ಖಾಸಗಿಯಾಗಿ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಪೋಕ್ಸೋ, ಐಟಿ ಕಾಯ್ದೆಯಡಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

Date:

“ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಪೋಕ್ಸೋ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವಲ್ಲ” ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.

ಮಕ್ಕಳ ಅಶ್ಲೀಲ ಚಿತ್ರವನ್ನು ಡೌನ್‌ಲೋಡ್ ಮಾಡಿ ವೀಕ್ಷಿಸುತ್ತಿದ್ದ ಆರೋಪದಲ್ಲಿ 28 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಡೆಸುತ್ತಿದ್ದ ವಿಚಾರಣೆಯನ್ನು ರದ್ದುಪಡಿಸಿದ ನ್ಯಾಯಾಲಯ, ಇಂಥ ಪ್ರಕರಣದಲ್ಲಿ ಕೇರಳ ಹೈಕೋರ್ಟ್‌ ನೀಡಿದ ತೀರ್ಪನ್ನು ಉಲ್ಲೇಖಿಸಿದೆ.

“ಪೋಕೋ ಕಾಯ್ದೆಯಡಿ ಅಪರಾಧ ಎಂದು ಪರಿಗಣಿಸಬೇಕಿದ್ದರೆ, ಮಗು ಅಥವಾ ಮಕ್ಕಳನ್ನು ಅಶ್ಲೀಲ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಐಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ, ಆರೋಪಿಯು ಇಂತಹ ಚಿತ್ರಗಳನ್ನು ಪ್ರಕಟಿಸಿರಬೇಕು, ಪ್ರಸಾರ ಮಾಡಿರಬೇಕು ಅಥವಾ ಸೃಷ್ಟಿಸಿರಬೇಕು” ಎಂದು ನ್ಯಾಯಮೂರ್ತಿ ಎನ್‌.ಆನಂದ್‌ ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಸ್ತವವಾಗಿ ಆರೋಪ ಹೊತ್ತ ವ್ಯಕ್ತಿಯ ಕ್ರಮವು ಖಾಸಗಿಯಾಗಿದ್ದು, ಬೇರೆಯವರ ಮೇಲೆ ಪರಿಣಾಮ ಅಥವಾ ಪ್ರಭಾವ ಬೀರುವುದಿಲ್ಲ. ಈ ವ್ಯಕ್ತಿ ಇಂತಹ ಫೋಟೊ ಅಥವಾ ವಿಡಿಯೋವನ್ನು ಪ್ರಸಾರ ಮಾಡಲು ಅಥವಾ ವಿತರಿಸಲು ಅಥವಾ ಸಾರ್ವಜನಿಕವಾಗಿ ಪ್ರದರ್ಶಿಸಲು ಆರಂಭಿಸಿದಾಗ, ಅಪರಾಧದ ಅಂಶಗಳು ಕೂಡಾ ಆರಂಭವಾಗುತ್ತವೆ” ಎಂದು ನ್ಯಾಯಮೂರ್ತಿ ವೆಂಕಟೇಶನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಮಕ್ಕಳ ಕಳ್ಳರೆಂದು ಮೂವರು ಸಾಧುಗಳನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ ಸಾರ್ವಜನಿಕರು

“ಧೂಮಪಾನ ಮತ್ತು ಮದ್ಯಪಾನದಂತೆ ಅಶ್ಲೀಲ ವಿಡಿಯೊಗಳನ್ನು ವೀಕ್ಷಿಸುವುದು ಕೂಡಾ ಈ ಪೀಳಿಗೆಗೆ ವ್ಯಸನವಾಗಿದೆ. ಇದಕ್ಕೆ ಶಿಕ್ಷೆ ಪರಿಹಾರವಾಗಲಾರದು. ಝಡ್ ಪೀಳಿಗೆಯ ಮಕ್ಕಳು ಈ ಗಂಭೀರ ಸಮಸ್ಯೆಯ ಬಿಗಿಮುಷ್ಠಿಯಲ್ಲಿ ಸಿಲುಕಿಕೊಂಡಿದ್ದಾರೆ ಹಾಗೂ ಅವರನ್ನು ತೆಗಳುವುದು ಅಥವಾ ಶಿಕ್ಷಿಸುವ ಬದಲು ಸಮಾಜ ಅವರಿಗೆ ಸೂಕ್ತ ಸಲಹೆ ನೀಡುವ ಮತ್ತು ಅವರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಬೇಕು. ಈ ವ್ಯಸನದಿಂದ ಹೊರಬರುವಂತೆ ಅವರಿಗೆ ಆಪ್ತ ಸಮಾಲೋಚನೆ ನೀಡಬೇಕು” ಎಂಬ ಅಂಶಗಳನ್ನು ನ್ಯಾಯಮೂರ್ತಿ ವೆಂಕಟೇಶನ್ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...