ಟೊಮ್ಯಾಟೊ ರಕ್ಷಣೆಗಾಗಿ ಅಂಗಡಿಯಲ್ಲಿ ‘ಬೌನ್ಸರ್’ಗಳನ್ನು ನೇಮಿಸಿದ ವ್ಯಾಪಾರಿ!

Date:

ದೇಶದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಟೊಮ್ಯಾಟೊ ಬೆಲೆ ಕೆ ಜಿ ಗೆ 100ರ ಗಡಿ ದಾಟಿದೆ. ತರಕಾರಿ ವ್ಯಾಪಾರ ಮಾಡುವವರು ಕಳ್ಳತನ ತಡೆಯಲು ಸಿಸಿ ಕ್ಯಾಮೆರಾ ಸೇರಿದಂತೆ ಬೇರೆ ಬೇರೆ ಉಪಾಯದ ಮೊರೆ ಹೋದರೆ, ಉತ್ತರ ಪ್ರದೇಶದ ವ್ಯಾಪಾರಿಯೋರ್ವ ‘ಬೌನ್ಸರ್’ಗಳನ್ನು ನೇಮಿಸಿರುವುದಾಗಿ ಸುದ್ದಿಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.

ಉತ್ತರ ಪ್ರದೇಶದ ವಾರಣಾಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ, ಟೊಮ್ಯಾಟೋಗೆ ರಕ್ಷಣೆ ನೀಡಲು ಇಬ್ಬರು ಬೌನ್ಸರ್‌ಗಳನ್ನು ನೇಮಿಸಿಕೊಂಡಿದ್ದಾರೆ.

ಈ ಬಗ್ಗೆ ಪಿಟಿಐನೊಂದಿಗೆ ಮಾತನಾಡಿರುವ ವ್ಯಾಪಾರಿ ಅಜಯ್, “ಮೋದಿಯವರ ಆಡಳಿತ ಇರುವಾಗಲೇ ಟೊಮ್ಯಾಟೊ ಬೆಲೆ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಜನರು ಹಿಂಸಾಚಾರದಲ್ಲಿ ತೊಡಗಿಕೊಂಡು ಟೊಮ್ಯಾಟೋವನ್ನು ಲೂಟಿ ಮಾಡುತ್ತಿರುವ ಸುದ್ದಿ ಬರುತ್ತಿದೆ. ಹಾಗಾಗಿ, ಟೊಮ್ಯಾಟೊ ಬೆಲೆ ಜಾಸ್ತಿಯಾಗಿರುವುದರಿಂದ ಬೌನ್ಸರ್‌ಗಳನ್ನು ನೇಮಿಸಿಕೊಂಡಿದ್ದೇನೆ. ನಮ್ಮ ಅಂಗಡಿಯಲ್ಲಿ ಟೊಮ್ಯಾಟೊ ಇರುವುದರಿಂದ ಇಲ್ಲಿ ಜಗಳವಾಗಬಾರದು ಎಂದು ಈ ರೀತಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇನೆ” ಎಂದು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಪ್ರದೇಶದಲ್ಲಿ ಟೊಮ್ಯಾಟೊ ಪ್ರತಿ ಕೆ.ಜಿ.ಗೆ 160ಯಲ್ಲಿ ಮಾರಾಟ ಮಾಡಲಾಗುತ್ತಿದೆ. ಕೆಜಿಗಟ್ಟಲೇ ಖರೀದಿಸುತ್ತಿದ್ದ ಜನರು ಬೆಲೆ ಹೆಚ್ಚಾಗಿರುವುದರಿಂದ 50 ಅಥವಾ 100 ಗ್ರಾಂ ಖರೀದಿಸುತ್ತಿದ್ದಾರೆ” ಎಂದು ವ್ಯಾಪಾರಿ ಅಜಯ್ ಫೌಜಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...