ಜ.12ರಂದು ಲೋಕಾರ್ಪಣೆಗೊಳ್ಳಲಿದೆ ದೇಶದ ಅತಿ ಉದ್ದದ ಸಮುದ್ರ ಸೇತುವೆ

Date:

ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL)ಜನವರಿ 12 ರಂದು ಉದ್ಘಾಟನೆಗೊಳ್ಳಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಅವರು, ಜ.12ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

“ಈ ಸೇತುವೆಯಿಂದ ಆರ್ಥಿಕತೆ ಅಭಿವೃದ್ಧಿಯಾಗಲಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. ಆರು ಲೇನ್ ಮಾರ್ಗ ಹೊಂದಿದ್ದು, ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ ‘ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು’ ಎಂದು ಹೆಸರನ್ನು ಇಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇತುವೆಯ ವಿಶೇಷತೆ ಏನು?
ಈ ಯೋಜನೆಯು ಸರಿಸುಮಾರು 22 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ.

1962ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು.

2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌ ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದಕ್ಕೆ ಹೋಗಿತ್ತು. ಈಗ ಜನವರಿಯಲ್ಲಿ ಉದ್ಘಾಟನೆಯಾಗುತ್ತಿದೆ.

ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 16,904.43 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಕೇಳಿದ್ದ ಪ್ರಶ್ನೆಯೊಂದಕ್ಕೆ ಅಧಿಕಾರಿಗಳಿಂದ ಉತ್ತರ ದೊರಕಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...