ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ ಅವರು, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ” ಎಂದು ಒತ್ತಾಯಿಸಿದ್ದಾರೆ.
ದೇವೇಗೌಡ್ರೆ, ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ!
Date:
ಪೋಸ್ಟ್ ಹಂಚಿಕೊಳ್ಳಿ:



