ಮುಸ್ಲಿಂ ವಿದ್ಯಾರ್ಥಿಗೆ ಹೊಡೆಸಿದ್ದ ವಿಡಿಯೋ ವೈರಲ್ : ಶಿಕ್ಷಕಿಯ ವಿರುದ್ಧ ಎಫ್‌ಐಆರ್

Date:

  • ವಿದ್ಯಾರ್ಥಿ ಹಾಗೂ ಪೋಷಕರ ಕೌನ್ಸೆಲಿಂಗ್ ನಡೆಸಲಾಗಿದೆ : ಮುಝಾಫರ್ ನಗರ ಜಿಲ್ಲಾಧಿಕಾರಿ
  • ವಿಕಲ ಚೇತನೆಯಾದ್ದರಿಂದ ವಿದ್ಯಾರ್ಥಿಗಳ ಬಳಿ ಹೊಡೆಸಿದ್ದೆ : ವೈರಲ್ ವಿಡಿಯೋ ಬಳಿಕ ಶಿಕ್ಷಕಿ ಹೇಳಿಕೆ

ಮುಸ್ಲಿಂ ವಿದ್ಯಾರ್ಥಿಯೋರ್ವನ ಕಪಾಳಕ್ಕೆ ಬಾರಿಸುವಂತೆ ಇತರೆ ವಿದ್ಯಾರ್ಥಿಗಳಿಗೆ ಸೂಚಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ಬಳಿಕ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಉತ್ತರ ಪ್ರದೇಶದ ಮುಝಾಫರ್‌ ನಗರದಲ್ಲಿರುವ ನೇಹಾ ಪಬ್ಲಿಕ್ ಶಾಲೆಯಲ್ಲಿ ನಡೆದಿದ್ದ ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಬಳಿಕ ದೇಶಾದ್ಯಂತ ಸುದ್ದಿಯಾಗಿತ್ತು.

ವಿದ್ಯಾರ್ಥಿಯ ಪೋಷಕರ ದೂರಿನ ಮೇರೆಗೆ ಶಿಕ್ಷಕಿ ತೃಪ್ತ ತ್ಯಾಗಿ ವಿರುದ್ಧ ಇಂದು ಬೆಳಗ್ಗೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಮುಝಾಫರ್ ನಗರ ಜಿಲ್ಲಾಧಿಕಾರಿ ಅರವಿಂದ್ ಮಲ್ಲಪ್ಪ ಬಂಗಾರಿ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಘಟನೆಯ ವಿಡಿಯೋ ವೈರಲಾಗುವುದಕ್ಕಿಂತ ಮುಂಚೆ ವಿದ್ಯಾರ್ಥಿಯ ಪೋಷಕರು ದೂರು ನೀಡಲು ಆಸಕ್ತಿ ತೋರಿರಲಿಲ್ಲ. ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಬಳಿಕ ಶನಿವಾರ ಬೆಳಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ಎಫ್‌ಐಆರ್ ದಾಖಲಾಗಿದೆ. ಜಿಲ್ಲೆಯ ಬಾಲ ಕಲ್ಯಾಣ ಸಮಿತಿಯವರು ವಿದ್ಯಾರ್ಥಿ ಹಾಗೂ ಪೋಷಕರ ಕೌನ್ಸೆಲಿಂಗ್ ನಡೆಸಿದ್ದಾರೆ. ಬಾಲ ನ್ಯಾಯ ಕಾಯ್ದೆಯ ಅನ್ವಯ ವಿದ್ಯಾರ್ಥಿಯ ವಿವರಗಳನ್ನು ಬಹಿರಂಗಗೊಳಿಸುವಂತಿಲ್ಲ. ಪ್ರಕರಣ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಅರವಿಂದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನು ಈ ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಶಿಕ್ಷಕಿ ತೃಪ್ತ ತ್ಯಾಗಿ, ‘ತಾನು ವಿಕಲ ಚೇತನೆಯಾದ್ದರಿಂದ ವಿದ್ಯಾರ್ಥಿಗಳ ಬಳಿ ಹೊಡೆಸಿದ್ದೆ. ವಿಡಿಯೋವನ್ನು ತಪ್ಪಾಗಿ ಪ್ರಚಾರಗೈಯ್ಯಲಾಗಿದೆ. ಓದಲು ಆಸಕ್ತಿ ತೋರದಿದ್ದ ಹಿನ್ನೆಲೆಯಲ್ಲಿ ಪೋಷಕರು ದೂರುತ್ತಿದ್ದರು’ ಎಂದು ತಿಳಿಸಿದ್ದಾರೆ.

ಈ ಘಟನೆಯು ಸೋಷಿಯಲ್ ಮೀಡಿಯಾಗಳ ಮೂಲಕ ವೈರಲ್ ಆಗಿರುವುದರಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು(ಎನ್‌ಸಿಪಿಸಿಆರ್) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ, ಘಟನೆಯ ಸಂಬಂಧ ಹರಿದಾಡುತ್ತಿರುವ ವಿಡಿಯೋ ಹಂಚಿಕೊಳ್ಳಬಾರದು. ಇದು ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತದೆ ಎಂದು ಆದೇಶ ಹೊರಡಿಸಿದೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿದ್ಯಾರ್ಥಿಯ ಪೋಷಕರು, ‘ಶಾಲೆಯು ತನ್ನ ಮಗನ ಎಲ್ಲ ಪ್ರವೇಶ ಶುಲ್ಕವನ್ನು ಮರುಪಾವತಿಸಿದೆ. ಮಗ ಇನ್ನು ಮುಂದೆ ಆ ಶಾಲೆಯಲ್ಲಿ ಓದುವುದಿಲ್ಲ. ಬೇರೆ ಶಾಲೆಯಲ್ಲಿ ಓದಿಸುವಂತೆ ಜಿಲ್ಲಾಡಳಿತವು ಸೂಚಿಸಿದೆ. ಘಟನೆಯಿಂದ ಮಗ ತುಂಬಾ ನೊಂದುಕೊಂಡಿದ್ದಾನೆ. ಶಿಕ್ಷಕಿಯು ವಿದ್ಯಾರ್ಥಿಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಬಯಸಿದ್ದರು’ ಎಂದು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಮುಝಾಫರ್ ನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ ಪ್ರಜಾಪತ್, ‘ಮುಸ್ಲಿಂ ವಿದ್ಯಾರ್ಥಿಯ ಜೊತೆಗೆ ನಡೆದ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತೇವೆ. ಆ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

ಬಾಲಕನಿಗೆ ವಿದ್ಯಾರ್ಥಿಗಳಿಂದ ಹೊಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನೆಟ್ಟಿಗರು ಖಂಡಿಸಿದ್ದರು. ಶಿಕ್ಷಕಿ ತೃಪ್ತ ತ್ಯಾಗಿ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸುವಂತೆ ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...