ಹೇಮಾವತಿ ಯೋಜನೆ | ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲ ತಾಲೂಕಿಗೂ ನೀರು: ಡಿ ಕೆ ಶಿವಕುಮಾರ್

Date:

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲ ತಾಲೂಕಿಗೂ ನೀರು ಒದಗಿಸಲು ಹೇಮಾವತಿ ಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ” ಎಂದರು.

“ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸ್ಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ನೀರನ್ನು ಹಂಚಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಿತಕಾಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜಕೀಯ ಮೇಲಾಟಕ್ಕೆ ಬಲಿಯಾದ ಹೇಮಾವತಿ ಯೋಜನೆ: ಡಿಸಿಎಂ ಎದುರೇ ಜನಪ್ರತಿನಿಧಿಗಳ ಕಿತ್ತಾಟ

“ನಮ್ಮ ಸರ್ಕಾರ ಇದ್ದಾಗ ಯೋಜನೆ ಆರಂಭಿಸಿ ಕಾಮಗಾರಿ ನಡೆಸಿದ್ದೆವು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ನನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ವಾಪಸ್ ಪಡೆದರು. ಈ ಯೋಜನೆ ಮುಂದುವರಿಸುವುದಾಗಿ ಯಡಿಯೂರಪ್ಪ ಹೇಳಿದರೂ ನಂತರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದರು. ಇದೆಲ್ಲವೂ ಸರ್ಕಾರದ ತೀರ್ಮಾನ. ಮೆಡಿಕಲ್ ಕಾಲೇಜು ನಿರ್ಮಾಣದ ಯೋಜನೆ 600 ಕೋಟಿಯಿಂದ 900 ಕೋಟಿಗೆ ಏರಿಕೆಯಾಗಿದೆ. ಇದಕ್ಕೆ ಜವಾಬ್ದಾರಿ ಯಾರು” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...