‘ನಾವು’ vs ‘ಅವರು’ ಮನಸ್ಥಿತಿ ಸ್ವೀಕಾರಾರ್ಹವಲ್ಲ; ಸಮುದಾಯಗಳನ್ನು ಪ್ರಚೋದಿಸುವುದು ಸರಿಯಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

Date:

ವಿದೇಶಿ ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಬಾರದು. ‘ಸ್ವದೇಶಿ’ ಅಥವಾ ಸ್ಥಳೀಯ ಉತ್ಪಾದನೆಗೆ ಹೆಚ್ಚು ಒತ್ತುಕೊಡಬೇಕು. ಸಮುದಾಯಗಳ ನಡುವೆ ‘ನಾವು’ vs ‘ಅವರು’ ಮನಸ್ಥಿತಿ ಇರಬಾರದು. ನಮ್ಮದು ವೈವಿದ್ಯತೆಯ ದೇಶ. ಇಲ್ಲಿ ಸಮುದಾಯಗಳನ್ನು ಪ್ರಚೋದಿಸುವುದು ಸ್ವೀಕಾರಾರ್ಹವಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮಹಾರಾಷ್ಟ್ರದ ನಾಗ್‌ಪುರದಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ ನಡೆದ ವಿಜಯ ದಶಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಅಮೆರಿಕ ಜಾರಿಗೆ ತಂದ ಹೊಸ ಸುಂಕ ನೀತಿಯು ಅಮೆರಿಕದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೊಳಿಸಲಾಗಿದೆ. ಆದರೆ, ಪ್ರತಿಯೊಬ್ಬರೂ ಅವರಿಂದ ಪ್ರಭಾವಿತರಾಗಿದ್ದಾರೆ… ಜಗತ್ತು ಪರಸ್ಪರ ಅವಲಂಬನೆಯೊಂದಿಗೆ ಕಾರ್ಯನಿರ್ವಹಿಸುತ್ತದೆ… ಯಾವುದೇ ದೇಶವು ಪ್ರತ್ಯೇಕವಾಗಿ ಬದುಕಲು ಸಾಧ್ಯವಿಲ್ಲ. ಈ ಅವಲಂಬನೆಯು ಕಡ್ಡಾಯವಾಗಬಾರದು… ನಾವು ಸ್ವದೇಶಿಯನ್ನು ಅವಲಂಬಿಸಬೇಕು ಮತ್ತು ಸ್ವಾವಲಂಬನೆಯ ಮೇಲೆ ಗಮನಹರಿಸಬೇಕು. ಆದರೆ ನಮ್ಮ ಎಲ್ಲ ಸ್ನೇಹಪರ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು” ಎಂದಿದ್ದಾರೆ.

“ನೇಪಾಳದಲ್ಲಿ ಭುಗಿಲೆದ್ದಿರುವ ಅಶಾಂತಿ ಒಳ್ಳೆಯ ಸಂಕೇತವಲ್ಲ. ಸಾರ್ವಜನಿಕ ಕೋಪವು ಹಿಂಸೆಗೆ ತಿರುಗಿದ್ದರಿಂದ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ನೇಪಾಳದಲ್ಲಿ ಆಡಳಿತ ಬದಲಾವಣೆ ನಡೆದಿರುವುದು ಕಳವಳಕಾರಿಯಾಗಿದೆ. ಭಾರತದಲ್ಲಿ ಅಂತಹ ಅಶಾಂತಿಯನ್ನು ಸೃಷ್ಟಿಸಲು ಬಯಸುವ ಶಕ್ತಿಗಳು ನಮ್ಮ ದೇಶದ ಒಳಗೆ ಮತ್ತು ಹೊರಗೆ ಸಕ್ರಿಯವಾಗಿವೆ” ಎಂದು ಭಾಗವತ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈವಿಧ್ಯತೆಯು ಭಾರತದ ಸಂಪ್ರದಾಯವಾಗಿದೆ. ನಾವು ನಮ್ಮ ವೈವಿದ್ಯಯತೆಯನ್ನು ಅಳವಡಿಸಿಕೊಳ್ಳಬೇಕು. ಕೆಲವು ಭಿನ್ನಾಭಿಪ್ರಾಯಗಳು ಅಶಾಂತಿಗೆ ಕಾರಣವಾಗಬಹುದು. ಕಾನೂನಿನ ವ್ಯಾಪ್ತಿಯಲ್ಲಿ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು. ಸಮುದಾಯಗಳನ್ನು ಕೆರಳಿಸುವುದು ಸ್ವೀಕಾರಾರ್ಹವಲ್ಲ. ಆಡಳಿತವು ನ್ಯಾಯಯುತವಾಗಿ ವರ್ತಿಸಬೇಕು. ಆದರೆ, ಯುವಕರು ಜಾಗರೂಕರಾಗಿರಬೇಕು ಮತ್ತು ಅಗತ್ಯವಿದ್ದರೆ ಮಧ್ಯಪ್ರವೇಶಿಸಬೇಕು. ‘ನಾವು’ vs ‘ಅವರು’ ಎಂಬ ಮನಸ್ಥಿತಿ ಸ್ವೀಕಾರಾರ್ಹವಲ್ಲ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...