ದೆಹಲಿ | ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಹಿರಿಯ ಸರ್ಕಾರಿ ಅಧಿಕಾರಿಯ ಬಂಧನ

Date:

  • ಆರೋಪಿಯ ಪತ್ನಿಯನ್ನೂ ವಶಕ್ಕೆ ಪಡೆದ ಪೊಲೀಸರು
  • ಅಮಾನತುಗೊಳಿಸಿದ ಸಿಎಂ ಅರವಿಂದ್ ಕೇಜ್ರಿವಾಲ್

ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ದೆಹಲಿಯ ಸರ್ಕಾರಿ ಅಧಿಕಾರಿ ಪ್ರೇಮೋದಯ್‌ ಖಾಖಾ ಮತ್ತು ಆತನ ಪತ್ನಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕನಾಗಿರುವ ಈತನನ್ನು ಮುಂಜಾನೆಯೇ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಆರೋಪಿ ಪ್ರೇಮೋದಯ್‌ ಖಾಖಾನನ್ನು ಹುದ್ದೆಯಿಂದ ಅಮಾನತುಗೊಳಿಸಲು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಬಗ್ಗೆ ಮಾಹಿತಿ ನೀಡಿರುವ ಉತ್ತರ ದೆಹಲಿಯ ಡಿಸಿಪಿ ಸಾಗರ್ ಸಿಂಗ್ ಕಲ್ಸಿ, “ಇದು ಸೂಕ್ಷ್ಮ ಪ್ರಕರಣವಾಗಿದೆ. ಅತ್ಯಂತ ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದೇವೆ. ಪ್ರಮುಖ ಆರೋಪಿ ಮತ್ತು ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಪತ್ನಿಯನ್ನೂ ಬಂಧಿಸಿದ್ದೇವೆ. ಸಿಆರ್‌ಪಿಸಿ 164ರ ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಬಳಿ ದಾಖಲಿಸಿಕೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

ದೆಹಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮೋದಯ್‌ ತನ್ನ ಮೃತ ಸ್ನೇಹಿತನ 16 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆತನ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೋ ಕಾಯ್ದೆಯಡಿ ದೆಹಲಿಯ ಬುರಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಸಂತ್ರಸ್ತ ಬಾಲಕಿಯು ಉತ್ತರ ದೆಹಲಿಯ ಶಾಲೆಯೊಂದರಲ್ಲಿ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಬಾಲಕಿ ಕುಟುಂಬ ಮತ್ತು ಆರೋಪಿಯು ಹಿಂದಿನಿಂದಲೂ ಪರಿಚಿತರು. 2020ರಲ್ಲಿ ಬಾಲಕಿಯ ತಂದೆ ಸಾವನ್ನಪ್ಪಿದ್ದರು. ಆಗ ಆರೋಪಿಯು ಬಾಲಕಿಯ ಪೋಷಣೆಯ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಮುಂದೆ ಬಂದಿದ್ದನು. ಪರಿಚಿತನೇ ಆಗಿದ್ದರಿಂದ ಬಾಲಕಿಯ ತಾಯಿಯೂ ತನ್ನ ಮಗಳನ್ನು ಆತನೊಂದಿಗೆ ಕಳುಹಿಸಲು ಒಪ್ಪಿಕೊಂಡಿದ್ದರು’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಾಂಧಿ ಪ್ರತಿಮೆ ಧ್ವಂಸ | ಕೃತ್ಯ ಎಸಗಿದವರ ಮೇಲೆ ಕಠಿಣ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಬಾಲಕಿ 2020ರ ಅಕ್ಟೋಬರ್‌ನಿಂದ 2021ರ ಫೆಬ್ರವರಿಯವರೆಗೆ ಆರೋಪಿಯೊಂದಿಗೆ ಉಳಿದುಕೊಂಡಿದ್ದಳು. ಈ ಅವಧಿಯಲ್ಲಿ ಆಕೆಯ ಮೇಲೆ ಆರೋಪಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ, ದೈಹಿಕ ಕಿರುಕುಳ ಮತ್ತು ಪದೇ ಪದೇ ಅತ್ಯಾಚಾರ ಎಸಗಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾದಾಗ ಆರೋಪಿ ತನ್ನ ಪತ್ನಿಗೆ ವಿಷಯ ತಿಳಿಸಿದ್ದಾನೆ. ಆತನ ಪತ್ನಿ ತಮ್ಮ ಮಗನ ಮೂಲಕ ಔಷಧಿ ತರಿಸಿ, ಮನೆಯಲ್ಲಿಯೇ ಅಪ್ರಾಪ್ತೆಗೆ ಗರ್ಭಧಾರಣೆಯನ್ನೂ ಮಾಡಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಅಪ್ರಾಪ್ತೆಯ ಆರೋಗ್ಯದಲ್ಲಿ ಏರುಪೇರಾದಾಗ ಆಕೆಯನ್ನು ಆಸ್ಪತ್ರೆಗೆ ಕರೆತಂದಿದ್ದರು. ಆಕೆ ಆಸ್ಪತ್ರೆಯ ಸಲಹೆಗಾರರಿಗೆ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ವಿವರಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ನಂತರವಷ್ಟೇ ಗೊತ್ತಾಗಿದೆ ಎಂದು ಬಾಲಕಿಯ ತಾಯಿಯೂ ತಿಳಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಮತ್ತು ಆರೋಪಿಯ ಪತ್ನಿಯ ವಿರುದ್ಧ ಐಪಿಸಿ ಸೆಕ್ಷನ್ 376(2)(ಎಫ್) (ಪೋಷಕರಾಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗುವುದು), 506 (ಅಪರಾಧ ಬೆದರಿಕೆ), 509 (ಮಹಿಳೆಯರ ನಮ್ರತೆಯನ್ನು ಅವಮಾನಿಸುವ ಉದ್ದೇಶ), 323 (ನೋವು ಉಂಟುಮಾಡುವುದು), 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತ), ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 6/21ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...