ಸಾಗರ | ಆನಂದಪುರದಲ್ಲಿ ಭೀಕರ ಅಪಘಾತ : ಹಲವರಿಗೆ ಗಾಯ

Date:

ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಲಾರಿ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ.

ಕಚೇರಿ, ಶಾಲೆ, ಕಾಲೇಜು ಸಮಯವಾದ್ದರಿಂದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಮತ್ತು ಕಚೇರಿಗೆ ತೆರಳುವವರೆ ಹೆಚ್ಚಿದ್ದರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001952353

ಅಪಘಾತವಾದ ಕೂಡಲೆ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ.ಸಾಗರದ ಮರ್ಕಜ್‌ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಕೂಡಲೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯರು ತಕ್ಷಣ ನೆರವು ನೀಡಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಅಪಘಾತದಿಂದಾಗಿ ರಸ್ತೆ ಸಂಪೂರ್ಣ ಬಂದ್‌ ಆಗಿತ್ತು. ಹಾಗಾಗಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಪ್ರಕರಣ ಆನಂದಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದು ಬಸ್ ನ ಮುಂಭಾಗ ನುಜ್ಜುಗುಜ್ಜಾಗಿದೆ.ಬಸ್ ನಲ್ಲಿದ್ದ 12 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ.

ಚಾಲಕ ರವೀಂದ್ರ ನಾಯ್ಕ ಮತ್ತು ನಿರ್ವಾಹಕ ಫಕೀರಪ್ಪನವರಿಗೆ ತೀವ್ರ ಗಾಯಗಳಾಗಿದ್ದು ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...