ದಾವಣಗೆರೆ | ಮುಖ್ಯಮಂತ್ರಿ ಬದಲಾವಣೆ ವಿಚಾರ; ಯತೀಂದ್ರಗೆ ನೋಟೀಸ್ ಏಕಿಲ್ಲ? ಶಾಸಕ ಬಸವರಾಜ್ ಶಿವಗಂಗಾ ಪ್ರಶ್ನೆ

Date:

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ನಾನು ಯಾವುದೇ ರೀತಿ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಮಾತನಾಡಿಲ್ಲ. ಆದರೂ ನನಗೆ ನೋಟೀಸ್ ಕೊಡಲಾಗಿದೆ. ಹಾಗೂ ಬೇರೆಯವರಿಗೂ ನೋಟೀಸ್ ನೀಡಲಾಗಿದೆ. ಆದರೆ ಮುಖ್ಯಮಂತ್ರಿ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಪಕ್ಷಕ್ಕೆ ಮುಜುಗರವಾಗುವ ರೀತಿ ಮಾತನಾಡಿದ್ದಾರೆ. ಆದರೆ ಯಾವುದೇ ಕ್ರಮ ಮತ್ತು ನೋಟೀಸ್ ಇಲ್ಲ. ಇದು ಯಾವ ರೀತಿಯ ನ್ಯಾಯ” ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪ್ರಶ್ನಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಮುಖ್ಯಮಂತ್ರಿ ವಿಚಾರ ಮಾತನಾಡಿಲ್ಲ. ಆದರೂ ನೊಟೀಸ್ ಕೊಟ್ಟಿದ್ದಾರೆ. ಅದೇ ರೀತಿ ಬಹಳಷ್ಟು ಜನರಿಗೆ ನೀಡಿದ್ದಾರೆ. ಹೈಕಮಾಂಡ್ ಗಮನಿಸಬೇಕು. ಯತೀಂದ್ರ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಅವರು ಮೊದಲು ಏನು ಮಾತನಾಡಿದ್ದರು? ಆಮೇಲೆ ಏನು ಮಾತನಾಡಿದ್ದಾರೆ ಎಂಬುದು ಮಾಧ್ಯಮಗಳಲ್ಲಿ ಬಂದಿದೆ. ಪದೇ ಪದೇ ಮಾತನಾಡಲ್ಲ. ಎಲ್ಲರೂ ನವೆಂಬರ್ ಕ್ರಾಂತಿ ಎನ್ನುತ್ತಿದ್ದಾರೆ. ಡಿಸೆಂಬರ್ ನಂತರ ಆಗುತ್ತದೆ. ನಾನು ಈಗ ಮಾತನಾಡಲ್ಲ.  ಡಿಸೆಂಬರ್ ನಂತರ ಮುಂದಿನ ವರ್ಷದ ಜನವರಿಯಲ್ಲಿ ಮಾತನಾಡುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕನಕ ಜಯಂತಿ ಪ್ರಯುಕ್ತ ಲಕ್ಷ ದೀಪೋತ್ಸವ ರಾಜ್ಯ ಮಟ್ಟದ ಟಗರಿನ ಕಾಳಗ, ಕಬಡ್ಡಿ ಮತ್ತು ಕೃಷಿ ಮೇಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಸಿದ್ದರಾಮಯ್ಯ ಮುತ್ಸದ್ದಿ ರಾಜಕಾರಣಿ. ಒಬ್ಬ ಉತ್ತಮ ಆಡಳಿತಗಾರರು. ಹೀಗೆ ಬಾಲಿಶವಾಗಿ ಮಾತನಾಡುವಂತೆ ಎಂದಿಗೂ ಯಾರಿಗೂ ಅವರು ಹೇಳಲ್ಲ. ಹೇಳುವುದೂ ಇಲ್ಲ. ಸಿದ್ದರಾಮಯ್ಯನವರು ಕುಟುಂಬಸ್ಥರನ್ನು ರಾಜಕೀಯಕ್ಕೆ ತಂದಿರಲಿಲ್ಲ.  ರಾಜಕೀಯ ಕೊನೆಗಾಲದಲ್ಲಿದ್ದಾರೆಂದು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತೇನೆ ಎಂದೂ ಸಿದ್ದರಾಮಯ್ಯರು ಹೇಳಿಲ್ಲ. ನಾಲ್ವರು ಅವರ ಬೇಳೆ ಕಾಳು ಬೇಯಿಸಿಕೊಳ್ಳಲು ಯತ್ನಿಸುತ್ತಾ ಗೊಂದಲಮಯ ಹೇಳಿಕೆ ನೀಡುತ್ತಿದ್ದಾರೆ” ಎಂದು ಪ್ರತಿಕ್ರಿಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...