ನೇಪಾಳ | ನಾಪತ್ತೆಯಾಗಿದ್ದ ಹೆಲಿಕಾಪ್ಟರ್ ಪತನ; ಪೈಲಟ್ ಮಿಸ್ಸಿಂಗ್!

Date:

ನೇಪಾಳದ ಸೋಲುಖುಂಬುವಿನಿಂದ ಕಾಠ್ಮಂಡುವಿಗೆ ತೆರಳುತ್ತಿದ್ದ ವೇಳೆ ಕಂಟ್ರೋಲ್ ಟವರ್‌ನೊಂದಿಗೆ ಸಂಪರ್ಕ ಕಡಿತಗೊಂಡಿದ್ದ ಹೆಲಿಕಾಪ್ಟರ್ ಪತನಗೊಂಡಿರುವುದಾಗಿ ನೇಪಾಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತನಗೊಂಡ ಮನಂಗ್ ಏರ್ ಹೆಲಿಕಾಪ್ಟರ್‌ನಲ್ಲಿದ್ದ ಐವರು ವಿದೇಶಿ ಪ್ರಜೆಗಳ ಮೃತದೇಹಗಳು ಪತ್ತೆಯಾಗಿವೆ. ಕ್ಯಾಪ್ಟನ್‌ಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಎಂದು ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ ಮಾಹಿತಿ ನೀಡಿದೆ.

ಸಂಪರ್ಕ ಕಳೆದುಕೊಂಡ ಮನಂಗ್ ಏರ್ ಹೆಲಿಕಾಪ್ಟರ್ ಜಿರಿ ಮತ್ತು ಫಾಪ್ಲು ನಡುವಿನ ಪ್ರದೇಶವಾದ ಸೊಲುಖುಂಬು ಜಿಲ್ಲೆಯ ಲಾಮ್ಜುರಾದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟವರಲ್ಲಿ ಐವರು ವಿದೇಶೀ ಪ್ರಜೆಗಳು ಮೆಕ್ಸಿಕೋ ಮೂಲದವರು ಎಂದು ಗುರುತಿಸಲಾಗಿದೆ.

ಮೃತಪಟ್ಟವರನ್ನು ಸಿಫ್ಯುಂಟೆಸ್ ಜಿ. ಫೆರ್ನಾಂಡೋ, ಗೊನ್ಸಾಲ್ವೆಝ್ ಅಬ್ರಿಕ್, ಗೊನ್ಸಾಲ್ವೆಝ್ ಒಲಾಸಿಯೊ ಲುಜ್, ಸಿಫ್ಯುಂಟೆಸ್ ಜಿ. ಮರಿಯಾ ಜೋಸ್, ರಿಂಕನ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಪೈಲಟ್ ಆಗಿದ್ದ ನೇಪಾಳಿ ಮೂಲದ ಕ್ಯಾಪ್ಟನ್ ಸಿಬಿ ಗುರುಂಗ್ ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸೋಲುಖುಂಬುವಿನಿಂದ ಕಾಠ್ಮಂಡುವಿಗೆ ತೆರಳುತ್ತಿದ್ದ ಮನಂಗ್‌ ಏರ್ ಸಂಸ್ಥೆಗೆ ಸೇರಿದ್ದ ಹೆಲಿಕಾಪ್ಟರ್, ನೇಪಾಳದ ಸ್ಥಳೀಯ ಕಾಲಮಾನ 10:12ರ ಸುಮಾರಿಗೆ ರಾಡಾರ್‍‌ನ ಸಂಪರ್ಕ ಕಳೆದುಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...