ತಮಿಳುನಾಡು | ಲಂಚ ಪಡೆಯುತ್ತಿದ್ದಾಗ ‘ರೆಡ್‌ಹ್ಯಾಂಡ್‌’ ಆಗಿ ಸಿಕ್ಕಿ ಬಿದ್ದ E D ಅಧಿಕಾರಿ!

Date:

ತಮಿಳುನಾಡಿನ ದಿಂಡಿಗಲ್‌ನಲ್ಲಿ ಪ್ರಕರಣ ಮುಚ್ಚಿಸುವುದಾಗಿ ಬೆದರಿಸಿ, ವೈದ್ಯನೋರ್ವನಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಜಾರಿ ನಿರ್ದೇಶನಾಲಯ (ಈ.ಡಿ) ಅಧಿಕಾರಿಯೊಬ್ಬ ‘ರೆಡ್‌ಹ್ಯಾಂಡ್‌’ ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಈ ಬೆಳವಣಿಗೆ ಸದ್ಯ ತಮಿಳುನಾಡಿನಲ್ಲಿ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.

ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ಈ.ಡಿ ಅಧಿಕಾರಿಯನ್ನು ಬಂಧಿಸಿದೆ. ದಿಂಡಿಗಲ್-ಮಧುರೈ ಹೆದ್ದಾರಿಯಲ್ಲಿ ಎಂಟು ಕಿಲೋಮೀಟರ್ ಬೆನ್ನಟ್ಟಿದ ನಂತರ ಈಡಿ ಅಧಿಕಾರಿಯನ್ನು ಲಂಚದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ದಿಂಡಿಗಲ್‌ನಲ್ಲಿ ಬಂಧಿಸಲ್ಪಟ್ಟ ನಂತರ, ಡಿವಿಎಸಿ ಅಧಿಕಾರಿಗಳ ತಂಡವು ಮಧುರೈನ ಉಪ-ಪ್ರಾದೇಶಿಕ ಈಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಬಂಧಿತ ಅಧಿಕಾರಿಯನ್ನು ಅಂಕಿತ್ ತಿವಾರಿ ಎಂದು ಗುರುತಿಸಲಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿರುವ ಮಧುರೈ ಜಾರಿ ನಿರ್ದೆಶನಾಲಯದ ಕಚೇರಿಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರೆಡ್‌ಹ್ಯಾಂಡಾಗಿ ಸಿಕ್ಕ ಬಳಿಕ ಡಿವಿಎಸಿ ಅಧಿಕಾರಿಗಳು ಅಧಿಕಾರಿಯ ಮನೆ ಮೇಲೂ ದಾಳಿ ನಡೆಸಿದ್ದಾರೆ.

ವಶಕ್ಕೆ ಪಡೆದುಕೊಂಡ ಅಧಿಕಾರಿ ಅಂಕಿತ್ ತಿವಾರಿಯನ್ನು ದಿಂಡಿಗಲ್‌ನ ಮ್ಯಾಜಿಸ್ಟ್ರೇಟ್ ಮುಂದೆ ಶುಕ್ರವಾರ ತಡರಾತ್ರಿಯೇ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಡಿಸೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

2016ರ ಬ್ಯಾಚ್‌ನ ಅಧಿಕಾರಿಯಾಗಿರುವ ತಿವಾರಿ, ಈ ಹಿಂದೆ ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ ಮಧುರೈನಲ್ಲಿ ನಿಯೋಜನೆಗೊಂಡಿದ್ದರು. ಅಂಕಿತ್ ತಿವಾರಿ ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ, ಅವರು ಐದು ವರ್ಷಗಳಿಗೂ ಹೆಚ್ಚು ಕಾಲ ಈಡಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಏಜೆನ್ಸಿಗೆ ಸೇರುವ ಮೊದಲು, ಅವರು ಅಕೌಂಟಿಂಗ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿದ್ದರು ಎಂದು ವರದಿಯಾಗಿದೆ.

ದಿಂಡಿಗಲ್‌ನಲ್ಲಿ ವೈದ್ಯರೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಮುಚ್ಚಿ ಹಾಕುವ ಹೆಸರಿನಲ್ಲಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹದ ಅಧಿಕಾರಿಗಳಿಗೆ ವೈದ್ಯರು ದೂರು ನೀಡಿದ್ದರು ಎಂದು ವರದಿಯಾಗಿದೆ. ವೈದ್ಯನಿಂದ ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿ ಬಿದ್ದಿದ್ದಾನೆ.

ಇದನ್ನು ಓದಿದ್ದೀರಾ? ‘ಕುದುರೆ ವ್ಯಾಪಾರ’ ಶಂಕೆ: ತೆಲಂಗಾಣಕ್ಕೆ ‘ಟ್ರಬಲ್ ಶೂಟರ್’ ಡಿ ಕೆ ಶಿವಕುಮಾರ್

ಜಾರಿ ನಿರ್ದೇಶನಾಲಯದಲ್ಲಿ ಕೆಲಸ ಮಾಡುತ್ತಿರುವ ಹಲವು ಅಧಿಕಾರಿಗಳು ಇದೇ ರೀತಿಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕುವ ಹೆಸರಿನಲ್ಲಿ ಹಲವರಿಗೆ ಬೆದರಿಕೆ ಹಾಕಿ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದ್ದ ವೇಳೆಯಲ್ಲೇ ಈ ಬೆಳವಣಿಗೆ ನಡೆದಿರುವುದು ತಮಿಳುನಾಡಿನಲ್ಲಿ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.

ಡಿಎಂಕೆ ಸಂಸದ ದಯಾನಿಧಿ ಮಾರನ್ ಈಡಿ ಎಂದರೆ “ಸುಲಿಗೆ ಇಲಾಖೆ” ಎಂದು ಕರೆದಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು, ರಾಜಕೀಯ ವಿರೋಧಿಗಳು ಮತ್ತು ಟೀಕಾಕಾರರನ್ನು ಗುರಿಯಾಗಿಸಲು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

‘ತಿವಾರಿ ಅವರ ಕೃತ್ಯಕ್ಕೆ ಜಾರಿ ನಿರ್ದೇಶನಾಲಯವನ್ನು ದೂಷಿಸಲಾಗುವುದಿಲ್ಲ’ ಎಂದು ಭಾರತೀಯ ಜನತಾ ಪಕ್ಷವು ಸಮರ್ಥಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...