ಹಿರಿಯ ಪತ್ರಕರ್ತ ಜಿ ಎನ್ ರಂಗನಾಥರಾವ್ ನಿಧನ

Date:

ಹಿರಿಯ ಪತ್ರಕರ್ತ, ಲೇಖಕ, ಅನುವಾದಕ ಜಿ ಎನ್ ರಂಗನಾಥರಾವ್ ಅವರು ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಸವನಗುಡಿಯ ಬಿಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ತೀರಿಕೊಂಡರು.

ಅವರಿಗೆ 81 ವರ್ಷ ವಯಸ್ಸಾಗಿತ್ತು.

1942ರಲ್ಲಿ ಬೆಂಗಳೂರು ಸನಿಹದ ಹಾರೋಹಳ್ಳಿಯಲ್ಲಿ ಜನಿಸಿದ ಅವರು, ಹೊಸಕೋಟೆ ಹಾಗೂ ಬೆಂಗಳೂರು ನಗರಗಳಲ್ಲಿ ವಿದ್ಯಾಭ್ಯಾಸ ಮಾಡಿದರು. ನಂತರ ಪತ್ರಕರ್ತರಾಗಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1962ರಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿಜೀವನದ ಆರಂಭಿಸಿದ್ದ ಅವರು ನಂತರ ಪ್ರಜಾವಾಣಿ ಸೇರಿದ್ದರು. ಪ್ರಜಾವಾಣಿಯಲ್ಲಿ ಹಂತ ಹಂತವಾಗಿ ಮೇಲೇರಿ ಕಾರ್ಯನಿರ್ವಾಹಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಪ್ರಜಾವಾಣಿ ಸಾಪ್ತಾಹಿಕ ಪುರವಣಿ ಮುಖ್ಯಸ್ಥರಾಗಿ, ಸುಧಾ ವಾರಪತ್ರಿಕೆಯ ಉಸ್ತುವಾರಿಯಾಗಿ ಹತ್ತಾರು ಲೇಖಕರನ್ನು ಬೆಳೆಸಿದ್ದರು. ಪ್ರಜಾವಾಣಿಯಿಂದ ನಿವೃತ್ತರಾದಮೇಲೆ ‘ಕಸ್ತೂರಿ’ ಮಾಸಪತ್ರಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದರು.

‘ಆ ಪತ್ರಿಕೋದ್ಯಮ’ ಕೃತಿಯೂ ಸೇರಿದಂತೆ ಹಲವು ನಾಟಕ, ಪ್ರಬಂಧ ಹಾಗೂ ವಿಮರ್ಶೆಗಳನ್ನೂ ಅವರು ಬರೆದಿದ್ದಾರೆ. ಹೊಸ ತಿರುವು, ಮಾಸ್ತಿಯವರ ನಾಟಕಗಳು, ಒಳನೋಟ, ಹಿಂದಣ ಹೆಜ್ಜೆ, ಅನ್ಯೋನ್ಯ, ಗುಣ ದೋಷ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಶೇಕ್ಸ್‌ಪಿಯರ್‌ನ ರೋಮಿಯೋ ಜೂಲಿಯೆಟ್, ಆಂಟನಿ ಕ್ಲಿಯೋಪಾತ್ರ, ಬರ್ಟೋಲ್ಟ್ ಬ್ರೆಕ್ಟ್‌ನ ಕಕೇಷಿಯನ್ ಚಾಕ್ ಸರ್ಕಲ್ ಮುಂತಾದ ಕೃತಿಗಳನ್ನು ಅನುವಾದ ಮಾಡಿದ್ದಾರೆ.

ಅವರಿಗೆ 2009ನೇ ಸಾಲಿನ ಖಾದ್ರಿ ಶಾಮಣ್ಣ ಪ್ರಶಸ್ತಿ, 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ಭಾಷಾ ಭಾರತಿ ಪ್ರಶಸ್ತಿ, ಟಿಎಸ್ಸಾರ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿದ್ದವು.

ಮುಖ್ಯಮಂತ್ರಿ ಸಂತಾಪ

ಜಿ ಎನ್ ರಂಗನಾಥರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ‘ಹಿರಿಯ ಲೇಖಕ, ಪತ್ರಕರ್ತ ಜಿ.ಎನ್. ರಂಗನಾಥ ರಾವ್ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ’ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...