ರೈಲಲ್ಲಿ ನಿದ್ರಾವಸ್ಥೆಯಲ್ಲಿಯೇ ಸಾವನ್ನಪ್ಪಿದ ವ್ಯಕ್ತಿ: 13 ಗಂಟೆ ಜೊತೆಗೇ ಪ್ರಯಾಣಿಸಿದ ಕುಟುಂಬ!

Date:

ವಿಚಿತ್ರ ಮತ್ತು ದುರಂತ ಘಟನೆಯೊಂದು ಗುಜರಾತ್‌ನ ಅಹಮದಾಬಾದ್‌ನಿಂದ ವರದಿಯಾಗಿದೆ. ವ್ಯಕ್ತಿಯೋರ್ವ ಕುಟುಂಬದೊಂದಿಗೆ ಪ್ರಯಾಣಿಸುತ್ತಿರುವಾಗ ನಿದ್ರಾವಸ್ಥೆಯಲ್ಲಿರುವಾಗಲೇ ನಿಧನ ಹೊಂದಿದ್ದು, ಇದರ ಬಗ್ಗೆ ಮಾಹಿತಿಯೇ ಇಲ್ಲದ ಪತ್ನಿ ಹಾಗೂ ಕುಟುಂಬಸ್ಥರು ಸುಮಾರು 13 ಗಂಟೆಗಳ ಕಾಲ ಜೊತೆಗೇ ಪ್ರಯಾಣಿಸಿದ ಘಟನೆ ವರದಿಯಾಗಿದೆ.

ಗುಜರಾತ್‌ನ ರಾಜಧಾನಿ ಅಹ್ಮದಾಬಾದ್‌ನಿಂದ ತೆರಳುತ್ತಿದ್ದ ಸಬರಮತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದೆ. ದಂಪತಿಗಳು ತಮ್ಮ ಮಕ್ಕಳೊಂದಿಗೆ ಸೂರತ್‌ನಿಂದ ಅಯೋಧ್ಯೆಗೆ ರೈಲು ಹತ್ತಿದ ನಂತರ ಈ ಘಟನೆ ನಡೆದಿದೆ ಎಂದು ಫ್ರೀ ಪ್ರೆಸ್ ಜರ್ನಲ್ (Free Press Journal) ವೆಬ್‌ಸೈಟ್ ವರದಿ ಮಾಡಿದೆ.

ಗಂಡ ಮಲಗಿದ್ದಲ್ಲಿ ಮೃತಪಟ್ಟಿದ್ದಾರೆ. ಆದರೆ ಪಕ್ಕದಲ್ಲೇ ಇದ್ದ ಪತ್ನಿ ಪತಿ ಮಲಗಿದ್ದಾರೆಂದು ತಿಳಿದು ಪ್ರಯಾಣ ಮುಂದುವರಿಸಿದ್ದರು. 13 ಗಂಟೆಗಳಿಂದಲೂ ಹೆಚ್ಚು ಮಲಗಿದ್ದರೂ ಕೂಡ, ಒಮ್ಮೆಯೂ ಎದ್ದಿರಲಿಲ್ಲ. ಇದರಿಂದ ಅನುಮಾನಗೊಂಡು ಎಬ್ಬಿಸಲು ಹೊರಟಾಗ ಮೃತಪಟ್ಟಿರುವುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟ ವ್ಯಕ್ತಿ ಕುಟುಂಬ ಸಮೇತ ಸೂರತ್‌ನಿಂದ ಅಯೋಧ್ಯೆಗೆ ಪ್ರಯಾಣಿಸುತ್ತಿದ್ದರು. ಸೂರತ್‌ನಲ್ಲಿ ರೈಲು ಹತ್ತಿದ ವ್ಯಕ್ತಿಯೊಂದಿಗೆ ಆತನ ಪತ್ನಿ, ಮಕ್ಕಳು ಮತ್ತು ಸಹಚರರು ಇದ್ದರು. ಆದರೆ, ರೈಲು ಹತ್ತಿದ ಸ್ವಲ್ಪ ಸಮಯದಲ್ಲೇ ಆ ವ್ಯಕ್ತಿ ತನ್ನ ಹೆಂಡತಿಯನ್ನು ಪಕ್ಕದಲ್ಲಿ ಕೂರಿಸಿಕೊಂಡು ಮಲಗಿದ್ದರು.

ಹಲವಾರು ಗಂಟೆಗಳ ನಂತರ, ವ್ಯಕ್ತಿ ಎಚ್ಚರಗೊಳ್ಳದಿದ್ದಾಗ, ಪ್ರಯಾಣಿಕರ ಕುಟುಂಬ ಮತ್ತು ಇತರರು ಅವನನ್ನು ಎಬ್ಬಿಸಲು ಪ್ರಯತ್ನಿಸಿದರು. ಆದರೆ, ಪ್ರತಿಕ್ರಿಯಿಸಲಿಲ್ಲ. ಅಲ್ಲದೇ, ದೇಹದ ಉಷ್ಣಾಂಶ ಕೂಡ ತಣ್ಣಗಾಗಿತ್ತು. ಎಬ್ಬಿಸಲು ಎಷ್ಟೇ ಪ್ರಯತ್ನಪಟ್ಟರು ಕೂಡ ವಿಫಲವಾದಾಗ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕೆಪಿಎಸ್​ಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಒಂದು ಬಾರಿ ವಯೋಮಿತಿ ಸಡಿಲಿಕೆಗೆ ಅಸ್ತು

ಮಲಗಿದ್ದಲ್ಲೇ ಹೃದಯಾಘಾತ ಆಗಿರಬಹುದು ಎಂದು ಶಂಕಿಸಲಾಗಿದೆ. ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟ ನಂತರ ರೈಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿ, ಶವವನ್ನು ಝಾನ್ಸಿ ಜಂಕ್ಷನ್‌ನಲ್ಲಿ ಇಳಿಸಲಾಯಿತು. ಈ ವೇಳೆ ಝಾನ್ಸಿಯ ವೈದ್ಯರು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು ಎಂದು ವರದಿಯಾಗಿದೆ. ಈ ಘಟನೆಯು ರೈಲಿನಲ್ಲಿದ್ದ ಪ್ರಯಾಣಿಕರು ಹಾಗೂ ಜೊತೆಗೇ ಪ್ರಯಾಣಿಸುತ್ತಿದ್ದ ಕುಟುಂಬದವರನ್ನು ಆಘಾತಕ್ಕೊಳಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...