ಬದುಕಿನ ಹಾಡು ಮುಗಿಸಿದ ದೇಶದ ಖ್ಯಾತ ಗಝಲ್ ಗಾಯಕ ಪಂಕಜ್ ಉಧಾಸ್

Date:

ದೇಶದ ಹಿರಿಯ ಗಝಲ್ ಗಾಯಕ, ಪದ್ಮಶ್ರೀ ಪಂಕಜ್ ಉಧಾಸ್ ಅವರು ನಿಧನರಾಗಿದ್ದಾರೆ.

“ದೀರ್ಘಕಾಲದ ಅನಾರೋಗ್ಯದ ನಂತರ 73ನೇ ವಯಸ್ಸಿನಲ್ಲಿ ಪಂಕಜ್ ಉಧಾಸ್ ಇಂದು ನಿಧನರಾದರು” ಎಂದು ಅವರ ಕುಟುಂಬ ದೃಢಪಡಿಸಿದೆ. ಈ ಬಗ್ಗೆ ಉಧಾಸ್ ಕುಟುಂಬವು ಅಧಿಕೃತ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೀರ್ಘಕಾಲದ ಅನಾರೋಗ್ಯದಿಂದ ಫೆಬ್ರವರಿ 26ರಂದು ಪದ್ಮಶ್ರೀ ಪಂಕಜ್ ಉಧಾಸ್ ಅವರ ನಿಧನದ ದುಃಖದ ಸುದ್ದಿಯನ್ನು ತುಂಬಾ ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇವೆ ” ಎಂದು ಹೇಳಿಕೆಯಲ್ಲಿ ಕುಟುಂಬ ತಿಳಿಸಿದೆ.

ಪಂಕಜ್ ಉಧಾಸ್ ಅವರು ದೇಶದ ಕಂಡ ಒಬ್ಬ ಅತ್ಯುತ್ತಮ ಗಝಲ್ ಗಾಯಕರಲ್ಲಿ ಅಗ್ರಗಣ್ಯರಾಗಿದ್ದಾರೆ. ಉರ್ದು ಶೈಲಿಯ ಕಾವ್ಯವನ್ನು ಸಂಗೀತಕ್ಕೆ ಹೊಂದಿಸುವುದನ್ನು ಒಳಗೊಂಡಿರುವ ವಿಶಿಷ್ಟವಾದ ಗಾಯನ ಶೈಲಿಯನ್ನು ಜನಪ್ರಿಯಗೊಳಿಸಿದ ಕಾರಣದಿಂದ ಅವರು ವ್ಯಾಪಕವಾಗಿ ಗುರುತಿಸಲ್ಪಟ್ಟಿದ್ದಾರೆ.

ಅವರು ಜಗಜಿತ್ ಸಿಂಗ್ ಮತ್ತು ತಲತ್ ಅಝೀಝ್ ಅವರಂತಹ ಜೊತೆಗಾರರ ಜೊತೆಗೆ ಈ ಕಲಾ ಪ್ರಕಾರವನ್ನು ದೇಶಾದ್ಯಂತ ವ್ಯಾಪಕವಾದ ಪ್ರೇಕ್ಷಕರಿಗೆ ಪರಿಚಯಿಸುವಲ್ಲಿ ಬಹುಮುಖ್ಯ ಕೊಡುಗೆ ನೀಡಿದ್ದಾರೆ.

ಉಧಾಸ್ ಏಪ್ರಿಲ್ 17, 1951 ರಂದು ಗುಜರಾತ್‌ನ ಸಾವರ್ಕುಂಡ್ಲಾದಲ್ಲಿ ಜನಿಸಿದ್ದರು. ನಾಮ್ (1986) ಚಿತ್ರದ ‘ಚಿಟ್ಟಿ ಆಯೀ ಹೈ’ ಹಾಡಿನ ಮೂಲಕ ಅವರು ವೃತ್ತಿಪರ ಗಾಯಕರಾಗಿ ಗುರುತಿಸಿಕೊಂಡರು. ಅಂದಿನಿಂದ, ಅವರು ಹಲವಾರು ಆಲ್ಬಂಗಳನ್ನು ರಚಿಸಿದ್ದಾರೆ. ಕನ್ನಡದಲ್ಲಿ ಸುದೀಪ್ ನಾಯಕ ನಟನಾಗಿ ನಟಿಸಿದ್ದ ‘ಸ್ಪರ್ಶ’ ಚಿತ್ರಕ್ಕೂ ಕೂಡ ಹಾಡಿದ್ದು, ಚಿತ್ರದ ‘ಚೆಂದಕ್ಕಿಂತ ಚೆಂದ ನೀನೇ ಸುಂದರ’ ಎಂಬ ಹಾಡನ್ನು ಕೂಡ ಹಾಡಿದ್ದಾರೆ.

ಪ್ರಸಿದ್ಧ ಗಝಲ್ ಗಾಯಕರಾಗಿ ಜಗತ್ತಿನ ವಿವಿಧ ದೇಶಗಳಲ್ಲಿ ಕೂಡ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಹಲವಾರು ಬಾಲಿವುಡ್ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದು, ಜೊತೆಗೆ ಹಿನ್ನೆಲೆ ಗಾಯಕರಾಗಿ ಗುರುತಿಸಿಕೊಂಡಿದ್ದರು. ಇವರ ಸಂಗೀತ ಸೇವೆಯನ್ನು ಗುರುತಿಸಿ 2006ರಲ್ಲಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ, ಗೌರವಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...