ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಜಯೋತ್ಸವ ಆಚರಿಸಿದ್ದ ವಿಕೃತ ಆರೋಪಿಗಳ ಬಂಧನ

Date:

ಹಾವೇರಿ ಜಿಲ್ಲೆಯಲ್ಲಿ‌ ನಡೆದಿದ್ದ ಸಾಮೂಹಿಕ‌ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು‌ ಪಡೆದು ಹೊರಬಂದು ವಿಜಯೋತ್ಸವ ಆಚರಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ವರ್ಷದ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ಬಳಿಯ ಹೋಟೆಲ್‌ನಲ್ಲಿ ತಂಗಿದ್ದ ಜೋಡಿಯೊಂದಕ್ಕೆ ಕಾಮುಕರ ಗುಂಪು ಥಳಿಸಿ, ಮಹಿಳೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾವಾರ ಎಸಗಿತ್ತು. ಪ್ರಕರಣದಲ್ಲಿ ಏಳು ಮಂದಿ ಪ್ರಮುಖ ಆರೋಪಿಗಳು ಹಾಗೂ ಅವರಿಗೆ ಸಹಕಾರ ನೀಡಿದ್ದ 12 ಮಂದಿ ಇತರ ಆರೋಪಿಗಳನ್ನು ಬಂಧಿಸಲಾಗಿತ್ತು.

ಇತ್ತೀಚೆಗೆ, ಪ್ರಮುಖ ಏಳು ಮಂದಿ ಆರೋಪಿಗಳಿಗೆ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದು ಹೊರ ಬಂದ ಆರೋಪಿಗಳು ಹಾವೇರಿಯಿಂದ ಅಕ್ಕಿಹಾಲೂರುವರೆಗೆ ಬೈಕ್‌ ಮತ್ತು ಕಾರುಗಳಲ್ಲಿ‌ ವಿಜಯೋತ್ಸವ ಮೆರವಣಿಗೆ ಮಾಡಿದ್ದರು. ಅವರ ಸಂಭ್ರಮಾಚಣೆಯ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ವೈರಲ್ ಆದ ಬೆನ್ನಲ್ಲೇ ಹಾನಗಲ್ ಪಿಎಸ್‌ಐ ದೀಪಾಲಿ ಗುಡೋಡಗಿ ಅವರು ಆರೋಪಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು.

ಆರೋಪಿಗಳಾದ ಆಫ್ತಾಬ್ ಚಂದನಕಟ್ಟಿ, ಮದಾರ್ ಸಾಬ್ ಮಂಡಕ್ಕಿ, ಸಮಿವುಲ್ಲಾ ಲಾಲನವರ್, ಮೊಹಮ್ಮದ್ ಸಾದಿಕ್ ಅಗಸಿಮನಿ, ಶೋಯಿಬ್ ಮುಲ್ಲಾ, ತೌಸೀಫ್ ಚೋಟಿ ಹಾಗೂ ರಿಯಾಜ್ ಸವಿಕೇರಿ ಎಂಬವರನ್ನು ಬಂಧಿಸಿದ್ದಾರೆ.

‘ಏಳು ಆರೋಪಿಗಳನ್ನು ನ್ಯಾಯಾಧೀಶರ ಎದುರು ಶನಿವಾರ ಹಾಜರುಪಡಿಸಲಾಗಿದೆ. ಆರೋಪಿಗಳನ್ನು ಜೂನ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ” ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಲ್‌.ವೈ. ಶಿರಕೋಳ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...