ಜ್ಞಾನವಾಪಿ ಮಸೀದಿ ಪ್ರಕರಣ : ವೈಜ್ಞಾನಿಕ ಸಮೀಕ್ಷೆ ಮಾಡಲು ಅವಕಾಶ ನೀಡಿದ ನ್ಯಾಯಾಲಯ

Date:

ಜ್ಞಾನವಾಪಿ ಮಸೀದಿ ಆವರಣವನ್ನು ಸಮೀಕ್ಷೆ ಮಾಡುವಂತೆ ಕೋರಿ ಹಿಂದೂ ಮಹಿಳಾ ಭಕ್ತರು ಸಲ್ಲಿಸಿದ್ದ ಅರ್ಜಿಗೆ ಒಪ್ಪಿಗೆ ಸೂಚಿಸಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯವು, ವೈಜ್ಞಾನಿಕ ಸಮೀಕ್ಷೆ ಮಾಡಲು ಅನುಮತಿಸಿದೆ.

ಈಗಾಗಲೇ ಮೊಹರು ಮಾಡಲಾಗಿರುವ ವುಜುಖಾನಾ ಹೊರತುಪಡಿಸಿ ಸಂಪೂರ್ಣ ಜ್ಞಾನವಾಪಿ ಮಸೀದಿ ಆವರಣವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸಮೀಕ್ಷೆ ಮಾಡುವಂತೆ ನ್ಯಾಯಾಲಯವು ಸೂಚಿಸಿದೆ.

ಪೂರ್ವದಲ್ಲಿ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ರಚನೆಯ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ಕಂಡುಹಿಡಿಯಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಇಡೀ ಜ್ಞಾನವಾಪಿ ಮಸೀದಿ ಆವರಣದ (ವುಜುಖಾನಾ ಹೊರತುಪಡಿಸಿ) ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಕೋರಿ ನಾಲ್ವರು ಹಿಂದೂ ಮಹಿಳಾ ಆರಾಧಕರು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಇಂದು ಆದೇಶ ಪ್ರಕಟಿಸಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್, ವೈಜ್ಞಾನಿಕ ಸಮೀಕ್ಷೆಯು ಬೆಳಗ್ಗೆ 8ರಿಂದ 12 ಗಂಟೆಯ ನಡುವೆ ನಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದ್ದಾರೆ.

ಮಸೀದಿಯಲ್ಲಿ ನಮಾಝ್ ನಿರ್ವಹಿಸಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ಮಸೀದಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ವೈಜ್ಞಾನಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಅಧ್ಯಯನ ವರದಿಯನ್ನು ಆಗಸ್ಟ್ 4ರೊಳಗೆ ನ್ಯಾಯಾಲಯದ ಮುಂದೆ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ವಾರಣಾಸಿ ಕೋರ್ಟ್ ನಿರ್ದೇಶನ ನೀಡಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, ‘ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ನನ್ನ ಅರ್ಜಿಯನ್ನು ಅನುಮೋದಿಸಲಾಗಿದೆ ಎಂದು ನನಗೆ ತಿಳಿಸಲಾಗಿದೆ. ನ್ಯಾಯಾಲಯವು ಜ್ಞಾನವಾಪಿ ಮಸೀದಿ ಸಂಕೀರ್ಣದ ವುಝೂ ಟ್ಯಾಂಕ್ ಅನ್ನು ಹೊರತುಪಡಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸಮೀಕ್ಷೆಯನ್ನು ನಡೆಸುವಂತೆ ಸೂಚಿಸಿದೆ’ ಎಂದು ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...