ದಾವಣಗೆರೆ | ಕೆಎಸ್ಸಾರ್ಟಿಸಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಬಸವ ಜಯಂತಿ ಆಚರಣೆ.‌

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ದಾವಣಗೆರೆ ವಿಭಾಗ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಬಸವ ಜಯಂತಿ ಮತ್ತು ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನವರಿಗೆ ಅಭಿನಂದನಾ ಸಮಾರಂಭವನ್ನು ದಾವಣಗೆರೆ ಕೆಎಸ್ಸಾರ್ಟಿಸಿ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

1001972209

ಸಮಾರಂಭದ ಸಾನಿಧ್ಯವನ್ನು ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಶ್ರೀ ಗಳು ವಹಿಸಿಕೊಂಡು ಮಾತನಾಡಿದ ಅವರು, “ವಿರಕ್ತಮಠದಿಂದ ಬಸವ ಜಯಂತಿಯ ಅಂಗವಾಗಿ ಆಯೋಜಿಸಿದ ಬಸವ ಜ್ಯೋತಿ ಕಾರ್ಯಕ್ರಮಕ್ಕೆ ಇಲ್ಲಿನ ಸಮಾಜದ ನೌಕರರ ಸಂಘದವರು ಭಾಗವಹಿಸಿ ಸಹಕರಿಸಿದ್ದಾರೆ. ದಾವಣಗೆರೆಯಲ್ಲಿ ನಿರ್ಮಿಸಿರುವ ಈ ಸರ್ಕಾರಿ ಬಸ್ ನಿಲ್ದಾಣ ಕರ್ನಾಟಕದಲ್ಲಿ ಅತ್ಯುತ್ತಮ ನಿಲ್ದಾಣವಾಗಿದೆ” ಎಂದು ಪ್ರಶಂಸಿಸಿದರು.

1001972210
ದಾವಣಗೆರೆ ಕೆಎಸ್ಸಾರ್ಟಿಸಿ ಆವರಣದಲ್ಲಿ ಬಸವ ಜಯಂತಿ ಕಾರ್ಯಕ್ರಮ.

“ಲಿಂಗಾಯತ ಸಮಾಜ ಇಂದು ಒಳಪಂಗಡಗಳಾಗಿ ಒಡೆದು ಸಂಕಷ್ಟದ ಸ್ಥಿತಿಯಲ್ಲಿದೆ.‌ ಇನ್ನು ಮುಂದಾದರು ನಮ್ಮಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಬೇಕು. ಇಡೀ ವೀರಶೈವ ಲಿಂಗಾಯತ ಸಮಾಜವನ್ನು ನಾಯಕರು ಮತ್ತು ಎಲ್ಲರೂ ಸೇರಿ ಮುನ್ನಡೆಸಬೇಕಾದ ಅವಶ್ಯಕತೆ ಇದೆ. ಜಾತಿ ಗಣತಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಸಮಾಜ ಬಾಂಧವರು ಎಚ್ಚೆತ್ತು ಒಗ್ಗಟ್ಟಿನ ದೃಷ್ಟಿಯಿಂದ, ಸಮಾಜದ ಮಕ್ಕಳ ಭವಿಷ್ಯದ ಪ್ರಶ್ನೆಯಿಂದ “ವೀರಶೈವ ಲಿಂಗಾಯತ” ಎಂದು ದಾಖಲಿಸಬೇಕು” ಎಂದು ಸಮಾಜಕ್ಕೆ ಸಂದೇಶ ನೀಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರತದ ಯಶಸ್ಸಿಗೆ, ಯೋಧರ ಸುರಕ್ಷತೆಗೆ ಪ್ರಾರ್ಥಿಸಿ, ದುರ್ಗಾಂಬಿಕಾ ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್‌, ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಮಾಜಿ ವಿಧಾನಪರಿಷತ್ ಸದಸ್ಯ ಎ.ಹೆಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ಟಿ. ಗುರುಸಿದ್ದನಗೌಡ್ರು, ವೀರಶೈವ ಲಿಂಗಾಯತ ಸಮಾಜ ಮುಖಂಡ ಎನ್. ಕೊಟ್ರೇಶ್, ರಾಷ್ಟ್ರೀಯ ಉಪಾಧ್ಯಕ್ಷ ರಾಜಣ್ಣ ಅಣಬೇರು, ಹುಬ್ಬಳ್ಳಿಯ ಮುಖ್ಯಯಾಂತ್ರಿಕ ಅಭಿಯಂತರ ಸಿದ್ದೇಶ್ವರ್ ಎನ್. ಹೆಬ್ಬಾಳ್, ಅರುಂಡಿ ನಾಗರಾಜ, ಕಮ್ಮತ್ತಹಳ್ಳಿ ಮಂಜುನಾಥ್, ಚಂದ್ರಶೇಖರ್ ಪೂಜಾರ್, ಅಶೋಕ್ ಗೋಪನಹಾಳ್, ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ ಎಫ್. ಬಸಾಪುರ, ರುದ್ರೇಶ್ ಮರಿಕುಂಟೆ, ನೌಕರರ ಸಂಘದ ಪದಾಧಿಕಾರಿಗಳಾದ ಸಿಜಿ ಈಶಪ್ಪ, ಲಿಂಗೇಶ್, ರೇಣುಕಾ, ಹನುಮಂತಪ್ಪ ಜ್ಯೋತಿ, ಮಂಜುನಾಥ ಕಾಶೀಪುರ, ಚನ್ನಪ್ಪ ಶಿವಕುಮಾರ, ಸಿದ್ದಲಿಂಗಯ್ಯ ಸಾಲಿಮಠ, ಬಸವರಾಜ್ ತಾವರಗೊಂದಿ, ರಾಜೇಶ್ವರಿ, ಅನಿಲ್ ಕುಮಾರ್, ಪ್ರಶಾಂತ್, ಭೀಮರಾವ್ ಬಿರಾದಾರ್, ವನಜಾಕ್ಷಿ, ಸತೀಶ್ ಎ.ವಿ.ಪರಮೇಶ್ ಪೂಜಾರ್, ಪರಮೇಶಪ್ಪ ನಂದಿಗಾವಿ, ಮಂಜುನಾಥ ಟಿ, ವಿಶ್ವನಾಥ್,‌ದೇವಕ್ಕ ಇಟ್ಟಿಗಿಮಠ, ಅಣಬೇರ್ ರವಿಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...