ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Date:

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಪ್ರಕಟಿಸಿದೆ. ಅಲ್ಲದೇ, ಅಪರಾಧಿಗಳಿಗೆ 5 ಲಕ್ಷ ರೂಪಾಯಿ ದಂಡವನ್ನೂ ಹಾಕಲಾಗಿದೆ. ಮತ್ತೊಬ್ಬ ಅಪರಾಧಿ ಅಜಯ್ ಸೇಥಿ ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ದೆಹಲಿಯಲ್ಲಿ 2008ರ ಸೆಪ್ಟೆಂಬರ್ 30ರಂದು ಬೆಳಗಿನ ಜಾವ 3:30ರ ಸುಮಾರಿಗೆ ಕಚೇರಿಯಿಂದ ಮನೆಗೆ ಹಿಂದಿರುಗುವಾಗ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ 15 ವರ್ಷಗಳ ಬಳಿಕ ತೀರ್ಪು ಹೊರ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರಾಧಿಗಳಾದ ರವಿ ಕಪೂರ್, ಅಜಯ್ ಕುಮಾರ್, ಅಮಿತ್ ಶುಕ್ಲಾ ಮತ್ತು ಬಲ್ಮೀತ್ ಮಲಿಕ್ ಎಂಬುವವರೇ ಜೀವಾವಧಿ ಶಿಕ್ಷೆಗೆ ಗುರಿಯಾದವರು. ಕಳೆದ ಅಕ್ಟೋಬರ್ 18ರಂದು ಸಾಕೇತ್ ನ್ಯಾಯಾಲಯವು ಈ ಎಲ್ಲ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು.

‘ಈ ನಾಲ್ವರು ಆರೋಪಿಗಳನ್ನು ಮಹಾರಾಷ್ಟ್ರದ ಕಠಿಣ ಕಾನೂನಾದ ಎಂಸಿಒಸಿಎ (ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಕಾಯ್ದೆ ಅಡಿ ಸೆಕ್ಷನ್ 3 (1) (i)ರ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿತ್ತು. ಐದನೇ ಅಪರಾಧಿ ಅಜಯ್ ಸೇಥಿಗೆ ಅಪರಾಧಿಗಳಿಗೆ ಸಹಾಯ ಮಾಡಿದ್ದಕ್ಕಾಗಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಈ ತೀರ್ಪು ನನಗೆ ತೃಪ್ತಿ ತಂದಿಲ್ಲ: ಸೌಮ್ಯಾ ತಾಯಿ

ಇನ್ನು 15 ವರ್ಷಗಳ ಬಳಿಕ ತೀರ್ಪು ಹೊರಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೌಮ್ಯಾ ತಾಯಿ, ‘ಈ ತೀರ್ಪು ನನಗೆ ತೃಪ್ತಿ ತಂದಿಲ್ಲ, ಆದರೆ ಆದರೆ ನಾನು ಅದನ್ನು ಒಳ್ಳೆಯದು ಎಂದು ಹೇಳಬಲ್ಲೆ. ನೀವು ಏನು ಮಾಡುತ್ತಿದ್ದೀರಿ ಎಂಬುದರ ಪರಿಣಾಮಗಳನ್ನು ನೀವು ಎದುರಿಸಬೇಕಾಗುತ್ತದೆ ಎಂದು ಸಮಾಜಕ್ಕೆ ಸಂದೇಶ ನೀಡಲಾಗಿದೆ ಅಷ್ಟೇ. ಮಗಳನ್ನು ಕಳೆದುಕೊಂಡು ಒಂದು ರೀತಿಯಲ್ಲಿ ನಾವೂ ಕೂಡ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದೇವೆ’ ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ:

ದೆಹಲಿಯಲ್ಲಿ ಹೆಡ್‌ಲೈನ್ಸ್ ಟುಡೆ ಸುದ್ದಿ ವಾಹಿನಿಯಲ್ಲಿ ಪತ್ರಕರ್ತೆಯಾಗಿದ್ದ ಸೌಮ್ಯಾ ವಿಶ್ವನಾಥನ್ 2008ರ ಸೆಪ್ಟೆಂಬರ್ 30ರಂದು ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದರು. ಈ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ಐವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಸೌಮ್ಯಾ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಇದಾದ ಬಳಿಕ ಹಂತಕರು ತಮ್ಮ ಕೃತ್ಯ ಬಯಲಾಗದಂತೆ ಮಾಡಲು ರಸ್ತೆ ಅಪಘಾತ ಎಂಬಂತೆ ಬಿಂಬಿಸಿದ್ದರು.

ಅಂತೆಯೇ, ಆರಂಭದಲ್ಲಿ ಕಾರು ದುರಂತ ಎಂಬಂತೆ ಕಂಡುಬಂದಿತ್ತು. ಆದರೆ, ವಿಧಿವಿಜ್ಞಾನ ವರದಿಗಳಲ್ಲಿ ಸೌಮ್ಯಾ ತಲೆಗೆ ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಎಂದು ಬಹಿರಂಗವಾಗಿತ್ತು. ಇದರಿಂದ ಇದೊಂದು ಕೊಲೆ ಎಂದು ಸ್ಪಷ್ಟವಾಗಿ, ಇದರ ಆಧಾರದ ಮೇಲೆ ದೆಹಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು.

ತನಿಖೆಯ ಭಾಗವಾಗಿ ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳಿಗಳ ಪರಿಶೀಲನೆಯಲ್ಲಿ ಸೌಮ್ಯಾ ಅವರನ್ನು ಕಾರೊಂದು ಹಿಂಬಾಲಿಸಿದ್ದು ಬಯಲಿಗೆ ಬಂದಿತ್ತು. ನಂತರ 2009ರಲ್ಲಿ ಪೊಲೀಸರು ರವಿ ಕಪೂರ್ ಮತ್ತು ಅಮಿತ್ ಶುಕ್ಲಾನನ್ನು ಬಂಧಿಸಿದ್ದರು. ಅದಾದ ಬಳಿಕ ತನಿಖೆಯು ಮಹತ್ವದ ತಿರುವು ಪಡೆದುಕೊಂಡು, ಈ ಇಬ್ಬರೂ ಇನ್ನೊಂದು ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು ಪತ್ತೆಯಾಗಿತ್ತು. ಅಲ್ಲದೆ, ಎರಡೂ ಕೊಲೆಗಳಿಗೆ ಒಂದೇ ಕಾರನ್ನು ಬಳಸಿದ್ದು ಕಂಡು ಬಂದಿತ್ತು.

ಇದಾದ ಬಳಿಕ ಈ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 2010ರಲ್ಲಿ ಇತರ ಮೂವರು ಆರೋಪಿಗಳಾದ ಬಲ್ಮೀತ್ ಮಲಿಕ್, ಅಜಯ್ ಕುಮಾರ್ ಮತ್ತು ಅಜಯ್ ಸೇಥಿಯನ್ನು ಬಂಧಿಸಿ, ಐವರ ವಿರುದ್ಧ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. 2010ರ ನವೆಂಬರ್ 16ರಂದು ಸಾಕೇತ್ ನ್ಯಾಯಾಲಯದಲ್ಲಿ ವಿಚಾರಣೆಯು ಪ್ರಾರಂಭವಾಗಿತ್ತು. 2016ರ ಜುಲೈ 19ರಂದು ನ್ಯಾಯಾಲಯವು ಪ್ರಕರಣದ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...