ಶಿಂದೆಯನ್ನೇ ಸಿಎಂ ಮಾಡಲು ಉದ್ಧವ್ ಬಯಸಿದ್ದರು, ಬಿಜೆಪಿ, ಎಂವಿಎ ಅಡ್ಡಬಂದಿತು: ಸಂಜಯ್ ರಾವತ್

Date:

ಮಹಾರಾಷ್ಟ್ರದಲ್ಲಿ ಇಬ್ಭಾಗವಾದ ಶಿವಸೇನೆಯನ್ನು ಮತ್ತೆ ಒಂದುಗೂಡಿಸುವ ಮತ್ತು ಶಿವಸೇನೆ (ಶಿಂದೆ) ಬಣವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಪ್ರಯತ್ನವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಾಡುವಂತಿದೆ. “2019ರಲ್ಲಿ ಏಕನಾಥ್ ಶಿಂದೆ ಅವರನ್ನೇ ಸಿಎಂ ಮಾಡಲು ಉದ್ಧವ್ ಠಾಕ್ರೆ ಬಯಸಿದ್ದರು. ಆದರೆ ಆ ಸಂದರ್ಭದಲ್ಲಿ ಬಿಜೆಪಿಯೇ ಅಡ್ಡಬಂದಿದ್ದು” ಎಂದು ಸಂಜಯ್ ರಾವತ್ ಹೇಳಿಕೊಂಡಿದ್ದಾರೆ.

2019ರಲ್ಲಿ ಶಿವಸೇನೆ ನಾಯಕರನ್ನು ಮುಖ್ಯಮಂತ್ರಿ ಮಾಡುವ ಭರವಸೆಯನ್ನು ಬಿಜೆಪಿ ನೀಡಿತ್ತು. ಆದರೆ ಮಾತು ತಪ್ಪಿದ ಬೆನ್ನಲ್ಲೇ ಬಿಜೆಪಿ ಮೈತ್ರಿಕೂಟದಿಂದ ಶಿವಸೇನೆ ಹೊರಬಂದಿತ್ತು. ಆ ವೇಳೆ ಪಕ್ಷ ಇಬ್ಭಾಗವಾಗಿರಲಿಲ್ಲ. ಈ ಬಗ್ಗೆ ಮಾತನಾಡಿದ ಸಂಜಯ್ ರಾವತ್, “ಶಿವಸೇನೆಗೆ ಮುಖ್ಯಮಂತ್ರಿ ಸ್ಥಾನ ನೀಡುವ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ. ಆದ್ದರಿಂದಾಗಿ ಶಿಂದೆ ಸಿಎಂ ಆಗಲು ಸಾಧ್ಯವಾಗಲಿಲ್ಲ” ಎಂದು ವರದಿಗಾರರಿಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧ ಮೌನವಾಗಿರುವ ಅಣ್ಣಾ ಹಜಾರೆಗೆ ಕೇಜ್ರಿವಾಲ್ ಸೋಲಿನಿಂದ ಖುಷಿ: ಸಂಜಯ್ ರಾವತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯೊಂದಿಗೆ ಮೈತ್ರಿ ತೊರೆದ ಬಳಿಕ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌- ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಸರ್ಕಾರ ರಚಿಸಿತ್ತು. ಈ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ಸಿಎಂ ಆಗಿದ್ದರು. ಈ ವೇಳೆ ಶಿಂದೆ ಅವರನ್ನು ಸಿಎಂ ಮಾಡುವುದಕ್ಕೆ ಎಂವಿಎ ಒಪ್ಪಿಲ್ಲ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ. “ಶಿಂದೆ ಸಿಎಂ ಆಗಲು ಬಯಸಿದ್ದರು. ಅದರೆ ಅವರ ಅಡಿಯಲ್ಲಿ ಕೆಲಸ ಮಾಡಲು ಎಂವಿಎ ಒಪ್ಪಿಲ್ಲ” ಎಂದು ರಾವತ್ ತಿಳಿಸಿದ್ದಾರೆ.

“ಎನ್‌ಸಿಪಿ ಪಕ್ಷದ ಅಧ್ಯಕ್ಷರಾಗಿದ್ದ ಶರದ್ ಪವಾರ್ ಅವರು ಮತ್ತು ಅಜಿತ್ ಪವಾರ್ ಅವರು ಶಿಂದೆ ಅವರನ್ನು ಮುಖ್ಯಮಂತ್ರಿ ಮಾಡುವುದಕ್ಕೆ ವಿರೋಧಿಸಿದ್ದರು” ಎಂದು ಸಂಜಯ್ ರಾವತ್ ಹೇಳಿದ್ದಾರೆ. ಇನ್ನು ಇತ್ತೀಚೆಗೆ ಶರದ್ ಪವಾರ್, ಶಿಂದೆ ಅವರನ್ನು ಹಾಡಿಹೊಗಳಿದ್ದರು.

ಎಂವಿಎ ಸರ್ಕಾರ ರಚನೆಯಾದ ಬಳಿಕ ಶಿಂದೆ ಬಂಡಾಯವೆದ್ದು ಪ್ರತ್ಯೇಕ ಶಿವಸೇನೆ ಪಕ್ಷವನ್ನು ಸ್ಥಾಪಿಸಿ ಬಿಜೆಪಿ ಜೊತೆ ಸೇರಿ 2022ರ ಜೂನ್‌ನಲ್ಲಿ ಸರ್ಕಾರವನ್ನು ರಚಿಸಿದರು. ಪ್ರಸ್ತುತ ಮಹಾರಾಷ್ಟ್ರದಲ್ಲಿ ಶಿಂದೆ ಉಪಮುಖ್ಯಮಂತ್ರಿಯಾಗಿದ್ದಾರೆ. ಎನ್‌ಸಿಪಿಯಲ್ಲಿ ಬಂಡಾಯವೆದ್ದು ಪ್ರತ್ಯೇಕ ಪಕ್ಷ ಕಟ್ಟಿದ ಅಜಿತ್ ಪವಾರ್ ಕೂಡಾ ಡಿಸಿಎಂ ಆಗಿದ್ದಾರೆ. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...