ಉತ್ತರ ಕನ್ನಡ | ರಸ್ತೆ ಅಪಘಾತದಲ್ಲಿ ಈ ವರ್ಷ 179 ಜನರ ದುರ್ಮರಣ 

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ಸಲುವಾಗಿ ಸಾರ್ವಜನಿಕರಲ್ಲಿ ರಸ್ತೆ ಅಪಘಾತದ ಬಗ್ಗೆ ಮತ್ತು ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರವಾರದಲ್ಲಿ ಪೊಲೀಸ್ ಇಲಾಖೆ ಇಂದು ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಆಯೋಜಿಸಿದ್ದರು.

ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಹೆಲ್ಮೆಟ್ ಇಲ್ಲದೇ ದ್ವಿಚಕ್ರ ವಾಹನ ಸವಾರಿ ಯಿಂದ  ಅಪಘಾತವಾದಾಗ ಸಾವುಗಳು ಹೆಚ್ಚಾಗಿ ಸಂಭವಿಸುತ್ತವೆ. ಪ್ರತಿ ಮನೆಯಲ್ಲಿಯೂ ದ್ವಿಚಕ್ರ ವಾಹನಗಳಿದ್ದು, 18 ವರ್ಷ ತುಂಬಿದ ಕೂಡಲೇ ಮಕ್ಕಳಿಗೆ ವಾಹನ ಕೊಡಿಸುತ್ತಾರೆ. ಆದರೆ ಪಾಲಕರು ಹೆಲ್ಮೆಟ್ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದಿಲ್ಲ. ಮನೆಗೆ ಆಧಾರವಾಗಿರುವವರೆ ರಸ್ತೆ ಅಪಘಾತದಿಂದ ಮೃತರಾದರೆ ಆ ಕುಟುಂಬಗಳು ಬೀದಿಗೆ ಬರುತ್ತವೆ ಆದ್ದರಿಂದ ಈ ಜಾಗೃತಿ ಮೂಡಿಸುತ್ತಿದ್ದೆವೆ. ಹಾಗೂ ಮುಂದಿನ ತಿಂಗಳಿಂದ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವರಿಗೆ ದಂಡ ಹಾಕುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಅವರು ಹೇಳಿದರು.

ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ, ಈ ವರ್ಷ ಜಿಲ್ಲೆಯಾದ್ಯಂತ 33,111 IMV (Indian Motor Vehicle) ಪ್ರಕರಣಗಳು ದಾಖಲಾಗಿದ್ದು, 1,169 ಜನರಿಗೆ ಗಂಭೀರ ಗಾಯಗಳಾಗಿವೆ. 2024 ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 260 ಹಾಗೂ ಒಟ್ಟು 37,151 ಪ್ರಕರಣಗಳು ದಾಖಲಾಗಿದ್ದವು.  2025ರಲ್ಲಿ ಈಗಾಗಲೇ 33 ಸಾವಿರ ಪ್ರಕರಣಗಳು ದಾಖಲಾಗಿದ್ದು 179 ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿರಸಿ | ಈಜು ಸ್ಪರ್ಧೆಯಲ್ಲಿ ಡಬಲ್ ಗೋಲ್ಡ್; ರಾಜ್ಯಮಟ್ಟಕ್ಕೆ ಆಯ್ಕೆ‌ಯಾದ ಮಾರಿಕಾಂಬ ಕಾಲೇಜು ವಿದ್ಯಾರ್ಥಿನಿ

ಅತೀವೇಗದ ವಾಹನ ಚಲಾವಣೆ, ಮದ್ಯಪಾನ ಮಾಡಿ ಡ್ರೈವಿಂಗ್ ಮಾಡಿರುವ ಪ್ರಕರಣಗಳು ಸಹ ಹೆಚ್ಚಾಗಿದ್ದು, ಒಟ್ಟು 307 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಒಟ್ಟು 14.90 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ 150 ಜನರ ಚಾಲನಾ ಪರವಾನಗಿಯನ್ನು (DL) ರದ್ದುಪಡಿಸಲಾಗಿದೆ. ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ...

ಉತ್ತರ ಕನ್ನಡ | ‘ಸ್ವಯಂಚಾಲಿತ ಮ್ಯುಟೇಶನ್’ ಕ್ರಾಂತಿ: 900ಕ್ಕೂ ಅಧಿಕ ಪ್ರಕರಣಗಳು ಹಸ್ತಕ್ಷೇಪವಿಲ್ಲದೆ ವಿಲೇವಾರಿ

ಭೂದಾಖಲೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಸಾರ್ವಜನಿಕರ ಅಲೆದಾಟ ತಪ್ಪಿಸಲು ಸರ್ಕಾರ...

ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ...