ವಿಜಯಪುರ | ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

Date:

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ರೈತರು ಕಳೆದ 20 ವರ್ಷಗಳಿಂದ ನಿರಂತರವಾಗಿ ಉಳುವೆ ಮಾಡುತ್ತಿರುವ ಬಗರ್‌ಹುಕುಂ ಜಮೀನನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದಿಂದ ಸಿಂದಗಿಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಗೋಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಢವಳಾರ ಗ್ರಾಮದ ರಿ.ಸ.ನಂ. 191ರಲ್ಲಿ ಇರುವ 70 ಎಕರೆ ಹಾಗೂ ಸಾಸಾಬಾಳ ಗ್ರಾಮದ ರಿ.ಸ.ನಂ. 14ರಲ್ಲಿ ಇರುವ 8 ಎಕರೆ ಜಮೀನಿನಲ್ಲಿ ಸ್ಥಳೀಯ ರೈತರು ಈಗಾಗಲೇ ಸಾಗುವಳಿ ಮಾಡುತ್ತಾರೆ. ಈ ಜಮೀನುಗಳೇ ಅವರ ಕುಟುಂಬಗಳ ಮೂಲ ಆಧಾರವಾಗಿದೆ. ಅಲ್ಲದೇ ಇವರಿಗೆ ಬೇರೆ ಯಾವುದೇ ಆಸ್ತಿ ಇಲ್ಲದಿರುವುದರಿಂದ ತೀವ್ರ ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದಾರೆ.

ಹಲವಾರು ರೈತರು ಈಗಾಗಲೇ ಫಾರಂ ನಂ. 57 ನಮೂನೆಯ ಮೂಲಕ ಅರ್ಜಿ ಸಲ್ಲಿಸಿದ್ದು, ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸರ್ಕಾರ ರೈತರಿಗೆ ಬಗರ್‌ಹುಕುಂ ಸಾಗುವಳಿ ಜಮೀನು ಅನ್ನದಾತ ಹೆಸರಿನಲ್ಲಿ ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ: ಬಾಗಲಕೋಟೆ | ಸಿಬ್ಬಂದಿಗಳಿಲ್ಲದ ಬಲಕುಂದಿ ಗ್ರಾಮ ಪಂಚಾಯಿತಿಗೆ ಬೀಗ

ಈ ಸಂದರ್ಭದಲ್ಲಿ ತಾಲ್ಲೂಕಾಧ್ಯಕ್ಷ ರಮೇಶ ತಳವಾರ, ರುಕ್ಖುದ್ದೀನ್ ಹಳೇಮನಿ, ಅನೀಲ ಭಜಂತ್ರಿ, ಮಹಾದೇವ ಭಜಂತ್ರಿ, ಅಶೋಕ ಹಡಪದ, ನಿಂಗಪ್ಪ ವಡಿಗೇರಿ, ಮೈಬೂಬ ಹಳಿಮನಿ, ಸೋಮಪ್ಪ ಹರಿಜನ, ತವರು ರಾಠೋಡ, ಅಲ್ಲಾಬಕ್ಷ ಹಳೇಮನಿ, ಶಂಕರ ಬಾದನ, ಕುಪ್ಪಣ್ಣ ತಳವಾರ, ಭೀಮಶ್ಯಾ ಪವಾರ, ಲಕ್ಷ್ಮಿ ಬಾಯಿ ರಾಠೋಡ, ಕಸ್ತೂರಿಬಾಯಿ ಚವ್ಹಾಣ, ಯಲ್ಲಪ್ಪ ತಳವಾರ, ಬಾಬೂ ರಾಠೋಡ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...