ಮೈಸೂರು ದಸರಾ | ದೀಪಾಲಂಕಾರ, ಡ್ರೋನ್ ಪ್ರದರ್ಶನ ಪೋಸ್ಟರ್, ಟೀಸರ್ ಬಿಡುಗಡೆ

Date:

ಮೈಸೂರು ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವತಿಯಿಂದ ನಡೆಸಲಾಗುವ ದಸರಾ ದೀಪಾಲಂಕಾರ, ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದರು.

ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಅವುಗಳೊಂದಿಗೆ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಆಕರ್ಷಕ ಪ್ರತಿಕೃತಿಗಳನ್ನು ಇರಿಸಲಾಗುತ್ತದೆ. ದೀಪಾಲಂಕಾರಕ್ಕಾಗಿ 300 ಕಿಲೋ ವ್ಯಾಟ್ ಗಳ, 2,57,520 ಯೂನಿಟ್ ಗಳ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.

ದಸರಾ ಮಹೋತ್ಸವದ ಸಂಭ್ರಮಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಡ್ರೋನ್ ಪ್ರದರ್ಶನ. ಈ ಬಾರಿ ಮತ್ತಷ್ಟು ಆಕರ್ಷಣೀಯವಾಗಿರಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್. 1 ಮತ್ತು 2 ರಂದು ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3000 ಸಾವಿರ ಡ್ರೋನ್ ಬಳಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ, ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸುವುದು. ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ ಹಾಗೂ ವಿದ್ಯುತ್‌ ಸಂಬಂಧಿತ ದೂರು, ದೀಪಾಲಂಕಾರದಿಂದ ತೊಂದರೆ ಆದಲ್ಲಿ ಸಹಾಯವಾಣಿ 1912 ಸಂಪರ್ಕಿಸುವಂತೆ ಕೋರಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿರಾಜಪೇಟೆ | ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯದ ಸ್ಥಳ ವೀಕ್ಷಿಸಿದ ಅಜಯ್ ಮಾಕನ್

ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ. ಎಂ. ಮುನಿಗೋಪಾಲ್ ರಾಜು, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...