ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ,ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.
ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ: Siddaramaiah | Operation Lotus | MUDA | BJP
Date:



