ಮೀಡಿಯಾ ಒನ್ ಚಾನೆಲ್ ನಿಷೇಧ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಕೇಂದ್ರಕ್ಕೆ ಹಿನ್ನಡೆ

Date:

  • ‘ರಾಷ್ಟ್ರೀಯ ಭದ್ರತೆ’ಯ ಕಾರಣ ನೀಡಿ ಕ್ರಮಕೈಗೊಳ್ಳಲು ಸಾಧ್ಯವಿಲ್ಲ
  • ನಾಲ್ಕು ವಾರಗಳಲ್ಲಿ ಚಾನಲ್‌ಗೆ ನವೀಕರಣ ಪರವಾನಗಿ ನೀಡಲು ಸೂಚನೆ

ಮಲಯಾಳಂ ಸುದ್ದಿವಾಹಿನಿ ಮೀಡಿಯಾ ವನ್‌ ಮೇಲೆ ಕೇಂದ್ರ ಸರ್ಕಾರ ವಿಧಿಸಿದ್ದ ನಿಷೇಧವನ್ನು ರದ್ದುಗೊಳಿಸಿ ಸುಪ್ರೀಕೋರ್ಟ್‌ ಬುಧವಾರ ಮಹತ್ವದ ತೀರ್ಪು ನೀಡಿದೆ.

ನಾಗರಿಕರ ಹಕ್ಕುಗಳನ್ನು ನಿರಾಕರಿಸಲು ‘ರಾಷ್ಟ್ರೀಯ ಭದ್ರತೆ’ಯ ಕಾರಣ ನೀಡಿ ನಾಗರಿಕರ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಚಾನೆಲ್ ನಡೆಸುತ್ತಿರುವ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್ (ಎಂಬಿಎಲ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠ ಈ ಮಹತ್ವದ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾನೆಲ್‌ನ ಕೆಲವು ಕಾರ್ಯಕ್ರಮಗಳು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತವೆ ಎಂಬ ಕೇಂದ್ರ ಸರ್ಕಾರದ ವಾದವನ್ನು ತಳ್ಳಿ ಹಾಕಿರುವು ಸುಪ್ರೀಂ ಕೋರ್ಟ್, ರಾಷ್ಟ್ರೀಯ ಭದ್ರತಾ ಹಕ್ಕುಗಳನ್ನು ಗಾಳಿಯಿಂದ ಮಾಡಲಾಗುವುದಿಲ್ಲ. ಅದನ್ನು ಬೆಂಬಲಿಸುವ ಸಂಗತಿಗಳು ದಾಖಲೆಯ ರೂಪದಲ್ಲಿ ಇರಬೇಕು ಎಂದು ಉನ್ನತ ನ್ಯಾಯಾಲಯವು ಎಚ್ಚರಿಸಿದೆ.

ಚಾನಲ್‌ನ ಪ್ರಸಾರ ಪರವಾನಗಿಯನ್ನು ನವೀಕರಿಸದಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರವನ್ನು ಈ ಹಿಂದೆ ಕೇರಳ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಚಾನೆಲ್‌ನ ಸಂಪಾದಕ ಪ್ರಮೋದ್ ರಾಮನ್ ಮತ್ತು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಸುಪ್ರೀಂ ಕೋರ್ಟಿನಲ್ಲಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿತ್ತು.

ಈ ಬಗ್ಗೆಯೂ ತೀರ್ಪಿನಲ್ಲಿ ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, “ಈ ತೀರ್ಮಾನಕ್ಕೆ ಹೈಕೋರ್ಟ್‌ ಯಾವುದೇ ವಿವರಣೆ ನೀಡಿಲ್ಲ” ಎಂದು ತಿಳಿಸಿದ್ದು, “ನಾಲ್ಕು ವಾರಗಳಲ್ಲಿ ಚಾನಲ್‌ಗೆ ನವೀಕರಣ ಪರವಾನಗಿಯನ್ನು ನೀಡಬೇಕು” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

ಚಾನೆಲ್‌ಗೆ ಪರವಾನಗಿಯನ್ನು ನವೀಕರಿಸದಿರುವುದು ವಾಕ್ ಸ್ವಾತಂತ್ರ್ಯದ ಮೇಲಿನ ನಿರ್ಬಂಧವಾಗಿದೆ ಮತ್ತು ಆರ್ಟಿಕಲ್ 19 (2) ಅಡಿಯಲ್ಲಿ ಮಾತ್ರ ಅದನ್ನು ವಿಧಿಸಬಹುದು ಎಂದು ಪೀಠ ಹೇಳಿದೆ.

ಜಮಾಅತೆ ಇಸ್ಲಾಮಿ ಹಿಂದ್‌ ಸಂಘಟನೆಯು ಮೀಡಿಯಾ ಒನ್ ಚಾನಲ್‌ನ ಷೇರುದಾರರು ಎಂದು ಉಲ್ಲೇಖಿಸಿದ್ದ ಕೇಂದ್ರ ಸರ್ಕಾರದ ವಾದವನ್ನು ಬೊಟ್ಟು ಮಾಡಿದ ಸುಪ್ರೀಂ ಕೋರ್ಟ್, ಇದು ಚಾನೆಲ್‌ನ ಹಕ್ಕುಗಳನ್ನು ನಿರ್ಬಂಧಿಸಲು ಕಾನೂನುಬದ್ಧ ಆಧಾರವಲ್ಲ ಎಂದು ಹೇಳಿದೆ.

2022ರ ಮಾರ್ಚ್ 15ರಂದು ಅಂತಿಮ ನಿರ್ಧಾರದವರೆಗೆ ಚಾನೆಲ್ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...