ಉಡುಪಿ | ಚಿಲ್ಲರೆ ವಿಚಾರಕ್ಕೆ ಜಗಳ, ಮೆಡಿಕಲ್ ಶಾಪ್ ಸಿಬ್ಬಂದಿ ಮೇಲೆ ಹಲ್ಲೆ, ಆರೋಪಿ ಮಹಿಳೆಯ ಬಂಧನ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಸರ್ಕಲ್ ಬಳಿ ಇರುವ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುವ ಯುವತಿಗೆ ಚಿಲ್ಲರೆ ನೀಡುವ ವಿಷಯಕ್ಕೆ ಜಗಳವಾಗಿ ಯುವತಿಗೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಮಹಿಳೆಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿ ಯಾಸ್ಮೀನ್ ಬಂಧಿತ ಆರೋಪಿ. ಜೂ.9ರಂದು ಔಷಧಿ ಖರೀದಿಸಿದ ಯಾಸ್ಮಿನ್, 500 ರೂ. ಚಿಲ್ಲರೆ ವಿಚಾರದಲ್ಲಿ ಮೆಡಿಕಲ್‌ನ ಉದ್ಯೋಗಿ ಯುವತಿ ಜೊತೆ ಗಲಾಟೆ ಮಾಡಿದ್ದರು. ಬಳಿಕ ಯಾಸ್ಮೀನ್ ಯುವತಿಗೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾರೆಂದು ದೂರಲಾಗಿದೆ.

ಈ ಕುರಿತ ಸಿಸಿಟಿವಿ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿತ್ತು. ಅದರಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಷಯಕ್ಕಾಗಿ ಇಬ್ಬರು ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆದು ಆರೋಪಿ ಮಹಿಳೆಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದರಿ ಪ್ರಕರಣದ ಸಂತ್ರಸ್ತೆ ಮಹಿಳೆಯನ್ನು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ರವರು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...