ಪುಣೆ | ಖ್ಯಾತ ಪತ್ರಕರ್ತ ನಿಖಿಲ್ ವಾಗ್ಲೆ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ

Date:

ಮಹಾರಾಷ್ಟ್ರದಲ್ಲಿ ನಾಲ್ಕು ದಶಕಗಳ ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಹೆಸರಾಗಿರುವ ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಿಖಿಲ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಬರೆದಿದ್ದರು. ಈ ಅಭಿಪ್ರಾಯವನ್ನು ವಿರೋಧಿಸಿ ಹಿರಿಯ ಬಿಜೆಪಿ ನಾಯಕ ಸುನೀಲ್ ಡಿಯೋಡಾರ್ ಅವರು ಶುಕ್ರವಾರ ವಿಶ್ರಾಮ್‌ಬಾಗ್ ಪೊಲೀಸ್ ಠಾಣೆಯಲ್ಲಿ ನಿಖಿಲ್ ವಿರುದ್ಧ ದೂರು ದಾಖಲಿಸಿದ್ದರು.

‘ನಿರ್ಭಯ್ ಬನೋ’ ಎನ್ನುವ ಕಾರ್ಯಕ್ರಮದಲ್ಲಿ ನಿಖಿಲ್ ಭಾಗವಹಿಸುವ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಬೇಕು ಎಂದು ಬಿಜೆಪಿ ಪುಣೆ ಪೊಲೀಸರಿಗೆ ಮನವಿ ಮಾಡಿತ್ತು. ಆದರೆ ನಿಖಿಲ್, “ಇಂತಹ ಬೆದರಿಕೆಗಳಿಗೆ ಬಗ್ಗುವುದಿಲ್ಲ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ” ಎಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಭೆಗೆ ತೆರಳುತ್ತಿದ್ದಾಗ ಡೆಕ್ಕನ್ ಪ್ರದೇಶದ ಖಂಡೋಜಿ ಬಾಬಾ ಚೌಕ್‌ನಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು, ಪೊಲೀಸರ ಭದ್ರತೆಯ ನಡುವೆಯೂ ವಾಗ್ಲೆ ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ದಾಳಿಯ ನಂತರವೂ ವಾಗ್ಲೆ ಅವರು ಸಭೆಯ ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಿಖಿಲ್ ವಾಗ್ಲೆ ಸಂಚರಿಸುತ್ತಿದ್ದ ಕಾರಿನಲ್ಲಿ ನ್ಯಾಯವಾದಿ ಆಸಿಮ್ ಸರೋದೆ ಮತ್ತು ಸಾಮಾಜಿಕ ಕಾರ್ಯಕರ್ತ ವಿಶ್ವಂಭರ್ ಚೌಧರಿ ಕೂಡ ಇದ್ದರೆಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪತ್ರಕರ್ತ ನಿಖಿಲ್ ವಾಘ್ಲೆ ಮೇಲೆ ಬಿಜೆಪಿ ದೂರು: ಪುಣೆಯಲ್ಲಿ ಎಫ್‌ಐಆರ್ ದಾಖಲು

ಬಿಜೆಪಿಯವರ ದಾಳಿಯಿಂದ ಕಾರಿನ ಗಾಜು ಹುಡಿಯಾಗಿದ್ದು, ಕೂಡಲೇ ಕಾರನ್ನು ಸುತ್ತುವರಿದ ಪುಣೆ ಪೊಲೀಸರು ಹೆಚ್ಚಿನ ಅನಾಹುತದಿಂದ ಪಾರು ಮಾಡಿದ್ದಾರೆ. ದಾಳಿ ನಡೆಸಿರುವ ದೃಶ್ಯವು ಕ್ಯಾಮರಾಗಳಲ್ಲಿ ಸೆರೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...