ತುಮಕೂರು | ಸಿದ್ಧಾರ್ಥ ಕಾಲೇಜಿನಲ್ಲಿ ಬುದ್ಧ, ಬಸವಣ್ಣನ ಕುರಿತು ವಿಶೇಷ ಉಪನ್ಯಾಸ

Date:

ಬುದ್ದರವರ ಪಂಚಶೀಲ ಮತ್ತು ಅಷ್ಠಾಂಗ ಮಾರ್ಗಗಳನ್ನು ಬೋಧಿಸಿದರು ಮತ್ತು ಬುದ್ದರವರ ತತ್ವಗಳು ಸಮಾಜ ಪ್ರತಿಯೊಬ್ಬ ಪ್ರಜೆಗೂ ಅತ್ಯಗತ್ಯ ಎಂದು ಕ್ರೈಸ್ಟ್ ಕಾಲೇಜಿನ ಪ್ರಾಧ್ಯಾಪಕ ಡಾ. ಹಾ ರಾ ಮಹೇಶ್ ತಿಳಿಸಿದರು

ತುಮಕೂರು ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಘಟಕದ ವತಿಯಿಂದ ಬುದ್ಧ ಬಸವಣ್ಣ ನವರ ಜಯಂತಿಯ ಅಂಗವಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಬುದ್ದ ಮತ್ತು ಬಸವಣ್ಣರವರ ಜೀವನ ಚರಿತ್ರೆಯನ್ನು ವಿದ್ಯಾಥಿಗಳಿಗೆ ಮನಮುಟ್ಟುವಂತೆ ತಿಳಿಸುತ್ತಾ, ಬಸವಣ್ಣರವರ ತತ್ವಗಳು 12ನೇ ಶತಮಾನಗಳಲ್ಲೇ ಸಮಾನತೆ, ಸ್ವಾತಂತ್ರ, ವ್ಯಕ್ತಿ ಗೌರವ, ಮಹಿಳಾ ಸಮಾನತೆ, ಸಹೋದರತ್ವದ ಮಕ್ಕಳಿಗೆ ಸಂಕ್ಷೀಪ್ತವಾಗಿ ಹೇಳಿದರು.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಂಗಸ್ವಾಮಿ ಎಂ ಆರ್  ಮಾತನಾಡಿ ಬುದ್ದನ ವಿಚಾರಗಳು ಪ್ರಸ್ತುತ ಯುವಕರಿಗೆ ಅತ್ಯವಶ್ಯಕವಾಗಿದೆ. ಬುದ್ದ, ಬಸವ, ಅಂಬೇಡ್ಕರ್, ಲೋಯಿಯಾ, ಕಾರ್ಲ್ಮಾರ್ಕ್ಸ್ ರವರ ತತ್ವಗಳನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತ ಪಿ ರವರು ಬುದ್ದ ಮತ್ತು ಬಸವಣ್ಣರವರ ಮೌಲ್ಯಗಳು ಶೈಕ್ಷಣಿಕವಾಗಿ ಅವರ ಜಿಂತನೆಗಳು ಇರದೇ ಜೀವನದ ಮೌಲ್ಯಗಳಾಗಿ ರೂಢಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷೀಯ ಮಾತುಗಳನ್ನು ನುಡಿದರು.

 ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಬುದ್ದ ನಿಮಗೆಷ್ಟು ಗೊತ್ತು? ಮತ್ತು ಬಸವಣ್ಣ ನಿಮಗೆಷ್ಟು ಗೊತ್ತು? ಎಂಬ ವಿಷಯದ ಮೇಲೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಈ ಸ್ಪರ್ಧೆಯಲ್ಲಿ ತನುಜ ಮತ್ತು ಯಶವಂತ್ ರವರು ಕ್ರಮವಾಗಿ ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡರು ಮತ್ತು ವಿಜೇತರನ್ನು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿನೋದ  ಘೋಷಿಸಿದರು.

 ಕಾರ್ಯಕ್ರಮವನ್ನು ಕಾಲೇಜಿನ ಬಿಕಾಂ ವಿಭಾಗದ ಮುಖ್ಯಸ್ಥರಾದ ಪ್ರೊ. ವಿನಯ್‌ಕುಮಾರ್ ಎಂ  ಸ್ವಾಗತಿಸುತ್ತಾ ಬುದ್ದನ ವಿಚಾರಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡ ಬಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. 

ಕಾಲೇಜಿನ ಎಂ ಕಾಂ ವಿಭಾಗದ ಸಂಯೋಜಕರು ಮತ್ತು ಐಕ್ಯೂಎಸಿಯ ಸಂಚಾಲಕರಾದ ಪ್ರೊ. ಸೈಯದ್ ಬಾಬು ಹೆಚ್ ಬಿ ರವರು ಎಲ್ಲಾ ಅತಿಥಿಗಳನ್ನು ವಂದಿಸುತ್ತಾ ಬಸವಣ್ಣರವರ ಕಾಲದಲ್ಲೇ ಪ್ರಜಾಪ್ರಭುತ್ವದ ಇತ್ತು ಅಂದರೆ ಅನುಭವ ಮಂಟಪದ ಮೂಲಕ ಸಮಾನತೆಯನ್ನು ಸಾರಿದರು ಎಂದು ಹೇಳಿದರು

 ಕಾರ್ಯಕ್ರಮದ ನಿರೂಪಣೆಯನ್ನು ನೇಹ ಅಪ್ರೀನ್ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...