ಯಾದಗಿರಿ | ಹತ್ತಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹ ; ರೈತರ ಪ್ರತಿಭಟನೆ

Date:

ಮುಂಗಾರು ಹತ್ತಿ ಬೆಳೆ ಖರೀದಿಗಾಗಿ ಸರ್ಕಾರಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಸುರಪುರ ಹಾಗೂ ಹುಣಸಗಿ ತಾಲೂಕು ಸಮಿತಿಗಳ ಸಾಮೂಹಿಕ ನಾಯಕತ್ವದಲ್ಲಿ ಶುಕ್ರವಾರ ತಹಶೀಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು.

ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ‘ಹತ್ತಿ ಖರೀದಿಗೆ ಕಳೆದ ಮೂರು ವರ್ಷಗಳಿಂದ ಆಗ್ರಹಿಸುತ್ತಿದ್ದರೂ ಸರ್ಕಾರದಿಂದ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದನೀಯ’ ಎಂದು ಆರೋಪಿಸಿದರು. ಪ್ರತಿಭಟನೆಯ ಬಳಿಕ ತಹಶೀಲ್ದಾರರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಮನವಿ ಸಲ್ಲಿಸಿ ರೈತ ಮುಖಂಡ ಹಣಮಂತ್ರಾಯ ಚಂದಲಾಪೂರ ಮಾತನಾಡಿ, “ಪ್ರಸ್ತುತ ಖಾಸಗಿ ವ್ಯಾಪಾರಿಗಳು ಕಡಿಮೆ ದರಕ್ಕೆ ಹತ್ತಿ ಖರೀದಿಸುತ್ತಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಬೆಂಬಲ ದರದಲ್ಲಿ ಖರೀದಿ ಕೇಂದ್ರ ತೆರೆಯುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು” ಎಂದು ಬೇಡಿಕೆ ಇಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರಕ್ಕೆ ಎನ್‌ಎಫ್‌ಐಡಬ್ಲ್ಯೂ ಆಗ್ರಹ

ಅವರು ಮುಂದುವರಿಸಿ, “ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಬಸವಸಾಗರ ಮತ್ತು ನಾರಾಯಣಪೂರ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಿರುವುದರಿಂದ ಬೇಸಿಗೆ ಬೆಳೆಗೆ ನೀರು ಬಿಡುವ ಸಲಹಾ ಸಮಿತಿಯನ್ನು ಶೀಘ್ರ ರಚಿಸಬೇಕು” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ವೆಂಕಟೇಶಗೌಡ ಕುಪಗಲ್, ಹನುಮಗೌಡ ನಾರಾಯಣಪೂರ, ತಿರುಪತಿ ಕುಪಗಲ್, ಸಾಹೇಬಗೌಡ ಮದಲಿಂಗನಾಳ, ಗದ್ದೆಪ್ಪ ನಾಗಬೇವಿನಾಳ, ದೇವಿಂದ್ರಪ್ಪ ತಿಪ್ಪನಟಗಿ, ಭೀಮಣ್ಣ ತಿಪ್ಪನಟಗಿ, ಭೀಮನಗೌಡ ಕರ್ನಾಳ, ತಿಪ್ಪಣ್ಣ ಜಾಂಪಾ, ನಾಗಪ್ಪ ಕುಪಗಲ್, ಇಮಾಮಸಾಹೇಬ ತಿಪ್ಪನಟಗಿ, ಮೌನೇಶ ಅರಳಹಳ್ಳಿ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...