ಮುಂಡಗೋಡ | ನರೇಗಾ ಯೋಜನೆ ಮುಂದುವರಿಸಲು ಆಗ್ರಹ: ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ

Date:

ಮುಂಡಗೋಡ: ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಹೊಸ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ (ಎಬಿ ಜಿ ರಾಮ್ ಜಿ 2025)’ ಕಾಯ್ದೆಯನ್ನು ಕೈಬಿಟ್ಟು, ಗ್ರಾಮೀಣ ಬಡವರ ಜೀವನಾಡಿಯಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ-2005) ಯೋಜನೆಯನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ

ಮುಂಡಗೋಡ ತಾಲೂಕಿನ ವಿವಿಧ ಸಂಘಟನೆಗಳ ಒಕ್ಕೂಟವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರ ತಾಲೂಕು ಸಂಘಟನಾ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸಲ್ಲಿಸಲಾದ ಈ ಮನವಿಯಲ್ಲಿ ಕೇಂದ್ರ ಸರ್ಕಾರದ ಹೊಸ ಪ್ರಸ್ತಾವನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಹೊಸ ಕಾಯ್ದೆಯು ನರೇಗಾ ಮೂಲಕ ಕಾರ್ಮಿಕರಿಗೆ ಲಭ್ಯವಿದ್ದ ಸಾಂವಿಧಾನಿಕ ಉದ್ಯೋಗದ ಹಕ್ಕನ್ನು ದುರ್ಬಲಗೊಳಿಸುತ್ತದೆ. ಅಲ್ಲದೆ, ಇದು ಮಹಾತ್ಮ ಗಾಂಧೀಜಿಯವರ ಹೆಸರಿಗೆ ಮಾಡಿದ ಅಪಮಾನ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರವು ಅಕುಶಲ ಕೂಲಿಯ ಶೇ. 100ರಷ್ಟು ವೆಚ್ಚವನ್ನು ಭರಿಸುತ್ತಿತ್ತು. ಆದರೆ ಹೊಸ ಕಾಯ್ದೆಯಲ್ಲಿ ರಾಜ್ಯ ಸರ್ಕಾರಗಳ ಮೇಲೆ ಶೇ. 40ರಷ್ಟು ವೆಚ್ಚದ ಹೊರೆ ಹಾಕಲು ಉದ್ದೇಶಿಸಲಾಗಿದೆ. ಇದರಿಂದ ಬಡತನ ಹೆಚ್ಚಿರುವ ಮತ್ತು ಕಡಿಮೆ ಆದಾಯದ ಮೂಲಗಳಿರುವ ಕರ್ನಾಟಕದಂತಹ ರಾಜ್ಯಗಳ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಕೆಲಸದ ಅವಕಾಶಗಳು ಕಡಿಮೆಯಾಗುವ ಆತಂಕ ಎದುರಾಗಿದೆ.

ಮುಖ್ಯವಾಗಿ ಬಿತ್ತನೆ ಮತ್ತು ಕಟಾವು ಅವಧಿಯಲ್ಲಿ ಸುಮಾರು 60 ದಿನಗಳ ಕಾಲ ಕಾಮಗಾರಿಗಳನ್ನು ಸ್ಥಗಿತಗೊಳಿಸುವ ಹೊಸ ನಿಯಮವು ಭೂ-ರಹಿತ ಕೂಲಿ ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಲಿದ್ದು, ಅವರು ಅನಿವಾರ್ಯವಾಗಿ ಖಾಸಗಿ ಮಾಲೀಕರ ಬಳಿ ಕಡಿಮೆ ಕೂಲಿಗೆ ದುಡಿಯುವಂತೆ ಮಾಡುತ್ತದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಾಗಾರ ಆಯೋಜನೆ

ನರೇಗಾ ಯೋಜನೆಯು ಗ್ರಾಮೀಣ ಭಾಗದ ಮಹಿಳೆಯರ ಘನತೆಯ ಬದುಕಿಗೆ ಮತ್ತು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿದೆ. ಅಂತಹ ಯೋಜನೆಯನ್ನು ಬದಲಾಯಿಸುವುದು ಅಥವಾ ರದ್ದುಗೊಳಿಸುವುದು ಸರಿಯಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಮಧ್ಯಪ್ರವೇಶಿಸಿ ಕೇಂದ್ರದ ಮೇಲೆ ಒತ್ತಡ ಹೇರಬೇಕು

ಮತ್ತು ರಾಜ್ಯದಲ್ಲಿ ನರೇಗಾ ಯೋಜನೆಯೇ ಮುಂದುವರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಬಸವರಾಜ ಸಂಗಮೇಶ್ವರ, ಧರ್ಮರಾಜ ನಡಗೇರ, ಫಾದರ್ ಅನಿಲ ಡಿಸೋಜಾ, ನಾಗರಾಜ್ ಕಟ್ಟಿಮನಿ, ಮಂಗಲಾ ಮೊರೆ, ಮಲ್ಲಮ್ಮ ನೀರಲಗಿ, ತನ್ವೀರ್ ಅಹ್ಮದ್ ಮಿರ್ಜಾನಕರ್, ಮೋಹನ್ ಹರಿಜನ, ಹಜರತ ಮುಲ್ಲಾನವರ, ಮುಂಡಗೋಡ ತಾಲೂಕು ಭೂ-ಹಕ್ಕುದಾರರ ಹೋರಾಟ ಸಮಿತಿ, ಜನವೇದಿಕೆ, ಯುವರತ್ನ ಯುವ ಒಕ್ಕೂಟ ಹಾಗೂ ರೈತ ಸಂಘಟನಾ ಸಮಿತಿಯ ಪದಾಧಿಕಾರಿಗಳು ಮತ್ತು ಸಮಸ್ತ ಅಕುಶಲ ಕೂಲಿ ಕಾರ್ಮಿಕರು ಈ ಮೂಲಕ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...