ಜಿಲ್ಲೆಯ ಅರಕೇರ ತಾಲ್ಲೂಕಿನ ಜೇರದಬಂಡಿ ಗ್ರಾಮದಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ರೈತನೊಬ್ಬ ಬೆಳೆದಿದ್ದ ಪಪ್ಪಾಯಿ ಬೆಳೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಗ್ರಾಮದ ದೇವೇಂದ್ರಪ್ಪ ಅವರಿಗೆ ಸೇರಿದ 12 ಎಕರೆ ಜಮೀನಿನಲ್ಲಿ ಬೆಳೆದಿದ್ದ ಪಪ್ಪಾಯಿ ತೋಟ ಮಳೆಯಿಂದ ಸಂಪೂರ್ಣ ಹಾನಿಯಾಗಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆ ಕೈಗೆ ಬರುವ ಹೊತ್ತಲ್ಲೇ ಅಕಾಲಿಕ ಮಳೆ ಬೆಳೆ ಹಾನಿ ಮಾಡಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ
ರೈತ ದೇವೇಂದ್ರಪ್ಪ ಅವರಿಗೆ ಸುಮಾರು 20 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಬೆಳೆಗಾಗಿ ಮಾಡಿದ ಹೂಡಿಕೆ ಸಂಪೂರ್ಣವಾಗಿ ವ್ಯರ್ಥವಾಗಿರುವುದರಿಂದ ರೈತ ಕಂಗಾಲಾಗಿದ್ದಾರೆ.




