರುವ ಅಮಿತ್ ಶಾ ದೇಶದ ಜನತೆಗೆ ಕ್ಷಮೆ ಕೇಳಬೇಕು. ಹಾಗೆಯೇ ಕೇಂದ್ರ ಸರ್ಕಾರ ಅವರಿಂದ ರಾಜೀನಾಮೆ ಪಡೆದು ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.

ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮಹಿಳೆಯರನ್ನು ತುಚ್ಛವಾಗಿ ಮಾತನಾಡಿರುವುದು ತೀವ್ರವಾಗಿ ಖಂಡಿಸುತ್ತೇವೆ. ಮಹಿಳೆಯರ ಕುರಿತು ಮನುವಾದಿಗಳ ನಡವಳಿಕೆ ಒಪ್ಪಲಾಗದು ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಲೋಕಾಯುಕ್ತ ದಾಳಿ : ಲಂಚ ಪಡೆದ ನೋಟು ನುಂಗಿದ ಸಹಕಾರಿ ಸಂಘಗಳ ಉಪನಿಬಂಧಕ!

ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಸಂಚಾಲಕ ಶಶಿಕಾಂತ್ ಡಾಂಗೆ, ಸಹ ಸಂಚಾಲಕ ಪ್ರಭು ಸಂತೋಷಕರ್ ಹಾಗೂ ಪ್ರಮುಖರಾದ ಅಂಬುಬಾಯಿ ಮಾಳಗೆ, ಗೌಸೋದ್ದೀನ್, ರೇಷ್ಮಾ ಹಂಸರಾಜ್, ಇಸಾಮೋದ್ದೀನ್ ಮೀರಾಸಾಬ್, ಬಸವರಾಜ ಮಾಳಗೆ, ಶ್ರೀಮಂತ, ಜೈಭೀಮ್, ಅನೀಲ್ ದೊಡ್ಡಿ, ಯುವರಾಜ್‌ ಐಹೊಳ್ಳಿ ಸೇರಿದಂತೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...