ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Date:

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ, ಪೇಟಿಎಂ ಸಿಬ್ಬಂದಿ ಗೌರವ್ ಗುಪ್ತಾ ಅವರು ಕಳೆದ ಕೆಲವು ದಿನಗಳಿಂದ ಕಂಪನಿ ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದಿಂದ ಒತ್ತಡದಲ್ಲಿದ್ದರು. ಈ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಾರೇಶ್ ಕುಮಾರ್ ಸೋನಿ ಅವರು ಹೇಳಿದ್ದಾರೆ.

ಗೌರವ್ ಗುಪ್ತಾ ಅವರು ಭಾನುವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಚೇರ್‌ಮೆನ್ ಹುದ್ದೆಯಿಂದ ಕೆಳಗಿಳಿದ ವಿಜಯ್ ಶೇಖರ್ ಶರ್ಮಾ

ಇತ್ತೀಚಿಗಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಮಾರ್ಚ್ 15ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ನಿರ್ಬಂಧಿಸಿದೆ. ಅಲ್ಲದೇ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಚೇಯರ್ ಮೆನ್ ಸ್ಥಾನದಿಂದ ವಿಜಯ್ ಶೇಖರ್ ಶರ್ಮಾ ಸೋಮವಾರ ಕೆಳಗಿಳಿದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...