ಚಂಡೀಗಢ ಮೇಯರ್ ಚುನಾವಣೆ: ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Date:

ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಮತಪತ್ರಗಳನ್ನು ತಿರುಚಿರುವುದರ ಬಗ್ಗೆ ಚುನಾವಣಾಧಿಕಾರಿ ಅನಿಲ್ ಮಾಸಿಹ್ ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಚಂಡೀಗಢ ಮೇಯರ್ ಚುನಾವಣೆಯ ಫಲಿತಾಂಶದ ಬಗ್ಗೆ ಹೊಸದಾಗಿ ಚುನಾವಣೆಗೆ ಆದೇಶಿಸುವ ಬದಲು ಪ್ರಸ್ತುತ ಬ್ಯಾಲೆಟ್ ಪೇಪರ್‌ಗಳ ಆಧಾರದ ಮೇಲೆ ಘೋಷಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದ್ದು, ಮತ ಪತ್ರಗಳನ್ನು ನಾಳೆ ಬೆಳಗ್ಗೆ 10.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ಚುನಾವಣಾಧಿಕಾರಿ ಅನಿಲ್ ಮಾಸೀಹ್ ಅವರಿಗೆ ನೋಟಿಸ್ ನೀಡಿತ್ತು. ನೋಟಿಸ್ ಹಿನ್ನೆಲೆಯಲ್ಲಿ ಹಾಜರಾಗಿದ್ದ ಅವರು, 8 ಬ್ಯಾಲೆಟ್ ಪೇಪರ್‌ಗಳ ಮೇಲೆ ಮಾರ್ಕ್‌ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಿಟರ್ನಿಂಗ್‌ ಅಧಿಕಾರಿ ಅನಿಲ್ ಮಾಸೀಹ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಮತ ಪತ್ರಗಳನ್ನು ನಾಳೆ ಬೆಳಿಗ್ಗೆ, 10.30 ಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಮತಪತ್ರಗಳನ್ನು ನ್ಯಾಯಾಲಯಕ್ಕೆ ತರಲು ನ್ಯಾಯಾಂಗ ಅಧಿಕಾರಿಯನ್ನು ನಾಮನಿರ್ದೇಶನ ಮಾಡಲು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರನ್ನು ಕೇಳುವುದಾಗಿ ಹೇಳಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಚಂಡೀಗಢ ಮೇಯರ್ ಚುನಾವಣೆಯ ಅಕ್ರಮದ ವಿಚಾರಣೆ ನಡೆಯುತ್ತಿರುವಾಗಲೇ ಕುದುರೆ ವ್ಯಾಪಾರ ನಡೆಯುತ್ತಿದೆ. ಎಎಪಿಯ ಮೂವರು ಕೌನ್ಸಿಲರ್‌ಗಳಾದ ನೇಹಾ, ಪೂನಂ ಹಾಗೂ ಗುರುಚರಣ್ ಕಾಲಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅನಿಲ್ ಮಾಸಿಹ್ ಅವರು ಮಾಡಿರುವ ಗುರುತುಗಳನ್ನು ಕಡೆಗಣಿಸಿ ಈಗಾಗಲೇ ಚಲಾವಣೆಯಾದ ಮತಗಳನ್ನು ಎಣಿಕೆ ಮಾಡುವಂತೆ ನಿರ್ದೇಶಿಸುವುದಾಗಿ ನ್ಯಾಯಾಲಯ ಹೇಳಿದೆ.

ಚುನಾವಣಾ ಅಧಿಕಾರಿಯಾಗಿ ನಾಮನಿರ್ದೇಶನ ಮಾಡಲು ಚಂಡೀಗಢ ಆಡಳಿತದ ಡೆಪ್ಯುಟಿ ಕಮಿಷನ‌ರ್ ಅವರನ್ನು ಕೇಳುವುದಾಗಿ ನ್ಯಾಯಾಲಯ ತಿಳಿಸಿದ್ದು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ನಾಮ ನಿರ್ದೇಶನಗೊಂಡ ನ್ಯಾಯಾಂಗ ಅಧಿಕಾರಿಯಿಂದ ಸಂಪೂರ್ಣ ಎಣಿಕೆ ಪ್ರಕ್ರಿಯೆಯನ್ನು ನ್ಯಾಯಾಲಯದ  ಮೇಲ್ವಿಚಾರಣೆ ಮೂಲಕ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...