ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಅತ್ಯಾಚಾರ; ಇಬ್ಬರು ಕಾಮುಕ ಶಿಕ್ಷಕರ ಬಂಧನ

Date:

ವೈದ್ಯಕೀಯ ಪ್ರವೇಶ ಪರೀಕ್ಷೆಗೆ (ನೀಟ್‌) ತಯಾರಿ ನಡೆಸುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ. ನೀಟ್‌ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಇಬ್ಬರು ಕಾಮುಕ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

ಕಾನ್ಪುರದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಸಾಯನಶಾಸ್ತ್ರ ಬೋಧಿಸುತ್ತಿದ್ದ ವಿಕಾಸ್ ಪೋರ್ವಾಲ್ (39) ಮತ್ತು ಜೀವಶಾಸ್ತ್ರ ಕಲಿಸುತ್ತಿರುವ ಸಾಹಿಲ್ ಸಿದ್ದಿಕಿ (32) ಬಂಧಿತ ಆರೋಪಿಗಳು. ಈ ಇಬ್ಬರೂ ಸಂತ್ರಸ್ತ ವಿದ್ಯಾರ್ಥಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

“ಇಬ್ಬರು ಆರೋಪಿ ಶಿಕ್ಷಕರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ ಆರೋಪಗಳ ಮೇಲೆ ಬಿಎನ್‌ಎಸ್‌ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ಸಿದ್ದಿಕಿ ಬೇರೊಬ್ಬ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸಂತ್ರಸ್ತ ವಿದ್ಯಾರ್ಥಿ ಫತೇಪುರ್‌ ಮೂಲದವರಾಗಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ದಾಖಲಿಸಿರುವ ದೂರಿನಲ್ಲಿ, “ಆರೋಪಿ ಸಿದ್ದಿಕಿ ತನ್ನನ್ನು ಕಲ್ಯಾಣಪುರದ ಮಕ್ಡಿ-ಖೇರಾ ಪ್ರದೇಶದಲ್ಲಿದ್ದ ಆತನ ಸ್ನೇಹಿತರ ನಿವಾಸಕ್ಕೆ ಹೊಸ ವರ್ಷದ ಕೂಟಕ್ಕೆ ಆಹ್ವಾನಿಸಿದ್ದನು. ಜೊತೆಗೆ ಅಲ್ಲಿಗೆ ಇತರ ವಿದ್ಯಾರ್ಥಿಗಳು ಕೂಡಾ ಇರುತ್ತಾರೆಂದು ಹೇಳಿದ್ದನು. ಆದರೆ, ಆ ಸ್ಥಳಕ್ಕೆ ಹೋದಾಗ, ಅಲ್ಲಿ ಯಾರೂ ಇರಲಿಲ್ಲ. ಈ ವೇಳೆ ಸಿದ್ದಿಕಿ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ” ಎಂದು ಆರೋಪಿಸಿದ್ದರೆ.

ಅಷ್ಟೆ ಅಲ್ಲದೆ, “ದುಷ್ಕರ್ಮಿಯು ಅತ್ಯಾಚಾರದ ಕೃತ್ಯವನ್ನು ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ಧಾನೆ. ವಿಡಿಯೋವನ್ನು ವೈರಲ್ ಮಾಡುವ ಬೆದರಿಯೊಡ್ಡಿ, ನನ್ನನ್ನು ತನ್ನ ಫ್ಲಾಟ್‌ನಲ್ಲಿ ಆರು ತಿಂಗಳ ಕಾಲ ಒತ್ತೆಯಾಳಾಗಿಟ್ಟುಕೊಂಡಿದ್ದು ಪದೇ ಪದೇ ಅತ್ಯಾಚಾರವೆಸಗಿದ್ದಾನೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...