ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್‌

Date:

ಸಂಘಪರಿವಾರದ ಮುಖಂಡ, ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದರಿಂದ ಮಧ್ಯರಾತ್ರಿ 1 ಗಂಟೆಗೆ ಸೂಲಿಬೆಲೆ ಅವರನ್ನು ತಡೆದ ಪೊಲೀಸರು ವಾಪಸ್ ಕಳುಹಿಸಿದ್ದರು.

ಕಲಬುರಗಿ ಜಿಲ್ಲೆಯ ಕಮಲಾಪೂರ ಬಳಿ ಮಧ್ಯರಾತ್ರಿ ಬೀದರ್ ಜಿಲ್ಲೆಯ ಬಾಲ್ಕಿಯಿಂದ ಕಲಬುರಗಿ ಜಿಲ್ಲೆಯೊಳಗೆ ಆಗಮಿಸಲು ಪೊಲೀಸರು ಬಿಡಲಿಲ್ಲ. ಸೂಲಿಬೆಲೆ ಚಕ್ರವರ್ತಿ ಅವರಿಗೆ ಕಲಬುರಗಿ ಜಿಲ್ಲೆಗೆ ಪ್ರವೇಶ ನಿಬಂಧ ವಿಧಿಸಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಆದೇಶ ಹೊರಡಿಸಿದ್ದರು.

ಚಕ್ರವರ್ತಿ ಸೂಲಿಬೆಲೆ ಪ್ರಚೋದನಾಕಾರಿ ಭಾಷಣದಿಂದ ಶಾಂತಿಗೆ ಧಕ್ಕೆ ಬರುವ ಸಾಧ್ಯತೆ ಎನ್ನುವ ಕಾರಣಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಒಂದು ಗಂಟೆಗೆ ಸೂಲಿಬೆಲೆಯವರನ್ನು ಕಮಲಾಪೂರ ಪೊಲೀಸರು ತಡೆದಿದ್ದರು. ಉಪವಿಭಾಗಾಧಿಕಾರಿ ಅವರ ಆದೇಶದ ಹಿನ್ನಲೆ ಸೂಲಿಬೆಲೆ ಅವರಿಗೆ ಜಿಲ್ಲೆಯೊಳಗೆ ಪ್ರವೇಶಕ್ಕೆ ಅವಕಾಶ ನೀಡದೇ ಮರಳಿ ಬೀದರ್ ಕಡೆಗೆ ಕಳುಹಿಸಿದ್ದರು. ಈ ವೇಳೆ ಪೊಲೀಸರು ಮತ್ತು ಸೂಲಿಬೆಲೆ ಚಕ್ರವರ್ತಿ ನಡುವೆ ವಾಗ್ವಾದ ಕೂಡ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ ಪಟ್ಟಣದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಕ್ರವರ್ತಿ ಸೂಲಿಬೆಲೆ ಹೊರಟಿದ್ದರು. ಕಲಬುರಗಿ ಜಿಲ್ಲಾ ಗಡಿ ಪ್ರವೇಶ ತಡೆದದ್ದನ್ನು ಪ್ರಶ್ನಿಸಿ ಬಿಜೆಪಿ ನಾಯಕರು ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯವು ಜಿಲ್ಲಾಡಳಿತ ವಿಧಿಸಿದ್ದ ತಡೆಯಾಜ್ಞೆಯನ್ನು ಕಲಬುರಗಿ ಹೈಕೋರ್ಟ್‌ ತೆರವುಗೊಳಿಸಿರುವುದಾಗಿ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

“ನಮೋ ಭಾರತ್ ಕಾರ್ಯಕ್ರಮವನ್ನು ಅನೇಕ ಕಡೆ ತಡೆಯುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಕೆಲಸ ಆಗಿದೆ. ಪ್ರಧಾನಿ ಮೋದಿ ಸಾಧನೆ ಬಗ್ಗೆ ಮಾತನಾಡುವುದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ” ಎಂದು ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...