ರಾಯಚೂರು | ಮೂರು ದಿನದಲ್ಲಿ ಸಮೀಕ್ಷೆ ಮುಕ್ತಾಯ : ಶಿಕ್ಷಕನ ಕಾರ್ಯಕ್ಕೆ ಜಿಲ್ಲಾಡಳಿತ ಪ್ರಶಂಸೆ

Date:

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತಮಗೆ ವಹಿಸಿದ್ದ ಮನೆಗಳನ್ನು ಕೇವಲ ಮೂರು ದಿನಗಳಲ್ಲಿ ಪೂರ್ಣಗೊಳಿಸುವ ಮೂಲಕ ರಾಯಚೂರಿನ ಕಟ್ಲಾಟಕೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಮಲಿಯಾಬಾದ್ ಅವರು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ರಾಜ್ಯ ಸರ್ಕಾರದ ಹಿಂದುಳಿದ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಹಾಗೂ ಗಣತಿದಾರರ ಗೈರಾಜರಿ ಸೇರಿದಂತೆ ಅನೇಕ ಅಡೆತಡೆಗಳು ಎದುರಾದರೂ ಸಮೀಕ್ಷೆ ಪೂರೈಸಿದ ಕೃಷ್ಣಮೂರ್ತಿ ಅವರ ಪರಿಶ್ರಮ ಜಿಲ್ಲಾಡಳಿತದ ಮೆಚ್ಚುಗೆಗೆ ಪಾತ್ರವಾಗಿದೆ. ಅವರ ಕಾರ್ಯತತ್ಪರತೆ ಶ್ಲಾಘನೀಯ ಹಾಗೂ ಜಿಲ್ಲೆಯ ಇತರ ಗಣತಿದಾರರಿಗೆ ಪ್ರೇರಣೆಯಾಗಿದ್ದಾರೆ ಎಂದು ಗುರುತಿಸಿ ಜಿಲ್ಲಾಡಳಿತ ಅಭಿನಂದನಾ ಪತ್ರ ನೀಡಿ ಗೌರವಿಸಿದೆ.

ಸೆಪ್ಟೆಂಬರ್ 22ರಿಂದ ಆರಂಭವಾದ ಈ ಸಮೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 3178 ಗಣತಿದಾರರನ್ನು ನೇಮಿಸಲಾಗಿತ್ತು. ಆದರೆ ಮಧ್ಯಂತರದಲ್ಲಿ ಸರ್ವರ್ ಹಾಗೂ ನೆಟ್ವರ್ಕ್ ಸಮಸ್ಯೆಯಿಂದಾಗಿ ಹಲವರು ಕಾರ್ಯ ನಿರ್ವಹಣೆಯಲ್ಲಿ ತೊಂದರೆ ಅನುಭವಿಸುತ್ತಿದ್ದರು. ಈ ಅಡೆತಡೆಗಳ ನಡುವೆಯೇ ಕೃಷ್ಣಮೂರ್ತಿ ಅವರಿಗೆ ನಿಗದಿಪಡಿಸಲಾದ 86 ಮನೆಗಳ ಸಮೀಕ್ಷೆಯನ್ನು ಕೇವಲ ಮೂರು ದಿನಗಳಲ್ಲಿ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಮೀಕ್ಷೆಗೆ ಗೈರು: 57 ಸಿಬ್ಬಂದಿಗೆ ನೋಟಿಸ್; 6 ಜನ ಅಂಗನವಾಡಿ ಕಾರ್ಯಕರ್ತೆಯರ ಅಮಾನತು

ಮನೆಯಲ್ಲಿ ಲಭ್ಯವಿರದವರನ್ನೂ ನಿರಂತರ ಸಂಪರ್ಕಿಸಿ ಮಾಹಿತಿ ಸಂಗ್ರಹಿಸಿ, ಬ್ಲಾಕ್ ಐಡಿ ಆಧಾರದ ಮೇಲೆ ಗೂಗಲ್ ಮ್ಯಾಪ್, ನೆಟ್ವರ್ಕ್ ,ಸರ್ವರ್ ಸಮಸ್ಯೆಗಳ ನಡುವೆ ತಹಸೀಲ್ದಾರ್ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ವಾರ್‌ರೂಮ್‌ಗೆ ನಿರಂತರ ಸಂಪರ್ಕಿಸಿ ಸಮೀಕ್ಷೆ ಮುಗಿಸಿದ್ದು, ಗೂಗಲ್ ಮ್ಯಾಪ್ ಸಮಸ್ಯೆ ನಡುವೆ ಬ್ಲಾಕ್ ಐಡಿ ಆಧಾರದ ಮೇಲೆ ಸಮೀಕ್ಷೆ ನಡೆಸಿ ಪೂರ್ಣಗೊಳಿಸಿರುವುದಾಗಿ ಶಿಕ್ಷಕ ಕೃಷ್ಣಮೂರ್ತಿ ಮಲಿಯಾಬಾದ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...