ಬೀದರ್‌ | ಅಪ್ರಾಪ್ತರು ವಾಹನ ಚಲಾಯಿಸಿದರೆ ಪೋಷಕರಿಗೆ ₹25 ಸಾವಿರ ದಂಡ

Date:

18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸಲು ಕೊಟ್ಟರೆ ಪೋಷಕರಿಗೆ ₹25 ಸಾವಿರ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪ್ರಾದೆಶೀಕ ಸಾರಿಗೆ ಅಧಿಕಾರಿ ಜಿ.ಕೆ.ಬಿರಾದರ್ ಹೇಳಿದರು.

ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಸಿದ್ದರಾಮೇಶ್ವರ ಪಿಯು ಕಾಲೇಜಿನಲ್ಲಿ ಸಂತಪೂರ ಪೊಲೀಸ್‌ ಠಾಣೆ ಹಾಗೂ ಬೀದರ್ ಮೋಟಾರ್ ವಾಹನ ತರಬೇತಿ ಶಾಲೆ ಸಂಘದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಅಪಘಾತ ರಹಿತ ವಾಹನ ಚಲಾಯಿಸಲು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು. ವಾಹನ ಪರವಾನಿಗೆ ಇಲ್ಲದೇ ವಾಹನ ಚಲಾಯಿಸುವುದು ಹಾಗೂ ಮದ್ಯ ಕುಡಿದು ವಾಹನ ಚಲಾಯಿಸುವುದು ಅಪರಾಧʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತಪೂರ ಠಾಣೆ ಪಿಎಸ್‌ಐ ನಂದಕುಮಾರ ಮಾತನಾಡಿ, ʼದ್ವಿಚಕ್ರ ವಾಹನದ ಮೇಲೆ ಇಬ್ಬರಿಗಿಂತ ಹೆಚ್ಚು ಜನ ಕೂಡುವಂತಿಲ್ಲ. ವಾಹನ ಚಲಾಯಿಸುವಾಗ ಮೊಬೈಲ್ ಬಳಸಬಾರದು. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವಾಗ ಯಾವುದೇ ತೊಂದರೆಯಾದರೆ ಕೂಡಲೇ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದುʼ ಎಂದು ಸಲಹೆ ನೀಡಿದರು.

ಹಿರಿಯ ಮೋಟಾರ್ ವಾಹನ ನಿರೀಕ್ಷಕ ಡಿ.ನಾಗರಾಜ ಮಾತನಾಡಿ, ʼವಾಹನ ಚಾಲನೆ ಮಾಡುವಾಗ ವೇಗ ಮಿತಿಯಲ್ಲಿ ಇರಬೇಕು ಹಾಗೂ ಪುಟ್ಟ ಕೆಲಸಗಳಿಗೆ ವಾಹನ ಉಪಯೋಗಿಸಬಾರದುʼ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತಾನಾಡಿ, ʼಸಂಚಾರ ನಿಯಮಗಳ ಪಾಲನೆ ಕುರಿತು ಆಯೋಜಿಸಿರುವ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ರಸ್ತೆ ಸುರಕ್ಷತೆಯ ನಿಯಮಗಳನ್ನು ಎಲ್ಲರೂ ಪಾಲಿಸೋಣʼ ಎಂದು ಹೆಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?

ಕಾರ್ಯಕ್ರಮದಲ್ಲಿ ಮೋಟಾರ್ ವಾಹನ ನಿರೀಕ್ಷಕ ಅಶ್ವಿನ ರೆಡ್ಡಿ, ಬೀದರ್ ಮೋಟಾರ್ ವಾಹನ ತರಬೇತಿ ಶಾಲೆ ಸಂಘದ ಅಧ್ಯಕ್ಷ ಪ್ರಕಾಶ ಗುಮ್ಮೆ‌, ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವರಾಜ ಜಮಾದರ, ವಿದ್ಯಾರ್ಥಿ ಮುಖಂಡ ರತ್ನದೀಪ ಕಸ್ತೂರೆ ಸೇರಿದಂತೆ ಕಾಲೇಜಿನ ಬೋಧಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...