ದಾವಣಗೆರೆ | ಆಂಗ್ಲ ನಾಮಫಲಕಗಳಿಗೆ ಮಸಿ ಬಳಿದು, ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

Date:

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ಮುಂಭಾಗದಲ್ಲಿ ಅಳವಡಿಸಿರುವ ಕನ್ನಡೇತರ ಭಾಷೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆಯಾಗಿರುವ ಕನ್ನಡ ಪದಗಳನ್ನೊಳಗೊಂಡಿರುವ ನಾಮಫಲಕವನ್ನು ಅಳವಡಿಸಬೇಕೆಂದು ಒತ್ತಾಯಿಸಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಪಿಬಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ಪಿಬಿ ರಸ್ತೆಯಲ್ಲಿರುವ ಅಂಗಡಿಗಳಿಗೆ ಅಳವಡಿಸಿರುವ ಆಂಗ್ಲ ನಾಮಫಲಕಗಳಿಗೆ ಮಸಿ ಬಳಿದು ಕನ್ನಡಫಲಕ ಅಳವಡಿಸುವಂತೆ ಆಗ್ರಹಿಸಿದರು.

ವೇದಿಕೆ ಸಂಸ್ಥಾಪಕ ಅಧ್ಯಕ್ಷ ವಿ ಅವಿನಾಶ್ ಮಾತನಾಡಿ, “ರಾಜ್ಯ ಸರ್ಕಾರವು ಆಡಳಿತ ಭಾಷೆಯಾಗಿ 1953ರಲ್ಲಿ ನಿರ್ಧಿಷ್ಟಪಡಿಸಿ ಆದೇಶ ಹೊರಡಿಸಿತ್ತು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಸಾರ್ವಭೌಮತೆ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನ ಕೊಟ್ಟು ರಾಜ್ಯ ಸರ್ಕಾರ ಕನ್ನಡ ಭಾಷೆ ಬಳಕೆಯಾಗಬೇಕೆಂದು ಅನುಷ್ಠಾನಗೊಳಿಸಿ ಆದೇಶ ಹೊರಡಿಸಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡಿಗರ ಹಿತಾಸಕ್ತಿಗೆ ಕಾನೂನನ್ವಯ ಕನ್ನಡ ಭಾಷೆಯನ್ನು ಸಕ್ರಿಯಗೊಳಿಸುವ ಸಲುವಾಗಿ ರಾಜ್ಯ ಸರ್ಕಾರದಡಿಯಲ್ಲಿ ಬರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಜುಲೈ 2013 ರಂದು ಶೇ.60ರಷ್ಟು ಕನ್ನಡ ಮತ್ತು 40ರಷ್ಟು ಕನ್ನಡೇತರ ಭಾಷೆಗಳನ್ನೊಳಗೊಂಡ, ವಾಣಿಜ್ಯ ಮಳಿಗೆಗಳು ಹಾಗೂ ಇತರ ಕಟ್ಟಡಗಳಲ್ಲಿ, ನಾಮಫಲಕ ಅಳವಡಿಸುವಾಗ ಕಡ್ಡಾಯವಾಗಿ ಕನ್ನಡ ಭಾಷೆ ಹೊಂದಿರುವ ನಾಮಫಲಕವನ್ನು ಅಳವಡಿಸಬೇಕೆಂದು ಆದೇಶಿಸಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ₹1.9 ಕೋಟಿ ವೆಚ್ಚದಲ್ಲಿ 109 ʼಕೂಸಿನ ಮನೆʼಗಳ ಸ್ಥಾಪನೆ: ಸಚಿವ ಎನ್ ಚೆಲುವರಾಯಸ್ವಾಮಿ

“ರಾಜ್ಯ ಸರ್ಕಾರವೂ ಕೂಡ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ತೀರ್ಮಾನಕ್ಕೆ ಅನುಮೋದಿಸಿ ಕನ್ನಡ ಪ್ರಥಮ ಭಾಷೆಯಾಗಿ ನಾಮಫಲಕಗಳನ್ನು ಅಳವಡಿಸುವುದಕ್ಕೆ ಆದೇಶಿಸಿತ್ತು. ಅದರ ಪ್ರಕಾರ ದಾವಣಗೆರೆ ಮಹಾನಗರ ಪಾಲಿಕೆ ಅಡಿಯಲ್ಲಿರುವಂತಹ ವಾಣಿಜ್ಯ ಮಳಿಗೆಗಳು ಮತ್ತು ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡೇತರ ಭಾಷೆಗಳ ನಾಮಫಲಕಗಳು ಹೆಚ್ಚಾಗಿ ಕಂಡುಬರುತ್ತವೆ. ಆದ ಕಾರಣ ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರು ಕೂಡಲೇ ಕನ್ನಡೇತರ ಭಾಷೆಯ ನಾಮಫಲಕ ಹೊಂದಿರುವ ಅಂಗಡಿ ಮುಂಗಟ್ಟುಗಳ ಪರವಾನಿಗೆಯನ್ನು ರದ್ದುಪಡಿಸಬೇಕು. ಕನ್ನಡೇತರ ಭಾಷೆ ಒಳಗೊಂಡಿರುವ ಅಂಗಡಿಗಳಿಗೆ ನೊಟೀಸ್ ಜಾರಿಮಾಡಿ ನಾಮಫಲಕಗಳನ್ನು ತೆರವುಗೊಳಸಬೇಕು” ಎಂದರು.

ಪ್ರತಿಭಟನೆಯಲ್ಲಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...