ರಾಯಚೂರು | ಅನ್ನಭಾಗ್ಯ ಸಿಗದೆ ಪರದಾಟ : ವೃದ್ಧೆಯರ ಹಸಿವು ನೀಗಿಸುತ್ತಿದೆ ಶಾಲೆಯ ಬಿಸಿಯೂಟ

Date:

ಕಳೆದ ಇಪ್ಪತ್ತು ವರ್ಷಗಳಿಂದ ಇವರಿಗೆ ರೇಷನ್ ಕಾರ್ಡ್ ಇಲ್ಲ. ಸರ್ಕಾರಿ ಸೌಲಭ್ಯಗಳಿಂದ ವಂಚಿತರಾದ ಇವರಿಗೆ ಶಾಲೆಯ ಬಿಸಿಯೂಟ ಹಸಿವು ನೀಗಿಸುತ್ತದೆ. ಹೌದು, ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಚನ್ನಳ್ಳಿ ಗ್ರಾಮದ ವೃದ್ಧರಾದ ಬಾಗಮ್ಮ (70) ಹಾಗೂ ಗುಡದಮ್ಮ (60) ಅವರ ಬದುಕು ದುಸ್ತರವಾಗಿದೆ.

ಬಾಗಮ್ಮ ಹಾಗೂ ಗುಡದಮ್ಮ ಇಬ್ಬರು ವಿಧವೆಯರು, ನೋಡಿಕೊಳ್ಳಲು ಮಕ್ಕಳಿಲ್ಲ. ಕೂಲಿ ನಾಲಿ ಮಾಡಿ ಬದುಕು ಸಾಗಿಸಲು ಮೈಯಲ್ಲಿ ಶಕ್ತಿಯಿಲ್ಲ. ಹೀಗಾಗಿ ಎಲ್ಲ ಸೌಕರ್ಯಗಳಿಂದ ವಂಚಿತರಾಗಿ ದಿನ ದೂಡುತ್ತಿದ್ದಾರೆ.

“ಪಡಿತರ ಚೀಟಿಗಾಗಿ ಅನೇಕ ಬಾರಿ ಅರ್ಜಿ ಹಾಕಿದ್ದೇವೆ, ಅಧಿಕಾರಿಗಳ ಬಾಗಿಲು ತಟ್ಟಿದ್ದೇವೆ. ಭರವಸೆಯ ಮಾತು ಹೇಳಿದರೆ, ಹೊರತು ಪರಿಹಾರ ಸಿಕ್ಕಿಲ್ಲ. ರೇಷನ್ ಕಾರ್ಡ್ ಇಲ್ಲದಿರುವುದರಿಂದ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳು ಸಿಗುತ್ತಿಲ್ಲ” ಎಂದು ನೋವು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000192026 1

ನಮ್ಮ ಗ್ರಾಮದ ಬಾಗಮ್ಮ, ಗುಡದಮ್ಮ ಅವರಂತೆ ಇನ್ನೂ ಅನೇಕ ಬಡ ಕುಟುಂಬಗಳಿಗೆ ರೇಷನ್ ಕಾರ್ಡ್ ಇಲ್ಲ. ಪಡಿತರ ಕಾರ್ಡ್ ಗಾಗಿ ಅಲೆದಾಡಿ ಸಾಕಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಡವರಿಗೆ ಸರ್ಕಾರಿ ಸೌಲಭ್ಯ ದಕ್ಕುತ್ತಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

1000192029

ರೇಷನ್‌ ಕಾರ್ಡ್‌ ಸೇರಿದಂತೆ ಇತರೆ ಸೌಲಭ್ಯಗಳಿಂದ ವಂಚಿತರಾದ ಬಡಕುಟುಂಬದ ವೃದ್ಧರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಸರ್ಕಾರವು ವಿಶೇಷ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ಹಿರಿಯರು ಕಾಗದ ಪತ್ರಗಳ ಗೊಂದಲದಲ್ಲಿ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಂಡು ಯೋಜನೆ ಮುಟ್ಟಿಸಬೇಕುʼ ಎಂದು ಸಾಮಾಜಿಕ ಕಾರ್ಯಕರ್ತರ ಅಭಿಪ್ರಾಯ.

ಈ ಸುದ್ದಿ ಓದಿದ್ದೀರಾ? ದಲಿತ ಹೋರಾಟಗಾರ, ‘ಬುದ್ಧಘೋಷ’ ದೇವೇಂದ್ರ ಹೆಗ್ಗಡೆ ನಿಧನ: ಒಡನಾಡಿಗಳ ಕಂಬನಿ

ರಾಜ್ಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿರೂಪಮಾ ಮಾತನಾಡಿ, ʼವೃದ್ಧರು ಶಾಲೆಯ ಬಿಸಿಯೂಟದ ಮೇಲೆ ಬದುಕು ಸಾಗಿಸುತ್ತಿರುವುದು ತುಂಬಾ ದುಃಖಕರ ಸಂಗತಿ. ಹಲವಾರು ಬಾರಿ ಅರ್ಜಿ ಹಾಕಿದರೂ ಕಾರ್ಡ್ ದೊರೆಯದೇ ಇರುವುದು ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತದೆ. ಕೂಡಲೇ ವೃದ್ಧರಿಗೆ ಸೌಲಭ್ಯ ಕಲ್ಪಿಸಬೇಕುʼ ಎಂದು ಆಗ್ರಹಿಸಿದರು.

1000192027 1
mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...