ಗುಜರಾತ್ | ಕಡಲ ಕಿನಾರೆಯಲ್ಲಿ ಅನಾಥವಾಗಿ ಬಿದ್ದಿದ್ದ 800 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ

Date:

  • ಗಾಂಧಿಧಾಮ್‌ನಿಂದ 30 ಕಿಮೀ ದೂರದಲ್ಲಿರುವ ಮಿಥಿ ರೋಹರ್ ಗ್ರಾಮದಲ್ಲಿ ಬಿದ್ದಿದ್ದ 80 ಕೆ ಜಿ ಕೊಕೇನ್
  • ಕರಾವಳಿ ಮತ್ತು ಹಳ್ಳಿಗಳಲ್ಲಿ ಗಸ್ತು ಮತ್ತು ತಪಾಸಣೆಯನ್ನು ತೀವ್ರಗೊಳಿಸಿದ ಪೊಲೀಸರು

ಗುಜರಾತ್‌ನ ಕಚ್ ಜಿಲ್ಲೆಯ ಗ್ರಾಮವೊಂದರ ಕಡಲ ಕಿನಾರೆಯಲ್ಲಿ ಅನಾಥವಾಗಿ ಬಿದ್ದಿದ್ದ ಸುಮಾರು 800 ಕೋಟಿ ಮೌಲ್ಯದ 80 ಕೆ ಜಿ ಕೊಕೇನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.

ಸ್ಥಳೀಯ ಪೊಲೀಸರು ಗುರುವಾರ ಬಂದರು ಪಟ್ಟಣ ಗಾಂಧಿಧಾಮ್‌ನಿಂದ 30 ಕಿಮೀ ದೂರದಲ್ಲಿರುವ ಮಿಥಿ ರೋಹರ್ ಗ್ರಾಮದಲ್ಲಿ ನಿರ್ದಿಷ್ಟ ಮಾಹಿತಿಯ ಮೇರೆಗೆ ಗಸ್ತು ತಿರುಗುತ್ತಿದ್ದಾಗ ಕಡಲ ದಡದಲ್ಲಿ ಚದುರಿದ್ದ ಹಲವಾರು ಅನುಮಾನಾಸ್ಪದ ಪ್ಯಾಕೆಟ್‌ ಮತ್ತು ಕೆಲವು ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ್ದಾರೆ.

ತಲಾ ಒಂದು ಕೆಜಿಯ 80 ಪ್ಯಾಕೆಟ್ ಗಳಿದ್ದು, ಅದರಲ್ಲಿ ಕೊಕೇನ್ ಅಂಶವಿರುವುದನ್ನು ವಿಧಿವಿಜ್ಞಾನ ತಜ್ಞರು ಖಚಿತಪಡಿಸಿದ್ದಾರೆ. ಇದರ ಮಾರುಕಟ್ಟೆ ಮೌಲ್ಯವು ಸುಮಾರು 800 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕಚ್ (ಪೂರ್ವ) ಪೊಲೀಸ್ ಅಧೀಕ್ಷಕ ಸಾಗರ್ ಬಾಗ್ಮಾರ್, ಅಂತಾರಾಷ್ಟ್ರೀಯ ಮಾದಕ ಸಾಗಾಟ ಮಾಡುವವರ ಇದೊಂದು ಹೊಸ ರೀತಿಯ ಯೋಜನೆ. ಕೆಲ ನಿರ್ಜನ ಪ್ರದೇಶಗಳಲ್ಲಿ ಮಾದಕ ವಸ್ತುಗಳನ್ನು ಬಿಟ್ಟು ಹೋಗುತ್ತಾರೆ. ಆ ಬಳಿಕ ಅದು ಯಾರಿಗೆ ಸೇರಬೇಕೋ ಅವರು ಬಂದು ಅದನ್ನು ತೆಗೆದುಕೊಳ್ಳುತ್ತಾರೆ. ಪೊಲೀಸರು ಕೈಗೆ ಸಿಕ್ಕಿ ಬೀಳುವ ಭಯದಿಂದ ನೇರವಾಗಿ ಹಸ್ತಾಂತರಿಸುವುದಿಲ್ಲ. ಈ ಪ್ರಕರಣ ಅದಕ್ಕೆ ಸಾಕ್ಷಿ” ಎಂದು ತಿಳಿಸಿದ್ದಾರೆ.

cocaine gujarat

“ಡ್ರಗ್ಸ್ ವಿರುದ್ಧದ ನಮ್ಮ ಅಭಿಯಾನದ ಭಾಗವಾಗಿ ನಾವು ಕರಾವಳಿ ಮತ್ತು ಹಳ್ಳಿಗಳಲ್ಲಿ ಗಸ್ತು ಮತ್ತು ತಪಾಸಣೆಯನ್ನು ತೀವ್ರಗೊಳಿಸಿದ್ದೇವೆ. ಈಗ ದೊರೆತಿರುವ ಕೊಕೇನನ್ನು ರವಾನಿಸಿದವರು ಯಾರು ಎಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದೇವೆ” ಎಂದು ಬಾಗ್ಮಾರ್ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ), ಗಡಿ ಭದ್ರತಾ ಪಡೆ (ಬಿಎಸ್ಎಫ್), ಗುಜರಾತ್ ಸೇರಿದಂತೆ ವಿವಿಧ ಕಡೆಗಳಲ್ಲಿ ಹಾಗೂ ಪಾಕಿಸ್ತಾನಕ್ಕೆ ಹತ್ತಿರವಿರುವ ಜಿಲ್ಲೆಯಲ್ಲಿ ಇಂತಹ ಹಲವಾರು ಸರಕುಗಳನ್ನು ವಶಪಡಿಸಿಕೊಂಡಿವೆ.

ಕಳೆದ ವರ್ಷವು ಮುಂದ್ರಾ ಬಂದರಿನಲ್ಲಿ ಕಂಟೈನರ್‌ನಲ್ಲಿ ಬಟ್ಟೆಯ ರೋಲ್‌ಗಳಲ್ಲಿ ಬಚ್ಚಿಟ್ಟಿದ್ದ 376 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...