ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣ ಆಗಿರುವ ಹಿನ್ನೆಲೆಯಲ್ಲಿ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಅನುದಾನಿತ ಪ್ರೌಢಶಾಲೆಯಾಗಿರುವ ತಿರುಮಲ ರಾಘವೇಂದ್ರ ಪ್ರೌಢಶಾಲೆ ಎದುರು ಪ್ರತಿಭಟನೆ ಮಾಡಿದ್ದಾರೆ.
“56 ಮಂದಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 17 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ. ಕಳೆದ ಒಂದು ವರ್ಷದಿಂದ ನಾಲ್ವರು ಶಿಕ್ಷಕರಿಲ್ಲದ ಪರಿಣಾಮ ಮಕ್ಕಳು ಅನುತ್ತೀರ್ಣರಾಗಿದ್ದಾರೆ” ಎಂದು ಪೋಷಕರು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡಿದ್ದ ಮುಸ್ಲಿಂ ವಿದ್ಯಾರ್ಥಿನಿ; ಎಸ್‌ಎಸ್‌ಎಲ್‌ಸಿಯಲ್ಲಿ 590 ಅಂಕ
“ಇಂಗ್ಲಿಷ್, ವಿಜ್ಞಾನ, ಗಣಿತ, ಹಿಂದಿ ವಿಷಯಗಳಿಗೆ ಶಿಕ್ಷಕರಿಲ್ಲದ ಪರಿಣಾಮ ನಾಲ್ಕು ವಿಷಯಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಹೀಗಿದ್ದರೂ ಶಾಲಾ ಆಡಳಿತ ಮಂಡಳಿ ಬೇಜವಬ್ದಾರಿಯಿಂದ ವರ್ತಿಸಿದೆ. ಹಾಗಾಗಿ ಮಕ್ಕಳು ಅನುತ್ತೀರ್ಣರಾಗಲು ಶಾಲಾ ಆಡಳಿತ ಮಂಡಳಿಯೇ ಕಾರಣ” ಎಂದು ಪೋಷಕರು ಆರೋಪಿಸಿದ್ದಾರೆ.





