ಗುರುಮಠಕಲ್‌ನಲ್ಲಿ ₹1.21 ಕೋಟಿ ಮೌಲ್ಯದ ಪಡಿತರ ಅಕ್ಕಿ ಅಕ್ರಮ ದಾಸ್ತಾನು : ತನಿಖೆ ಸಿಐಡಿಗೆ

Date:

ಯಾದಗಿರಿ ಜಿಲ್ಲೆಯ ಗುರಮಿಠಕಲ್‌ನಲ್ಲಿ ₹1.21 ಕೋಟಿ ಮೌಲ್ಯದ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದೆ.

ಸೆ.8 ರಂದು ನರೇಂದ್ರ ರಾಠೋಡ ಹಾಗೂ ಅಯ್ಯಪ್ಪ ರಾಠೋಡ ಅವರಿಗೆ ಸೇರಿದ ಲಕ್ಷ್ಮಿ ವೆಂಕಟೇಶ್ವರ ಮತ್ತು ಲಕ್ಷ್ಮಿ ಬಾಲಾಜಿ ಇಂಡಸ್ಟ್ರೀಸ್ ಮಿಲ್‌ಗಳಲ್ಲಿ ಅಕ್ರಮವಾಗಿ 3,985 ಕ್ವಿಂಟಲ್‌ ಪಡಿತರ ಅಕ್ಕಿ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ಈ ವಿಚಾರವಾಗಿ ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.

‘ಗುರಮಿಠಕಲ್ ‌ಪ್ರಕರಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಅನೀಲಕುಮಾರ ಹೆಚ್.ದವಳಗಿ, ರವರು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಜವಾಬ್ದಾರಿಯುತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೇ ಕರ್ತವ್ಯದಲ್ಲಿ ನಿರ್ಲ್ಯಕ್ಷತೆ ಮತ್ತು ಬೇಜವಾಬ್ದಾರಿತನ ತೋರಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಸದರಿಯವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೆಪ್ಟೆಂಬರ್ 11ರಂದು ಜಿಲ್ಲಾಧಿಕಾರಿಗಳು ವರದಿಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿಗಳ ವರದಿ ದೃಢಪಡಿಸಿ ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಯಾದಗಿರಿ ಜಿಲ್ಲೆ ಹುದ್ದೆಯಲ್ಲಿ ಮುಂದುವರೆಸುವುದು ಸೂಕ್ತವಲ್ಲವೆಂದು ತೀರ್ಮಾನಿಸಿ ಸದರಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಮಾತೃ ಇಲಾಖೆಯಾದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಹಿಂದಿರುಗಿಸಿ ಸೆಪ್ಟೆಂಬರ್ 16ರಂದು ಆಹಾರ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹಮೂರ್ತಿ ಜಿ.ಕೆ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಿಂಗಾಪುರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ : ₹4.66 ಲಕ್ಷ ಕಳೆದುಕೊಂಡ ಶಿಕ್ಷಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...