ಕೊರಟಗೆರೆ | ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ಕ್ರಿಯಾ ಯೋಜನೆ : ಪಪಂ ಸದಸ್ಯರ ಆಕ್ರೋಶ

Date:

ಕೊರಟಗೆರೆ ಪಟ್ಟಣದ ಪಂಚಾಯಿತಿ ಅಧ್ಯಕ್ಷರು,  ಸದಸ್ಯರ ಜೊತೆ ಚರ್ಚಿಸದೆ ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು 2025-26ನೇ ಸಾಲಿನ ಅಭಿವೃದ್ಧಿಯ ಕ್ರಿಯಾ ಯೋಜನೆ ತಯಾರಿಸಿದ್ದಾರೆ ಎಂದು ಸಾಮಾನ್ಯ ಸಭೆಯಲ್ಲಿ ಮಂಗಳವಾರ ಸದಸ್ಯರು ಆಕ್ರೋಶ ಹೊರಹಾಕಿದರು.

ಮೇ.29ರಂದು ಮ.12:30 ಆದರೂ ಆಯೋಜಿಸಿದ್ದ ಸಾಮಾನ್ಯ ಸಭೆ ಆರಂಭವಾಗಿರಲ್ಲಿಲ್ಲ ಏಕೆ?. ಪೌರಕಾರ್ಮಿಕರ ಪ್ರತಿಭಟನೆ ಹಿನ್ನೆಲೆ ರದ್ದುಪಡಿಸಿದ ಸಭೆ ಪುನಃ ನಡೆಸುವ ಉದ್ದೇಶವೇನಿತ್ತು?. ಮತ್ತೇ ಸಭೆಯೇ ಕರೆದಿಲ್ಲ,  ಆದರೂ ಸಹ ಕ್ರಿಯಾಯೋಜನೆ ಸಿದ್ದವಾಗಿದೆ. ಸದಸ್ಯರ ಒಪ್ಪಿಗೆಯಂತೆ ಆಕ್ಷನ್ ಪ್ಲಾನ್ ಮಾಡಿದ್ದೀರಾ, ಜಿಲ್ಲಾಧಿಕಾರಿಗಳನ್ನು ಮೆಚ್ಚಿಸಲು ಕೆಲಸ ಮಾಡುತ್ತಿದ್ದೀರಾ ಎಂದು ಕೆಲ ಸದಸ್ಯರು ಅಧ್ಯಕ್ಷೆ, ಉಪಾಧ್ಯಕ್ಷೆ, ಸ್ಥಾಯಿ ಸಮಿತಿ ಅಧ್ಯಕ್ಷೆ ವಿರುದ್ದ ಅಸಾಮಾಧಾನ ವ್ಯಕ್ತಪಡಿಸಿದರು.

ಗೃಹ ಸಚಿವರು ಸೂಚನೆ ನೀಡಿದ್ದರೂ ಗೃಹ ಭಾಗ್ಯ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ, ಪೌರ ಕಾರ್ಮಿಕರಿಗೆ ನಿರ್ಮಿಸಿದ ಮನೆಗಳೂ ಏಕೆ ಈವರೆಗೂ ಹಸ್ತಾಂತರವಾಗಿಲ್ಲ. ಗೃಹ ಸಚಿವರು ಸರ್ಕಾರದಿಂದ ವಿಶೇಷವಾಗಿ ಲಕ್ಷಾಂತರ ಅನುದಾನವನ್ನು ಬಿಡುಗಡೆಗೊಳಿಸಿದರೂ ನಗರದಲ್ಲಿ ಅಭಿವೃದ್ಧಿ ಕೆಲಸ ಮಾತ್ರ ಆಗುತ್ತಿಲ್ಲ ಎಂದು ಸದಸ್ಯರು ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025-26ನೇ ಸಾಲಿನ ಕ್ರಿಯಾ ಯೋಜನೆ

2025-26ನೇ ಸಾಲಿನ ೧೫ನೇ ಹಣಕಾಸು ಯೋಜನೆಯಡಿ 83 ಲಕ್ಷ ಬಿಡುಗಡೆಗೊಂಡಿದೆ. ೮೩ಲಕ್ಷ ವೆಚ್ಚದಲ್ಲಿ ಪಟ್ಟಣಕ್ಕೆ ಅಮೃತ್ 2.೦ ಯೋಜನೆಗೆ ತಗಲುವ ವೆಚ್ಚ 24.90ಲಕ್ಷ, ಘನ ತ್ಯಾಜ್ಯ ನಿರ್ವಹಣೆಗೆ 24.90ಲಕ್ಷ, ಪ.ಪಂ ಕಚೇರಿ ಮುಂಭಾಗ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಸೋಲಾರ್ ಟಾಪ್ ನಿರ್ಮಾಣಕ್ಕೆ, ನಗರದ ಸಮುದಾಯ ಶೌಚಾಲಯ ದುರಸ್ಥಿ ಕಾಮಗಾರಿಗೆ 33.20ಲಕ್ಷ ವೆಚ್ಚದ ಕ್ರಿಯಾಯೋಜನೆಯ ಬಗ್ಗೆ ಪ.ಪಂ ಅಧ್ಯಕ್ಷೆ ಅನಿತಾ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು.

ಲೋಕೋಪಯೋಗಿ ಇಲಾಖೆ ವೈಟ್ ಟಾಪಿಂಗ್ ರಸ್ತೆ ಮಾತ್ರ ಸಂಪೂರ್ಣಗೊಳಿಸಿದೆ. ಇಲ್ಲಿಯವರೆಗೂ ಪುಟ್ಬಾತ್ ವ್ಯವಸ್ಥೆ ಆಗಿಲ್ಲಾ, ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಪ್ರತಿದಿನ ಮುಂಜಾನೆ 20 ಕ್ಕೂ ಹೆಚ್ಚು ವ್ಯಾಪಾರಸ್ಥರು ನೂರಾರು ಮಂದಿ ನಾಗರೀಕರು ಸಂಚರಿಸುತ್ತಿರುತ್ತಾರೆ. ಪುಟ್ಬಾತ್ ವ್ಯವಸ್ಥೆಯಿಲ್ಲದ ಕಾರಣ ರಸ್ತೆಯಿಲ್ಲಿಟ್ಟು ವ್ಯಾಪಾರಕ್ಕೆ ಮುಂದಾಗಿದ್ದಾರೆ. ಬಸ್ ಸೇರಿದಂತೆ ಇತರೆ ವಾಹನಗಳು ವೇಗವಾಗಿ ಬರುತ್ತಿದ್ದರೂ ಸಹ ನಿಟ್ಟಿಲ್ಲದೆ ಮಾರುಕಟ್ಟೆಯಲ್ಲಿ ನಿಂತಿರುತ್ತಾರೆ ಮುಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದರೆ ಅದಕ್ಕೆ ಹೊಣೆ ಯಾರು ಎಂಬುದನ್ನು ಸದಸ್ಯರು ಸಾಮಾನ್ಯ ಸಭೆಯಲ್ಲಿ ಜನರ ಪರವಾಗಿ ಧ್ವನಿ ಎತ್ತಿದರು.

ಸಭೆಯಲ್ಲಿ ಪ.ಪಂ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷೆ ಹುಸ್ನಾಫಾರೀಯ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಮಂಜುನಾಥ್, ಮುಖ್ಯಾಧಿಕಾರಿ ಉಮೇಶ್, ಸದಸ್ಯ ನಟರಾಜ್, ಓಬಳರಾಜು, ಭಾರತಿ ಸಿದ್ದಮಲ್ಲಪ್ಪ, ಪುಟ್ಟನರಸಪ್ಪ, ನಾಗರಾಜು, ನಂದೀಶ್, ಲಕ್ಷ್ಮೀನಾರಾಯಣ್, ನಾಮಿನಿ ಸದಸ್ಯರಾದ ಫಯಾಜ್ ಅಹಮದ್, ಎಂ.ಜಿ ಸುಧೀರ್, ಮಂಜುಳಾ ಗೋವಿಂದರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...