ಧಾರವಾಡ | ವೇತನ ಪರಿಷ್ಕರಣೆ ಬಾಕಿ ಮಂಜೂರಿಗೆ ಎನ್‌ಡಬ್ಲ್ಯೂಕೆಆರ್‌ಟಿಸಿ ನೌಕರರ ಸಂಘ ಆಗ್ರಹ

Date:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ ನಿವೃತ್ತ ನೌಕರರಿಗೆ ಬರಬೇಕಾದ 2020ರ ವೇತನ ಪರಿಷ್ಕರಣೆ ಬಾಕಿ ಮತ್ತು ರಜೆ ನಗದೀಕರಣದ ವ್ಯತ್ಯಾಸದ ಬಾಕಿ ಹಣವನ್ನು ಮಂಜೂರು ಮಾಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್‌ ಭರತ್‌ ಅವರಿಗೆ ಮನವಿ ಸಲ್ಲಿಸಿದರು.

“ನಿವೃತ್ತ ನೌಕರರಿಗೆ ಸಂಬಂಧಿಸಿದ 2016–17ರಿಂದ 2019–20 ರವರೆಗಿನ ನಗದೀಕರಣ ಬಾಕಿ ಹಣವನ್ನು ಈವರೆಗೆ ಪಾವತಿಸಿಲ್ಲ. ಆ ಹಣವನ್ನು ಕೂಡಲೇ ಮಂಜೂರು ಮಾಡಬೇಕು. ಪ್ರತಿ ವರ್ಷ ಬಸ್‌ಪಾಸ್‌ಗೆ ಪಡೆಯುತ್ತಿರುವ ₹500 ಸಂಸ್ಕರಣಾ ಶುಲ್ಕವನ್ನು ರದ್ದು ಮಾಡಬೇಕು. ನಿವೃತ್ತ ನೌಕರರಿಗೆ ಸಾರಿಗೆ ಬಸ್‌ಗಳಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಕ್ರಮಕೈಗೊಳ್ಳಬೇಕು. ವೈದ್ಯಕೀಯ ವೆಚ್ಚದ ಪುನರ್‌ ಪಾವತಿ ಸೌಲಭ್ಯ ಕಲ್ಪಿಸಿಕೊಡಬೇಕು” ಎಂದು ಸಂಘಟನಾಕಾರರು ಆಗ್ರಹಿಸಿದರು.

“ಫೆಬ್ರವರಿ 2023ರ ನಂತರ ನಿವೃತ್ತಿಯಾದ ನೌಕರರಿಗೆ ಉಪದಾನ ಮತ್ತು ರಜೆ ನಗದೀಕರಣ ಹಣವನ್ನು ಮಂಜೂರು ಮಾಡಬೇಕು. ಸಕಾಲದಲ್ಲಿ ನಿವೃತ್ತಿ ಹಣ ಸಂದಾಯಕ್ಕೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್‌ ಪಡೆದ ಸ್ಥಳದವರೆಗೆ ಪ್ರಯಾಣ ಮಾಡದೆ ಮಾರ್ಗ ಮಧ್ಯದಲ್ಲಿಯೇ ಇಳಿದು ಹೋದರೆ, ದೂರದ ಪ್ರಯಣದ ಟಿಕೆಟ್‌ ವಿತರಿಸಿದ ಆರೋಪದ ಮೇಲೆ ನಿರ್ವಾಹಕರನ್ನು ಅಮಾನತು ಮಾಡುವ ಕ್ರಮ ಅವೈಜ್ಞಾನಿಕ. ಇದನ್ನು ತೆಗೆದುಹಾಕಬೇಕು. ಹಾಲಿ ನೌಕರರ ಬೇಡಿಕೆಗಳ ಈಡೇರಿಕೆಗೂ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸಂಸದರು ಯುವಕರಲ್ಲಿ ಹಿಂದು ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಸಂಘದ ಅಧ್ಯಕ್ಷ ಎಚ್‌ ಜಿ ಕೊಪ್ಪದ, ಪ್ರಧಾನ ಕಾರ್ಯದರ್ಶಿ ಎಂ ಬಿ ತಹಶೀಲ್ದಾರ, ಪ್ರಮುಖರುಗಳಾದ ಎ ಎಚ್‌ ಜವಳಿ, ಎಸ್‌ ಎಸ್ ಪಾಟೀಲ, ಎಂ ಎಂ ಹಿರೇಮಠ, ಬಿ ಎಸ್‌ ದೋತ್ರದ, ಐ ಸಿ ವಾಲಿಶೆಟ್ಟಿ, ಗುಡಗೇರಿ, ವಿ ಐ ಭದ್ರಾಪೂರ, ಹುಗ್ಗಣ್ಣವರ, ಹುಸೇನಪ್ಪಾ ವೀರೇಶ ಸೊರಬದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...