ಧಾರವಾಡ | ಮುಂಗಾರು ವಿಳಂಬದಿಂದ ಬೆಳೆ ವಿಫಲ; ಪರಿಹಾರಕ್ಕೆ ಆಗ್ರಹ

Date:

ಪ್ರಸ್ತುತ ವರ್ಷದ ಮುಂಗಾರು ಮಳೆ ಅಭಾವದಿಂದ ರೈತರ ಬೆಳೆಗಳು ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ಬೆಳೆ ನಷ್ಟ ಪರಿಹಾರ ನೀಡಲು ಹಾಗೂ ಕಾಮಗಾರಿ ಉದ್ಯೋಗ ನೀಡಲು ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ರೈತ ಕೃಷಿ ಕಾರ್ಮಿಕ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿ (ಎಐಕೆಕೆಎಂಎಸ್‌) ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿತು.

ಸಂಘಟನೆಯ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ ಮಾತನಾಡಿ, “ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ ವಿಫಲವಾಗಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇದರಿಂದ ಬಿತ್ತನೆ ಮಾಡಲು ಭೂಮಿಯಲ್ಲಿ ಅವಶ್ಯಕ ತೇವಾಂಶ ಇಲ್ಲ. ಇನ್ನು ಕೆಲವು ಪ್ರದೇಶಗಳಲ್ಲಿ  ಇರುವ ತೇವಾಂಶದಲ್ಲಿ ಬಿತ್ತನೆ ಮಾಡಿ ರೈತರು ಮಳೆಯ ನಿರೀಕ್ಷೆಯಲ್ಲಿ ಆಕಾಶದತ್ತ ಮುಖ ಮಾಡಿದ್ದಾರೆ. ಈಗಾಗಲೇ ಬಿತ್ತನೆ ಕಾರ್ಯ ಮುಗಿಸಿ ಹೊಲ, ಗದ್ದೆಗಳಲ್ಲಿ ಪೈರು ಬರುವ ಸಮಯವಾದರೂ ಸೂಕ್ತ ಸಮಯದಲ್ಲಿ ಮಳೆಯಾಗದಿರುವುದು ರೈತರಲ್ಲಿ ಆತಂಕ ಹುಟ್ಟಿಸಿದೆ” ಎಂದರು.

“ಕೆಲವು ಪ್ರದೇಶದಲ್ಲಿ ಅಲ್ಪ ಸ್ವಲ್ಪ ಚಿಗುರೊಡೆದಿರುವ ಪೈರುಗಳೂ ಕೂಡ ಕ್ರಮೇಣವಾಗಿ ಒಣಗುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಒಣ ಬರಗಾಲ ಬರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಸಹಜವಾಗಿ ಅಂತಹ ಪರಿಸ್ಥಿತಿಯನ್ನು ಎದುರಿಸಲು ಅವಶ್ಯಕ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಇನ್ನು ಈಗಾಗಲೇ ಬಿತ್ತನೆ ಬೀಜ, ಔಷಧಿ ಇನ್ನಿತರ ಖರ್ಚಿಗಾಗಿ ಸಾಲ ಮಾಡಿರುವ ರೈತರು ಹೈರಾಣಾಗಿದ್ದಾರೆ. ಸಹಜವಾಗಿಯೇ ಅವರ ಬದುಕು ತೀವ್ರ ಕಷ್ಟದಲ್ಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರಾವಳಿಯಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ

“ಸರ್ಕಾರ ಇಂತಹ ಸಂದರ್ಭದಲ್ಲಿ ರೈತರಿಗೆ ಆಸರೆಯಾಗಿ ನಿಂತು ಅವರಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಅಂದರೆ ಬೆಳೆ ನಷ್ಟ ಪರಿಹಾರ ನೀಡುವುದು, ನರೇಗಾ ಯೋಜನೆಯಡಿಯಲ್ಲಿ ವರ್ಷ ಪೂರ್ತಿ ಉದ್ಯೋಗ ನೀಡುವುದು, ರೈತರ ಸಾಲ ಮನ್ನಾ ಮಾಡುವುದು, ಕಾರ್ಖಾನೆಗಳನ್ನು ತೆರೆದು ಉದ್ಯೋಗ ಸೃಷ್ಟಿಸುವುದು, ಪ್ರತಿ ಕುಟುಂಬಕ್ಕೆ ಅವಶ್ಯಕವಿರುವಷ್ಟು ಪಡಿತರ ನೀಡುವುದು, ಕೆರೆ ಕಟ್ಟೆಗಳ ಹೂಳೆತ್ತುವುದು, ನೀರಾವರಿ ಕಾಮಗಾರಿ ಸೇರಿದಂತೆ ಇನ್ನಿತರ ಜನ ಕಲ್ಯಾಣ ಯೋಜನೆಗಳನ್ನು ರೂಪಿಸುವುದು ಅವಶ್ಯಕವಾಗಿದೆ” ಎಂದು ಆಲ್ ಇಂಡಿಯಾ ರೈತ ಕೃಷಿ ಕಾರ್ಮಿಕ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಹನುಮೇಶ, ಕಚೇರಿ ಕಾರ್ಯದರ್ಶಿ ಗೋವಿಂದ ಕೃಷ್ಣಪ್ಪನವರ್, ಶ್ರೀದೇವಿ ದೊಡ್ಡಮನೆ, ಮಂಜುಳಾ ಜಗದಾಳಿ, ಪರಮೇಶ್, ನದಾಫ್ ಸೇರಿದಂತೆ ಇತರರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...