ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

Date:

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳಿಂದ ಫಲಾನುಭವಿಗಳಿಗೆ ಪಾವತಿಯಾಗಿಲ್ಲ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಹೇಳಿದ್ದಾರೆ.

ಜನರಿಗೆ ಭರವಸೆ ನೀಡಿದ ಕಾಂಗ್ರೆಸ್‌ ಸರ್ಕಾರ ಇದೀಗ ಮೂರು ತಿಂಗಳಿಂದ ಗೃಹಲಕ್ಷ್ಮಿ ಹಣ ಪಾವತಿಸದೆ ಇರುವುದರಿಂದ ಜನರು ಕಾದು ನೋಡುವಂತಾಗಿದೆ. ಇದು ಪ್ರಜಾಪ್ರಭುತ್ವದ ಹಾಗೂ ಮಹಿಳಾ ಸಬಲೀಕರಣದ ಧೋರಣೆಯ ವಿರುದ್ಧದ ನಡೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗೆ ಸಾಕಷ್ಟು ಹಣ ಇದೆ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಕಾಂಗ್ರೆಸ್‌ ಮುಖ್ಯಮಂತ್ರಿಗಳು ಸೇರಿದಂತೆ ನಾಯಕರು ಹೇಳುತ್ತಾರೆ. ಹಾಗಾದರೆ ಮೂರು ತಿಂಗಳಿಂದ ಹಣ ಪಾವತಿಸದೇ ಇರುವುದು ಯಾಕೆ ಎಂಬ ಅನುಮಾನ ಕಾಡುತ್ತದೆ. ಪ್ರತಿ ತಿಂಗಳು ನಿಗದಿಪಡಿಸಿದ ದಿನದಂದು ಗೃಹಲಕ್ಷ್ಮೀ ಹಣ ಪಾವತಿಸಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮೂವರು ತಿಂಗಳಿಂದ ಬಾಕಿ ಉಳಿಸಿಕೊಂಡ ಗೃಹಲಕ್ಷ್ಮೀ ಹಣವನ್ನು ಬಿಡುಗಡೆಗೊಳಿಸಿ ಕೊಟ್ಟ ಭರವಸೆ ಉಳಿಸಿಕೊಳ್ಳಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪಾಠ ಕಲಿಯದ ಪ್ರಜ್ವಲ್‌, ಕಲಿಸಿದ್ದು ಯಾರಿಗೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...