ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ ಸರ್ಕಾರದ್ದು: ಗೋವಿಂದ ಕಾರಜೋಳ

Date:

ಡಿಸೆಂಬರ್ 8ಕ್ಕೆ ಬೆಳಗಾವಿ ಅಧಿವೇಶನ ಆರಂಭ ಆಗಲಿದೆ. ಅಷ್ಟರೊಳಗೆ ಸುಪ್ರೀಂ ಕೋರ್ಟ್, ಹೈಕೋರ್ಟಿನಲ್ಲಿ ಕೇಸುಗಳು ದಾಖಲಾಗಿ ಒಳಮೀಸಲಾತಿ ಕುರಿತ ಆದೇಶ ರದ್ದಾಗಬೇಕೆಂಬುದು ಸಿದ್ದರಾಮಯ್ಯ ಸರಕಾರದ ದುರುದ್ದೇಶ ಎಂದು ಮಾಜಿ ಉಪ ಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ಮಾತನಾಡಿದ ಅವರು, “ಸರ್ಕಾರ ದೋಷದಿಂದ ಕೂಡಿದ ಆದೇಶಗಳನ್ನು ಮಾಡುತ್ತಿದೆ. ಈ ಮೂಲಕ ಪರಿಶಿಷ್ಟ ಜನಾಂಗದವರಿಗೆ ಅನ್ಯಾಯ ಮಾಡುತ್ತಿದೆ. ಸಿದ್ದರಾಮಯ್ಯರ ಸರಕಾರದ ಆದೇಶವನ್ನು ಪ್ರಶ್ನಿಸಿ ಈಚೆಗೆ ಹೈಕೋರ್ಟಿನಲ್ಲಿ ಕೇಸ್ ಬಂದಾಗ ರಾಜ್ಯ ಸರಕಾರದ ಕಡೆಯಿಂದ ಯಾರೂ ಹಾಜರಾಗಿಲ್ಲ. ಹೀಗಾಗಿ ಆದೇಶ ಭಾಗಶಃ ತಡೆಯಾಗಿದೆ” ಎಂದು ವಿವರಿಸಿದರು.

101 ಜಾತಿಯ ಹಿತ ಕಾಯಲು ಬಯಸುತ್ತಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಜಾತಿಯ ಹಿತಕ್ಕಾಗಿ ಸಿದ್ದರಾಮಯ್ಯನವರು ಆಟ ಆಡುತ್ತಿದ್ದಾರೆ. 101 ಜಾತಿಯ ಹಿತ ಕಾಯಲು ಅವರು ಬಯಸುತ್ತಿಲ್ಲ. ಆರ್ಥಿಕ ಸಂಕಷ್ಟ ಇರುವುದರಿಂದ ನೇಮಕಾತಿ ಮುಂದೆ ಹೋದಷ್ಟೂ ಅವರಿಗೆ ಒಳ್ಳೆಯದೆಂಬ ಭಾವನೆ ಇದೆ. ಖಜಾನೆ ಖಾಲಿ ಆಗಿದೆ. ನೇಮಕಾತಿ ಮಾಡಲೂ ಅವರು ತಯಾರಿಲ್ಲ” ಎಂದು ದೂರಿದರು.

“ಮತ್ತೆ ಈ ಜನಾಂಗಕ್ಕೆ ಮೋಸ ಮಾಡಲು ಸಿದ್ದರಾಮಯ್ಯರ ಸರಕಾರ ಇವತ್ತು ಸಂಪುಟ ಸಭೆ ನಡೆಸುತ್ತಿದೆ. ಕರಡು ಮಸೂದೆ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. 5ರೊಳಗೆ ಹೈಕೋರ್ಟಿಗೆ ರಾಜ್ಯ ಸರಕಾರ ತನ್ನ ವಾದವನ್ನು ಮಂಡಿಸಲು ಬೇಕಾದ ವಿವರಣೆ ನೀಡಬೇಕಾಗಿದೆ” ಎಂದು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, “ಒಳ ಮೀಸಲಾತಿ ವಿಚಾರದಲ್ಲಿ ಗೊಂದಲಗಳಿವೆ. ಸಂವಿಧಾನಬದ್ಧವಾಗಿ ಯೋಚಿಸದೇ ಈ ರಾಜ್ಯ ಸರಕಾರವು ರಾಜಕೀಯ ತೀರ್ಮಾನ ತೆಗೆದುಕೊಂಡಿದೆ. ಒಂದು ವಾರದಿಂದ ಅಲೆಮಾರಿಗಳ ಮೀಸಲಾತಿ ಕುರಿತ ಚರ್ಚೆ ಮಾಡಲಾಗುತ್ತಿದೆ. ಅಲೆಮಾರಿ ಸಮುದಾಯವು ಪ್ರತ್ಯೇಕ ಮೀಸಲಾತಿ ಕೇಳುತ್ತಿದ್ದಾರೆ. ಅವರು ಪ್ಯಾಕೇಜ್ ಕೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ, ಈ ಸರಕಾರವು ಮತ್ತೆ ಮತ್ತೆ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ” ಎಂದು ದೂರಿದರು.

ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ, ನಿವೃತ್ತ ಐ.ಎ.ಎಸ್. ಅಧಿಕಾರಿಗಳಾದ ಅನಿಲ್ ಕುಮಾರ್, ಲಕ್ಷ್ಮೀನಾರಾಯಣ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...