ಒಳಮೀಸಲಾತಿ | ಆಯೋಗದಿಂದ ನಾಲ್ಕು ಶಿಫಾರಸು, ಸಮಿತಿ ಅವಧಿ 60 ದಿನಕ್ಕೆ ವಿಸ್ತರಣೆ: ಎಚ್‌ ಕೆ ಪಾಟೀಲ್

Date:

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ‌ವಿಚಾರಣಾ ಆಯೋಗ ತನ್ನ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ನಾಲ್ಕು ಶಿಫಾರಸುಗಳನ್ನು ಸೂಚಿಸಿದೆ.

ನಾಲ್ಕು ಶಿಫಾರಸು

1 ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ, ಹೊಸದಾದ ಸಮೀಕ್ಷೆ ಮಾಡಿ ದತ್ತಾಂಶ ಸಂಗ್ರಹಿಸುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2 ಆಧುನಿಕ ವಿಜ್ಞಾನ ತಂತ್ರಜ್ಞಾನಗಳ ಸಾಧನ ಬಳಸಿ 30-40 ದಿವಸದೊಳಗೆ ಹೊಸದಾದ ಸಮೀಕ್ಷೆ ನಡೆಸುವುದು.

3 ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ಧಪಡಿಸಬೇಕು, ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು? ಸಮೀಕ್ಷೆ ಮಾಡುವ ಸಿಬ್ಬಂದಿ ತರಬೇತಿ ಅಗತ್ಯವಿರುವ ಸಂಪನ್ಮೂಲಗಳ ಕ್ರೋಢೀಕರಣ ಇತ್ಯಾದಿಗಳ ಉಸ್ತುವಾರಿ ನೋಡಿಕೊಳ್ಳಲು ಉನ್ನತ ಮಟ್ಟದ ಸಮಿತಿ ರಚಿಸುವುದು.

4 ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಮಧ್ಯಂತರ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯ ಉಪಜಾತಿಗಳ ವರ್ಗೀಕರಣ ಮಾಡಿ, ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇರೆಗೆ ಹಂಚಿಕೆ ಮಾಡುವುದು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಅವರು ಸುದ್ದಿಗೋಷ್ಠಿ ನಡೆಸಿ ಸಂಪುಟದ ನಿರ್ಧಾರಗಳ ಬಗ್ಗೆ ವಿವರಿಸಿದರು.

“ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. ಹೊಸ ದತ್ತಾಂಶ ಸಂಗ್ರಹಿಸಲು ಸಚಿವ ಸಂಪುಟ ನಾಗಮೋಹನದಾಸ್‌ ಸಮಿತಿ ಅವರನ್ನೇ ಕೇಳಿಕೊಳ್ಳುವ ನಿರ್ಣಯ ಮಾಡಿದೆ. ಈ ಕಾರ್ಯ ಮುಗಿಸಲು 40 ದಿನ ಅವರು ಕೇಳಿದ್ದಾರೆ. ನಾವು 60 ದಿನಗಳ ಕಾಲಾವಕಾಶ ಕೊಟ್ಟು, ಅಂತಿಮ ವರದಿ ಸಲ್ಲಿಸಲು ಸಮಿತಿಯ ಅವಧಿಯನ್ನು ಎರಡು ತಿಂಗಳಿಗೆ ವಿಸ್ತರಿಸಲಾಗಿದೆ” ಎಂದು ಸಚಿವರು ವಿವರಿಸಿದರು.

ಸಮಿತಿಯ ಶಿಫಾರಸ್ಸುಗಳಲ್ಲಿ ಹೊಸ ವಿಷಯಗಳೇನಿದೆ ಹಾಗೂ ಎರಡು ತಿಂಗಳ ಕಾಲಾವಧಿಯಲ್ಲಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವೇ ಎಂಬ ಪತ್ರಕರ್ತರ ಪ್ರಶ್ನೆ ಪ್ರತಿಕ್ರಿಯೆ ನೀಡಿದ ಸಚಿವರು, “ರಾಜ್ಯದಲ್ಲಿ ಆರು ಸಾವಿರ ಪಂಚಾಯತಿ ಹಾಗೂ 300 ಕ್ಕೂ ಹೆಚ್ಚು ವಾರ್ಡ್ಗಗಳಿವೆ. ಈ ಕಾರ್ಯವನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗಳ ಉಸ್ತುವಾರಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ತೀವ್ರಗತಿಯಲ್ಲಿ ಕೈಗೊಳ್ಳಲು ಸಚಿವಸಂಪುಟ ಸೂಚನೆ ನೀಡಿದೆ. ಆಯೋಗವು ಸಮೀಕ್ಷೆ ಕೈಗೊಳ್ಳಲು ಬೇಕಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿಗಳ ಸಭೆ ನಡೆಸಲಾಗುವುದು. ಕಾಂಗ್ರೆಸ್ ಸರ್ಕಾರವು ಮೀಸಲಾತಿ ಸೌಲಭ್ಯ ನೀಡಲು ಬದ್ಧವಾಗಿದ್ದು, ಭವಿಷ್ಯದಲ್ಲಿ ಯಾವುದೇ ಗೊಂದಲಗಳಾಗದಂತೆ ದತ್ತಾಂಶಗಳು ಕರಾರುವಕ್ಕಾಗಿ ಪಡೆಯಲು ಹಾಗೂ ಹಾಗೂ ಜನರಿಗೆ ಮೀಸಲಾತಿಯ ಅನುಕೂಲ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದರು.

“ಈ ಹಿಂದೆ ನಡೆಸಲಾಗಿರುವ ಜನಗಣತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ , ಆದಿ ಆಂಧ್ರ,ಎಸ್ ಸಿ ವರ್ಗಗಳ ಮಾಹಿತಿಗಳು ವರದಿಯಲ್ಲಿ ಇರುವುದಿಲ್ಲ. ಈ ದತ್ತಾಂಶಗಳಿಲ್ಲದೇ ಹೋದರೆ ಕಾನೂನಿನಡಿ ಮಾನ್ಯವಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ” ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹಾದೇವಪ್ಪ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...