ಮಗನ ಕಾಲೇಜು ಶುಲ್ಕ ಕಟ್ಟಲು ಬಸ್ಸಿನ ಮುಂದೆ ಜಿಗಿದು ಪ್ರಾಣತೆತ್ತ ತಾಯಿ!

Date:

  • ₹45 ಸಾವಿರ ಕಾಲೇಜು ಶುಲ್ಕ ಕಟ್ಟಲು ಒದ್ದಾಡುತ್ತಿದ್ದ ತಾಯಿ
  • ತಮಿಳುನಾಡಿನ ಸೇಲಂನಲ್ಲಿ ಕಳೆದ ಜೂ. 28ರಂದು ನಡೆದಿದ್ದ ಅಪಘಾತ ಪ್ರಕರಣ

ಮಗನ ಕಾಲೇಜು ಶುಲ್ಕ ಕಟ್ಟಲು ಕಷ್ಟಪಡುತ್ತಿದ್ದ ತಾಯಿಯೋರ್ವಳು, ಅಪಘಾತದಿಂದ ಪ್ರಾಣ ಕಳೆದುಕೊಂಡರೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬ ತಪ್ಪು ಮಾಹಿತಿ ಪಡೆದುಕೊಂಡು ಬಸ್ಸಿನ ಮುಂದೆ ಜಿಗಿದು ಪ್ರಾಣತೆತ್ತ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕಳೆದ ಜೂನ್ 28ರಂದು ತಮಿಳುನಾಡಿನ ಸೇಲಂನಲ್ಲಿ ಮಹಿಳೆಯೋರ್ವರು, ಬಸ್ಸು ಬರುತ್ತಿರುವುದನ್ನು ಗಮನಿಸಿಯೇ ರಸ್ತೆ ದಾಟಲು ಪ್ರಯತ್ನಿಸಿ, ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.

ಘಟನೆಯ ಬಳಿಕ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಈ ಬಗ್ಗೆ ತನಿಖೆ ನಡೆಸಿದಾಗ, ಮಗನ ಕಾಲೇಜು ಫೀಸು ಕಟ್ಟಲು ತಾಯಿ ಪ್ರಾಣ ಬಲಿ ಕೊಟ್ಟಿದ್ದಾರೆ ಎಂಬ ಸತ್ಯಾಂಶ ಹೊರಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಅಪಘಾತದಿಂದ ಮೃತಪಟ್ಟ ಮಹಿಳೆಯನ್ನು 45ರ ಹರೆಯದ ಪಾಪತಿ ಎಂದು ಗುರುತಿಸಲಾಗಿದೆ. ಜೂ. 28 ರಂದು ವೇಗವಾಗಿ ಬಂದ ಬಸ್‌ ಡಿಕ್ಕಿ ಹೊಡೆದ ಬಳಿಕ ಸಾವನ್ನಪ್ಪಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ಅಪಘಾತ ಸಂತ್ರಸ್ತರಿಗೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂದು ಯಾರೋ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಹಾಗಾಗಿ ತಾನು ಅಪಘಾತದಿಂದ ಸತ್ತರೆ ತನ್ನ ಮಗನ ಕಾಲೇಜು ಶುಲ್ಕ 45,000 ರೂಪಾಯಿಗಳನ್ನು ಪಾವತಿಸಲು ಸರ್ಕಾರದಿಂದ ಆರ್ಥಿಕ ಸಹಾಯ ಸಿಗುತ್ತದೆ ಎಂದು ನಂಬಿದ್ದರು. ಈ ಹಿನ್ನೆಲೆಯಲ್ಲಿ ಆ ಮಹಿಳೆ ಈ ನಿರ್ಧಾರ ಕೈಗೊಂಡಿದ್ದಾರೆ. ಸೇಲಂನ ಕಲೆಕ್ಟರ್ ಕಚೇರಿಯಲ್ಲಿ ನೈರ್ಮಲ್ಯ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೂ ಕೂಡ ಒಳಗಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಅದೇ ದಿನ, ಪಾಪತಿ ಬಸ್ಸಿನ ಮುಂದೆ ಜಿಗಿಯಲು ಆರಂಭಿಕ ಪ್ರಯತ್ನವನ್ನು ಮಾಡುವಾಗಲೇ ಇವರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿತ್ತು. ಸ್ವಲ್ಪ ಸಮಯದ ನಂತರ ಇನ್ನೊಂದು ಬಸ್ಸಿನ ಮುಂದೆ ಜಿಗಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತವೆಂದರೆ, ಪತಿಯಿಂದ ಬೇರ್ಪಟ್ಟಿದ್ದ ನಂತರ ಪಾಪತಿಯು ಕಳೆದ 15 ವರ್ಷಗಳಿಂದ ತನ್ನ ಮಕ್ಕಳನ್ನು ಒಂಟಿಯಾಗಿಯೇ ಕಷ್ಟಪಟ್ಟು ಬೆಳೆಸಿದ್ದರು.

ಅಂದಿನ ಘಟನೆಯ ವಿಡಿಯೋವನ್ನು ಟ್ವಿಟರ್‍‌ನಲ್ಲಿ ಹಂಚಿಕೊಂಡಿರುವ ಅರವಿಂದ್ ಗುಣಶೇಖರ್ ಎಂಬುವವರು, ‘ಮಗನ ಕಾಲೇಜ್ ಫೀಸ್ ಕಟ್ಟಲು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ದುರ್ಬಲ ಪರಿಸ್ಥಿತಿಯಲ್ಲಿ ನಾವು ಬದುಕುತ್ತಿದ್ದೇವೆ. ಆದರೂ ನಾವು ‘ಅಭಿವೃದ್ಧಿ’ಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಹಲವಾರು ನೆಟ್ಟಿಗರು ಕಮೆಂಟ್ ಮಾಡಿದ್ದು, ‘ನಿಜಕ್ಕೂ ಇದೊಂದು ಹೃದಯ ವಿದ್ರಾವಕ ಘಟನೆ. ಇದಕ್ಕೆಲ್ಲ ರಾಜಕೀಯ ಸೇರಿದಂತೆ ನಮ್ಮ ಸಮಾಜದಲ್ಲಾಗುವ ಬೆಳವಣಿಗೆಗಳೇ ಕಾರಣ. ಈ ರೀತಿ ಆಗಬಾರದಿತ್ತು. ನಮ್ಮ ಬಗ್ಗೆಯೇ ನಾವು ಚಿಂತಿಸಿಕೊಳ್ಳಬೇಕಾದ ಸಂದರ್ಭ ಇದು’ ಎಂದು ಕನಿಕರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...